ಧಾರವಾಡ: ಧಾರವಾಡ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದು ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು 35 ವರ್ಷದ ಕಿಶನ್ ಖಾನಾವಾಲೆ ಹಾಗೂ 34 ವರ್ಷದ ಕಿರಣ್ ಮೃತ ದುರ್ದೈವಿಗಳು. ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದ ಸವಾರರ ಮೇಲೆ ಹಿಂದೆ ಬರುತ್ತಿದ್ದ ಲಾರಿ ಹರಿದು ಇಬ್ಬರೂ ಸಾವನ್ನಪ್ಪಿದ್ದಾರೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.