ವಿಜಯಪುರ: ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸೋಲಾಪುರ ರಸ್ತೆಯಲ್ಲಿರುವ ಕೃಷ್ಣ ಪ್ಯಾಲೇಸ್ ಹೋಟೆಲ್ ಹೊತ್ತಿ ಉರಿದಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಅಗ್ನಿ ಅವಘಡದಲ್ಲಿ ಹೋಟೆಲ್ ಕೃಷ್ಣ ಪ್ಯಾಲೆಸ್‌ನ ಮುಂಭಾಗ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದು, ಕೊನೆಗೂ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ಗ್ಯಾಸ್ ಲೀಕ್ ಅಥವಾ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.