ಡಿ ಕೆ ಶಿವಕುಮಾರ್  
ರಾಜ್ಯ

ಕರಾವಳಿ,‌ ಮಲೆನಾಡು ಭಾಗಕ್ಕೆ ‌ಹೊಸ ಪ್ರವಾಸೋದ್ಯಮ ನೀತಿ: ಕಾರವಾರ Airport ನಿರ್ಮಾಣಕ್ಕೆ ಆದ್ಯತೆ; ಡಿಕೆ ಶಿವಕುಮಾರ್

ನಮ್ಮ ಯುಪಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ವೇಳೆಯಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದವರಿಗೆ ಭೂಮಿ ನೀಡುವ ಕಾನೂನು ತಂದಿತ್ತು. ಇಲ್ಲಿ ರೈತರು ಭೂಮಿಗಾಗಿ ಅರ್ಜಿ ಹಾಕಿದ್ದಾರೆ

ಕಾರವಾರ: ಮಂಗಳೂರು, ಉಡುಪಿ,‌ ಉತ್ತರ ಕನ್ನಡ‌‌ ಜಿಲ್ಲೆಯ ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಹೊಸ ಪ್ರವಾಸೋದ್ಯಮ ನೀತಿ ಮಾಡಬೇಕು ಎನ್ನುವ ಆಲೋಚನೆ ಸರ್ಕಾರದ‌ ಮುಂದಿದೆ. ಜನವರಿ 10ರಂದು ಮಂಗಳೂರಿನಲ್ಲಿ ಈ‌ ಬಗ್ಗೆ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮಲೆನಾಡು ಪ್ರದೇಶದ ಜಿಲ್ಲಾಧಿಕಾರಿಗಳ ಸಭೆ ನಡೆಸಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕಾರವಾರ ಶಾಸಕ ಸತೀಶ್ ಸೈಲ್ ಅವರ ಕಚೇರಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾನುವಾರ ರಾತ್ರಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ಈಗಾಗಲೇ ಒಂದು ಸುತ್ತಿನ ಮಾತುಕತೆಯನ್ನು ಈ ಭಾಗದ ಶಾಸಕರ ಜೊತೆ ನಡೆಸಿದ್ದೇನೆ. ಮಲೆನಾಡು ಹಾಗೂ ಕರಾವಳಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಪಿಪಿಪಿ ಮಾದರಿಯಲ್ಲಿ ಹೊಸ ನೀತಿ ತರಲಾಗುವುದು. ಖಾಸಗಿಯವರಿಗೆ ಹೆಚ್ಚಿನ ಬಂಡವಾಳ ಹೂಡಿಕೆಗೆ ಅವಕಾಶ ನೀಡಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಲಾಗುವುದು‌" ಎಂದರು.

ಈ ಸಭೆಗೆ ಬಂಡವಾಳ ಹೂಡಿಕೆದಾರರಿಗೆ ಆಹ್ವಾನ ನೀಡಲಾಗುತ್ತಿದೆ. ಹೊರದೇಶದವರಿಗೂ ಆಹ್ವಾನ ನೀಡಲಾಗುವುದು.‌ ಇವರು ತಮ್ಮ ಬೇಡಿಕೆ ಜೊತೆಗೆ ಸಲಹೆ ಸೂಚನೆಗಳನ್ನು ನೀಡಬಹುದು. ಬಂಡವಾಳ ಹೂಡಿಕೆ ಮಾಡುವವರನ್ನು ಆಹ್ವಾನಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ" ಎಂದರು.

ಮುಖ್ಯಮಂತ್ರಿಯವರು, ಪ್ರವಾಸೋದ್ಯಮ ಸಚಿವರು, ವಿಧಾನಸಭೆ ಸಭಾಧ್ಯಕ್ಷರು ಈ ಸಭೆಯಲ್ಲಿ ಇರಲಿದ್ದಾರೆ.‌ ನಾನೇ ಖುದ್ದಾಗಿ ಇದರ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಸಂಸತ್ ಸದಸ್ಯರು, ಶಾಸಕರು, ಸ್ಥಳೀಯ ಸಂಸ್ಥೆಗಳ ಸದಸ್ಯರಿಗೂ ಆಹ್ವಾನ ನೀಡುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ" ಎಂದರು.

ಸಿಆರ್ ಜೆಡ್ ಅನುಮತಿ ಕೇಂದ್ರ ಸರ್ಕಾರ ನೀಡಬೇಕಾಗುತ್ತದೆ ಇದನ್ನು ಪಡೆಯದೇ ಪ್ರವಾಸೋದ್ಯಮ ಅಭಿವೃದ್ಧಿಗೆ ಸಭೆ ನಡೆಸಿದರೆ ಪ್ರಯೋಜನ ಏನು ಎಂದು ಕೇಳಿದಾಗ, "ಇದರ ಬಗ್ಗೆ ಚರ್ಚೆ ನಡೆಸಲು ಎಂದೇ ಸಭೆಗೆ ಕೇಂದ್ರದ ಅಧಿಕಾರಿಗಳನ್ನು ಆಹ್ವಾನಿಸಲಾಗಿದೆ. ಗೋವಾದಿಂದ ಬರುವಾಗ ನೋಡಿಕೊಂಡು ಬಂದೆ. ಅಲ್ಲಿಗೆ ಒಂದು ಕಾನುನು ಹಾಗೂ ಕರ್ನಾಟಕಕ್ಕೆ ಒಂದು ಕಾನುನು ಮಾಡಲು ಆಗುವುದಿಲ್ಲ. ಕಾನೂನು ಚೌಕಟ್ಟಿನಲ್ಲೇ ಕೆಲಸ ಮಾಡಲಾಗುವುದು. ಸಮುದ್ರ ತೀರ ರಕ್ಷಣೆಗೆ ಏನು ಗೈಡ್ ಲೈನ್ ಇದೆ ಅದರಂತೆ ಕೆಲಸ ಮಾಡುತ್ತೇವೆ" ಎಂದರು.

ಈ ಭಾಗದ ಯುವ ಜನತೆ ಮುಂಬೈ, ಗೋವಾ, ಬೆಂಗಳೂರು, ಸೌದಿ ಕಡೆಗೆ ಕೆಲಸ ಅರಸಿ ಹೋಗುತ್ತಿದ್ದಾರೆ. ಇಲ್ಲಿನ ಮಾನವ ಸಂಪನ್ಮೂಲ ಇಲ್ಲಿಗೆ ಹೆಚ್ಚು ಬಳಕೆಯಾಗಬೇಕು. ಕಾರವಾರ ಏರ್ ಪೋರ್ಟ್ ನಿರ್ಮಾಣಕ್ಕೆ ಭೂಮಿ ನೀಡಿಕೆ, ಸಂತ್ರಸ್ತರಿಗೆ ಪರಿಹಾರ ಸೇರಿದಂತೆ ಇತರೆ ಸಂಗತಿಗಳಿಗೆ ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ನೀಡಲಾಗಿದೆ. ನೌಕಾದಳದವರ ಜೊತೆ ಒಪ್ಪಂದ‌ ಮಾಡಿಕೊಂಡು ಇಲ್ಲಿ ಅಭಿವೃದ್ಧಿ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ" ಎಂದರು.

"ಶಾಸಕರಾದ ಸತೀಶ್ ಸೈಲ್ ಅವರು ಈ ಭಾಗಕ್ಕೆ 210 ಕೋಟಿ ರೂಪಾಯಿ ಮೊತ್ತದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಬೇಡಿಕೆ ಸಿದ್ಧಪಡಿಸಿದ್ದಾರೆ. ಅನೇಕ ಅಭಿವೃದ್ಧಿ ಯೋಜನೆಗಳ ಪ್ರಸ್ತಾವನೆಯನ್ನು ಸಹ ಸಲ್ಲಿಸಿದ್ದಾರೆ. ಒಂದಷ್ಟು ಶಿಥಿಲಾವಸ್ಥೆಯ ಕಟ್ಟಡಗಳನ್ನು ಒಡೆದು ಹಾಕಿ ನೂತನ ಕಟ್ಟಡಗಳ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ" ಎಂದರು.

"ನಮ್ಮ ಯುಪಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ವೇಳೆಯಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದವರಿಗೆ ಭೂಮಿ ನೀಡುವ ಕಾನೂನು ತಂದಿತ್ತು. ಇಲ್ಲಿ ರೈತರು ಭೂಮಿಗಾಗಿ ಅರ್ಜಿ ಹಾಕಿದ್ದಾರೆ. ಅರಣ್ಯ ಭೂಮಿಗಳಲ್ಲಿ ವ್ಯವಸಾಯ ಮಾಡುತ್ತಿರುವವರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು ಎಂದು ಡಿಎಫ್ ಓಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ" ಎಂದರು.

ಪಂಚಾಯತಿ ಮಟ್ಟದಲ್ಲಿಯೇ ಇದರ ಬಗ್ಗೆ ರೆಸಲ್ಯೂಷನ್ ಹೊರಡಿಸಿ ಮೂರು ತಲೆಮಾರಿನಿಂದ ಇದ್ದಾರೆ ಎಂದು ಪ್ರಮಾಣ ಪತ್ರ ನೀಡಿದರೆ ಇದಕ್ಕಿಂತ ದೊಡ್ಡದಾದ ದಾಖಲೆ ಮತ್ತೊಂದಿಲ್ಲ. ಯಾರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಭೀಮಣ್ಣ ನಾಯ್ಕ, ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ್ ವೈದ್ಯ ಅವರು ಸೇರಿದಂತೆ ಎಲ್ಲಾ ಶಾಸಕರು ಗಮನ ಸೆಳೆದಿದ್ದಾರೆ" ಎಂದರು.

"ಮೂರು ಎಕರೆ ಒಳಗೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಬದುಕುತ್ತಿರುವ ಬಡವರು, ರೈತರನ್ನು ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿ. ಇದು ನಮ್ಮ ಪಕ್ಷ ಜಾರಿಗೆ ತಂದ ಕಾನೂನು ಅದಕ್ಕೆ ನಮಗೆ ಇದರ ಬಗ್ಗೆ ಬದ್ದತೆ ಇದೆ. ಬುಡಕಟ್ಟು ಸಮುದಾಯಗಳಿಗೆ 25 ವರ್ಷ, ಇತರೇ ಸಮುದಾಯದವರಿಗೆ 75 ವರ್ಷ ಅವಕಾಶವಿದೆ" ಎಂದರು.

ನದಿ ಜೋಡಣೆ ವಿಚಾರವಾಗಿ ಕೇಳಿದಾಗ, "ಬೇಡ್ತಿ ಮತ್ತು ವರದಾ ನದಿ ಜೋಡಣೆ ವಿಚಾರವಾಗಿ ಈಗಾಗಲೇ ಡಿಪಿಆರ್ ತಯಾರು ಮಾಡಲು ಅನುಮತಿ ನೀಡಿ ಸಹಿ ಕೂಡ ಮಾಡಿದ್ದೇವೆ. ನಮ್ಮ ನೀರನ್ನು ನಾವು ಬಳಸಿಕೊಳ್ಳಲು ಬದ್ದವಾಗಿದ್ದೇವೆ. ಕೇಂದ್ರ ಸರ್ಕಾರ ಶೇ.90, ರಾಜ್ಯ ಸರ್ಕಾರ ಶೇ.10 ರಷ್ಟು ಅನುದಾನ ನೀಡಲಿದೆ" ಎಂದರು.

ಸ್ಥಳೀಯ ಶಾಸಕರ ವಿರೋಧದ ಬಗ್ಗೆ ಕೇಳಿದಾಗ, "ಯಾರು ಏನೇ ವಿರೋಧ ಮಾಡುತ್ತಾರೋ ಬಿಡುತ್ತಾರೋ ಮುಖ್ಯವಲ್ಲ. ನಮ್ಮ ಜನರಿಗೆ, ರೈತರಿಗೆ ಇದರಿಂದ ಅನುಕೂಲವಾಗುವುದು ಮುಖ್ಯ. ಅಂತರ್ಜಲ ಹೆಚ್ಚಾಗಬೇಕು. ಯಾವುದೇ ಒಳ್ಳೆ ಕೆಲಸ ಆಗುವಾಗ ವಿರೋಧ ವ್ಯಕ್ತ ಮಾಡುತ್ತಾರೆ. ಸಂತ್ರಸ್ತರಿಗೆ ಕಾನೂನು ಪ್ರಕಾರ ಪರಿಹಾರ ನೀಡಲಾಗುವುದು" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘Parivar together’: ಪಿಂಪ್ರಿ-ಚಿಂಚ್‌ವಾಡ್ ಪಾಲಿಕೆ ಚುನಾವಣೆ; ಶರದ್ ಪವಾರ್ ಜೊತೆ ಮೈತ್ರಿ ಘೋಷಿಸಿದ ಅಜಿತ್ ಪವಾರ್!

'ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿದ್ದಾರೆ: ಮುಕ್ಕಾಲು ಪ್ರಪಂಚ ಗೆದ್ದ ಅಲೆಕ್ಸಾಂಡರ್ ಶಾಶ್ವತ ಇರಲಿಲ್ಲ, ಸದ್ದಾಂ ಹುಸೇನ್ ಅವಿತುಕೊಂಡ'

ವೈಕುಂಠ ಏಕಾದಶಿ ಯಾವಾಗ: ವ್ರತ ಮಹಿಮೆ ಏನು; ಏಕಾದಶಿಯಂದೇ ವೈಕುಂಠ ದ್ವಾರ ತೆರೆಯುವುದೇಕೆ?

ರೋಹಿಣಿ ನಕ್ಷತ್ರದವರಿಗೆ ಕೃಷ್ಣನಂತೆ ಅನೇಕ ಪತ್ನಿಯರು ಇರ್ತಾರಾ: ಪುನರ್ವಸು ನಕ್ಷತ್ರದಲ್ಲಿ ಜನಿಸಿದರೆ ರಾಮನಂತೆ ವನವಾಸವೇ?

ಚಿತ್ರದುರ್ಗ ಬಸ್ ದುರಂತ: DNA ವರದಿ ಆಧರಿಸಿ ಕುಟುಂಬಗಳಿಗೆ ಮೃತದೇಹ ಹಸ್ತಾಂತರ

SCROLL FOR NEXT