ಖಲೇದಾ ಜಿಯಾ  
ರಾಜ್ಯ

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಖಲೀದಾ ಜಿಯಾ ನಿಧನ

ಖಲೇದಾ ಜಿಯಾ ಅವರು ಲಿವರ್ ಸಿರೋಸಿಸ್, ಸಂಧಿವಾತ, ಮಧುಮೇಹ ಹಾಗೂ ಹೃದಯಕ್ಕೆ ಸಂಬಂಧಿಸಿದ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಮಂತ್ರಿಯಾಗಿದ್ದ ಹಾಗೂ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (BNP) ನಾಯಕಿ ಬೇಗಂ ಖಲೇದಾ ಜಿಯಾ ಅವರು ಮಂಗಳವಾರ ನಿಧನರಾಗಿದ್ದಾರೆ.

ವರದಿಗಳ ಪ್ರಕಾರ, ಖಲೇದಾ ಜಿಯಾ ಅವರು ಲಿವರ್ ಸಿರೋಸಿಸ್, ಸಂಧಿವಾತ, ಮಧುಮೇಹ ಹಾಗೂ ಹೃದಯಕ್ಕೆ ಸಂಬಂಧಿಸಿದ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದ್ದು, ವಯೋಸಹಜ ಕಾಯಿಲೆಗಳ ತೀವ್ರತೆಯಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ.

ಈ ಕುರಿತು ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಖಲೇದಾ ಜಿಯಾ ಅವರ ನಿಧನವನ್ನು ಖಚಿತಪಡಿಸಿದೆ.

ಬಿಎನ್'ಪಿ ಅಧ್ಯಕ್ಷೆ ಹಾಗೂ ಮಾಜಿ ಪ್ರಧಾನಮಂತ್ರಿ ಖಲೇದಾ ಜಿಯಾ ಇಂದು ಬೆಳಗ್ಗೆ ನಿಧನರಾದರು. ಅವರ ಆತ್ಮಕ್ಕೆ ಶಾಂತಿ ಪ್ರಾರ್ಥಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಖಲೇದಾ ಜಿಯಾ ಅವರು ನವೆಂಬರ್ 23ರಂದು ಢಾಕಾದ ಎವರ್‌ಕೇರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಡಿಸೆಂಬರ್ 11ರಂದು ಅವರ ಆರೋಗ್ಯ ಗಂಭೀರವಾಗುತ್ತಿದ್ದಂತೆ ಅವರಿಗೆ ವೆಂಟಿಲೇಟರ್ ಸಹಾಯ ಒದಗಿಸಲಾಗಿತ್ತು. ದಿನ ಕಳೆಯುತ್ತಿದ್ದಂತೆ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷಿಣಿಸಿದ್ದರಿಂದ, ಬದುಕುಳಿಯುವುದು ಕಷ್ಟಕರ ಎನ್ನಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಖಲೇದಾ ಜಿಯಾ 1991–1996 ಹಾಗೂ 2001–2006ರ ಅವಧಿಯಲ್ಲಿ ಬಾಂಗ್ಲಾದೇಶದ ಪ್ರಧಾನಿಯಾಗಿದ್ದರು. ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಅವರು ರಾಜಕೀಯದಲ್ಲಿ ಮಹತ್ವದ ಪಾತ್ರವಹಿಸಿದ್ದರು. ಶೇಖ್ ಹಸೀನಾ ಅವರ ಪ್ರಮುಖ ರಾಜಕೀಯ ಪ್ರತಿಸ್ಪರ್ಧಿಯೂ ಆಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kogilu layout Demolition: ಮಾನವೀಯತೆ ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡಲಾಗುವುದು; ಸಿಎಂ ಸಿದ್ದರಾಮಯ್ಯ

ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ: ತಿಮ್ಮಪ್ಪನ ದರ್ಶನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ; ಹಲವೆಡೆ ವಾಹನ ಸಂಚಾರ ನಿರ್ಬಂಧ

ನಮಗೆ ಶಕ್ತಿ ಇಲ್ಲ ಅದಕ್ಕೆ NDA ಜತೆ ಹೋಗಿದ್ದೀವಿ. ನೀವ್ಯಾಕೆ ಸ್ಟಾಲಿನ್‌ ಮನೆ ಬಾಗಿಲು ಬಡಿತೀರಾ?

P.Gಯಲ್ಲಿ LPG ಸಿಲಿಂಡರ್ ಸ್ಫೋಟ: ಓರ್ವ ಯುವಕ ಸಾವು, ಮೂವರಿಗೆ ಗಾಯ

ನಮ್ಮತ್ತ ಎಷ್ಟೇ ಬೆರಳು ತೋರಿದರೂ, ಅಲ್ಪಸಂಖ್ಯಾತರ ಮೇಲೆ ನಿಮ್ಮ ದೌರ್ಜನ್ಯ ಮುಚ್ಚಿಡಲು ಸಾಧ್ಯವಿಲ್ಲ- ಪಾಕ್ ಗೆ ಭಾರತದ ತಿರುಗೇಟು!

SCROLL FOR NEXT