ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮಾಚರಣೆಗೆ ಸಿಲಿಕಾನ್ ಸಿಟಿ ಸಜ್ಜಾಗಿದ್ದು, ನಗರದ ಪ್ರಮುಖ ಸ್ಥಳಗಳಾಗಿರುವ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ.
ಈ ಎರಡು ರಸ್ತೆಗಳ ಮೇಲಿನ ಕಣ್ಣಾವಲಿಗೆ ಪ್ರತ್ಯೇಕ ಸಿಸಿಟಿವಿ ನಿಯಂತ್ರಣ ಕೊಠಡಿ ತೆರೆಯಲಾಗಿದ್ದು, ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್ ಗಳಲ್ಲಿ ಸುಮಾರು 3,400 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಲ್ಲದೆಚ ಕೃತಕ ಬುದ್ದಿಮತ್ತೆ (ಎಐ) ಕ್ಯಾಮೆರಾ ಬಳಸಿ ಕಣ್ಣಿಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕ್ಯಾಮೆರಾಗಳ ಪೈಕಿ 400 ಪೊಲೀಸರು ಹಾಗೂ 3 ಸಾವಿರ ಖಾಸಗಿಯವರಿಗೆ ಸೇರಿದ ಕ್ಯಾಮೆರಾಗಳಾಗಿವೆ. ಹೊಸ ವರ್ಷಾಚರಣೆ ವೇಳೆ ಗುಂಪಿನಲ್ಲಿ ಸಣ್ಣ ಗಲಭೆ ನಡೆದರೂ ಮಾಹಿತಿ ಪಡೆಯಬಹುದು. ಪ್ರತಿ 50 ಮೀಟರ್‌ಗೂ ಕ್ಯಾಮೆರಾಗಳಿದ್ದು ಸಂಪೂರ್ಣ ಕಣ್ಣಾವಲಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಕೇಂದ್ರ ವಿಭಾಗಕ್ಕೆ ಮಾತ್ರವಲ್ಲದೆ ಈ ಕ್ಯಾಮೆ ರಾಗಳನ್ನು ಪೊಲೀಸ್ ಆಯುಕ್ತರ ಕಚೇರಿಗೆ ಸಹ ಸಂಪರ್ಕ ಕಲ್ಪಿಸಲಾಗಿದೆ. ಪ್ರತಿ ಕ್ಷಣದ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಹೊಸ ಸಂಭ್ರಮಾಚರಣೆಯ ದಿನದಂದು ಕಾನೂನು ಸುವ್ಯವಸ್ಥೆಯ 14 ಸಾವಿರ ಪೊಲೀಸರು, 2500 ಸಂಚಾರ ಪೊಲೀಸರು, 88 ಕೆಎಸ್‌ಆರ್‌ಪಿ ತುಕಡಿ, 21 ಸಿಎಆರ್, 266 ಹೊಯ್ಸಳ ವಾಹನ, 250 ಕೋಬ್ರಾ ವಾಹನಗಳನ್ನು ನಿಯೋಜಿಸಲಾಗುತ್ತಿದೆ. 400 ಟ್ರಾಫಿಕ್ ವಾರ್ಡನ್ ಗಳನ್ನು ನಿಯೋಜಿಸಲಾಗಿದೆ. ಜನ ದಟ್ಟಣೆ ನಿಯಂತ್ರಿಸಲು ವಾಟರ್‌ಜೆಟ್, ಸಿವಿಲ್ ಡಿಫೆನ್ಸ್, ಹೋಮ್ ಗಾರ್ಡ್ ಸೇರಿದಂತೆ ಒಟ್ಟು 20 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.
ಸಂಭ್ರಮಾಚರಣೆ ನಡೆಯುವ ಸ್ಥಳಗಳಲ್ಲಿ 400 ಕ್ಕೂ ಹೆಚ್ಚು ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಸೇಫ್ಟಿ ಶೆಲ್ಟರ್‌ಗಳು, ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ಜನದಟ್ಟಣೆ ಇರುವ ಕಡೆ ಡೋನ್ ಕ್ಯಾಮೆರಾ ಗಳಿಂದ ಪೊಲೀಸರು ನಿಗಾವಹಿಸಲಿದ್ದಾರೆ.
ಈಗಾಗಲೇ ಬಾರ್, ರೆಸ್ಟೋರೆಂಟ್, ಮಾಲ್‌ಗಳಮಾಲೀಕರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಎಂ.ಜಿ ರಸ್ತೆ, ಬ್ರಿಗೆಡ್‌ಸ್ತೆಗಳಲ್ಲಿ ಇಂದಿರಾನಗರ, ಕೋರಮಂಗಲ, ಎಲೆಕ್ಟ್ರಾನಿಕ್ ಸಿಟಿಯ ಸೇರಿದಂತೆ ಇತರೆ ಕಡೆಗಳಲ್ಲಿ ಇರುವೆ ಬಾರ್, ಪಬ್, ಹೋಟೆಲ್, ಲಾಡ್ಜ್‌ಗಳಿಗೆ ಪೊಲೀಸರು ಭೇಟಿ ನೀಡಿ ಕೈಗೊಂಡಿರುವ ಭದ್ರತೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಎಐ ಕ್ಯಾಮೆರಾಗಳ ಹದ್ದಿನ ಕಣ್ಣು: ಮುಖಚರ್ಯೆ ಗುರುತಿಸುವ ಎಐ ಕ್ಯಾಮೆರಾಗಳನ್ನು ಅಳವಡಿಸ ಲಾಗಿದೆ. ಅಪರಾಧ ಚಟುವಟಿಕೆ ಹಿನ್ನೆಲೆಯುಳ್ಳವರ ಮಾಹಿತಿ ಎಐ ಕ್ಯಾಮೆರಾದಿಂದ ಗೊತ್ತಾಗಲಿದೆ. ಅಂಥವರು ಕಂಡು ಬಂದರೆ ಕೂಡಲೇ ಎಐ ಕ್ಯಾಮೆರಾ ಎಚ್ಚರಿಕೆ ನೀಡಲಿದೆ.
ಆಂಬ್ಯುಲೆನ್ಸ್ ವಾಹನಗಳು, ಟ್ರಾ ಫಿಕ್ ಸಮಸ್ಯೆ ಸೇರಿದಂತೆ ಜನಗಳಿಗೆ ಮಾಹಿತಿ ಸಿಗಲು ಕ್ಯೂಆರ್‌ಡ್ ಮೂಲಕ ಮಾಹಿತಿ ಪಡೆಯಬಹುದು. ಇದೇ ಮೊದಲ ಬಾರಿಗೆ ಹೀಟ್ ಮ್ಯಾಪ್' ಮಾಡಲಾಗಿದೆ. ಅತೀ ಹೆಚ್ಚು ಜನ ಸೇರಿರುವ ಸ್ಥಳಗಳನ್ನು ಕೆಂಪು ಬಣ್ಣದಿಂದ ಗುರುತಿಸಲಾಗುತ್ತದೆ. ಹಳದಿ ಬಣ್ಣದಿಂದ ಗುರುತಿಸುವ ಸ್ಥಳಗಳನ್ನು ಹೆಚ್ಚಿನ ಜನ ಸೇರುತ್ತಿರುವುದನ್ನು ಸೂಚಿಸುತ್ತದೆ. ಹಸಿರು ಬಣ್ಣ ಇರುವುದು ಕಡಿಮೆ ಜನ ಇರುವುದನ್ನು ಗುರುತಿಸ ಬಹುದು. ಇದನ್ನು ಕಮಾಂಡ್ ಸೆಂಟರ್‌ನಿಂದ ನಿಗಾ ವಹಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಈ ನಡುವೆ ನಗರದ ಕೆ.ಆರ್. ಮಾರು ಕಟ್ಟೆ, ಯಶವಂತಪುರ, ಹೆಬ್ಬಾಳ, ಪೀಣ್ಯ, ಜಯನಗರ ಸೇರಿದಂತೆ ಪ್ರಮುಖ ಪೈಓವರ್‌ಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬುಧವಾರ ರಾತ್ರಿ ಬಂದ್ ಮಾಡಲಾಗುತ್ತದೆ ಎಂದೂ ತಿಳಿಸಿದ್ದಾರೆ.
ವಾಹನ ಸಂಚಾರ ನಿರ್ಬಂಧ (ಡಿ.31ರ ರಾತ್ರಿ 8ರಿಂದ ಮಧ್ಯರಾತ್ರಿ 2ರವರೆಗೆ)
ಎಂ.ಜಿ.ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಮೆಯೋ ಹಾಲ್ ಬಳಿಯ ರೆಸಿಡೆನ್ಸಿ ರಸ್ತೆ ಜಂಕ್ಷನ್‌ವರೆಗೆ.
ಬ್ರಿಗೇಡ್ ರಸ್ತೆ: ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಅಪೇರಾ ಜಂಕ್ಷನ್
ಚರ್ಚ್ ಸ್ಟ್ರೀಟ್: ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್‌ವರೆಗೆ.
ರೆಸಿಡೆನ್ಸಿ ರಸ್ತೆ, ಆಶೀರ್ವಾದಮ್ ಜಂಕ್ಷನ್‌ನಿಂದ ಮೆಯೋ ಹಾಲ್ ಜಂಕ್ಷನ್
ಮ್ಯೂಸಿಯಂ ರಸ್ತೆಯ ಎಂ.ಜಿ.ರಸ್ತೆ ಜಂಕ್ಷನ್‌ನಿಂದ ಹಳೇ ಮದ್ರಾಸ್ ಬ್ಯಾಂಕ್ ರಸ್ತೆ (ಎಸ್‌ಬಿಐ) ವೃತ್ತದವರೆಗೆ
ರೆಸ್ಟ್ ಹೌಸ್ ರಸ್ತೆಯಲ್ಲಿಮ್ಯೂಸಿಯಂ ರಸ್ತೆ ಜಂಕ್ಷನ್, ಬ್ರಿಗೇಡ್ ರಸ್ತೆ ಜಂಕ್ಷನ್‌ವರೆಗೆ
ರೆಸಿಡೆನ್ಸಿ ಕ್ರಾಸ್ ರಸ್ತೆಯಲ್ಲಿರೆಸಿಡೆನ್ಸಿ ರಸ್ತೆ ಜಂಕ್ಷನ್, ಎಂ.ಜಿ. ರಸ್ತೆ ಜಂಕ್ಷನ್ (ಶಂಕರ್‌ನಾಗ್ ಚಿತ್ರಮಂದಿರವರೆಗೆ)
ವಾಹನ ನಿಲುಗಡೆ ನಿಷೇಧ (ಡಿ.31 ಸಾಯಂಕಾಲ 4ರಿಂದ ಮುಂಜಾನೆ 3)
ಎಂ.ಜಿ ರಸ್ತೆ: ಅನಿಲ್ ಕುಂಬ್ಳೆ ವೃತದಿಂದ ಟ್ರಿನಿಟಿ ವೃತ್ತ
ಬ್ರಿಗೇಡ್ ರಸ್ತೆ: ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಓಲ್ಡ... ಪಿ.ಎಸ್. ಜಂಕ್ಷನ್
ಚರ್ಚ್ ಸ್ಟ್ರೀಟ್: ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಸೇಂಟ್‌ಮಾರ್ಕ್ಸ್ ರಸ್ತೆ ಜಂಕ್ಷನ್
ರೆಸ್ಟ್‌ಹೌಸ್ ರಸ್ತೆ: ಬ್ರಿಗೇಡ್ ರಸ್ತೆ ಜಂಕ್ಷನ್, ಮ್ಯೂಸಿಯಂ ರಸ್ತೆ ಜಂಕ್ಷನ್
ಮ್ಯೂಸಿಯಂ ರಸ್ತೆ: ಎಂ.ಜಿ ರಸ್ತೆ ಜಂಕ್ಷನ್, ಹಳೆ ಮದ್ರಾಸ್ ಬ್ಯಾಂಕ್ ರಸ್ತೆ (ಎಸ್.ಬಿ.ಐ) ವೃತ್ತ
ರೆಸಿಡೆನ್ಸಿ ರಸ್ತೆ: ಆಶೀರ್ವಾದಮ್ ಜಂಕ್ಷನ್‌ನಿಂದ ಮೆಯೋ ಹಾಲ್ ಜಂಕ್ಷನ್‌ವರೆಗೆ
ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ
ಕ್ವೀನ್ಸ್ ವೃತ್ತದ ಕಡೆಯಿಂದ ಹಲಸೂರು ಹಾಗೂ ಮುಂದಕ್ಕೆ ಹೋಗುವ ವಾಹನಗಳು: ಅನಿಲ್ ಕುಂಬ್ಳೆ ವೃತ್ತದಲ್ಲಿಎಡ ತಿರುವು ಪಡೆದು ಸೆಂಟ್ರಲ್ ಸ್ಟ್ರೀಟ್-ಬಿ.ಆರ್.ವಿ. ಜಂಕ್ಷನ್- ಬಲ ತಿರುವು ಕಬ್ಬನ್ ರಸ್ತೆ ಮೂಲಕ ಸಂಚರಿಸಿ ವೆಬ್ ಜಂಕ್ಷನ್ ಬಳಿ ಎಂ.ಜಿ. ರಸ್ತೆಯನ್ನು ಸೇರಿ ಮುಂದೆ ಸಾಗಬಹುದು.
ಹಲಸೂರು ಕಡೆಯಿಂದ ಕಂಟೋನ್ಮೆಂಟ್ ಕಡೆಗೆ ಹೋಗುವಂತಹ ವಾಹನಗಳು: ಟ್ರಿನಿಟಿ ವೃತ್ತದಲ್ಲಿಬಲ ತಿರುವು ಪಡೆದು ಹಲಸೂರು ರಸ್ತೆ -ಡಿಕನ್ಸನ್ ರಸ್ತೆ ಮಾರ್ಗವಾಗಿ ಸಂಚರಿಸಿ ಕಬ್ಬನ್ ರಸ್ತೆ ಸೇರಿ ಮುಂದೆ ಸಾಗಬಹುದು.
ಈಜಿಪುರ ಕಡೆಯಿಂದ ಬರುವ ವಾಹನಗಳು : ಇಂಡಿಯಾ ಗ್ಯಾರೇಜ್ ಬಳಿ ಬಲ ತಿರುವು ಪಡೆದು, ಎ.ಎಸ್.ಸಿ. ಸೆಂಟರ್‌ನಲ್ಲಿಎಡತಿರುವು ಪಡೆದು ಟ್ರಿನಿಟಿ ಮೂಲಕ ಮುಂದೆ ಸಾಗಬೇಕು.
ಎಚ್‌ಎಎಲ್ ಕಡೆಯಿಂದ ಬರುವ ವಾಹನಗಳು: ಎಎಸ್‌ಸಿ ಸೆಂಟರ್‌ನಲ್ಲಿಬಲತಿರುವು ಪಡೆದು ಟ್ರಿನಿಟಿ ಮೂಲಕ ಮುಂದೆ ಸಾಗುವುದು.
ಈ ಸ್ಥಳಗಳಲ್ಲಿ ವಾಹನ ನಿಲ್ಲಿಸಿದರೆ ದಂಡ ಗ್ಯಾರಂಟಿ..!
ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸ್ಟ್ ಹೌಸ್ ರಸ್ತೆ, ಚರ್ಚ್ ಸ್ಟ್ರೀಟ್, ರೆಸಿಡೆನ್ಸಿ, ರಸ್ತೆ - ಸೇಂಟ್ ಮಾರ್ಕ್ಸ್ ರಸ್ತೆಗಳಲ್ಲಿ ನಿಲ್ಲಿಸಿದಂತಹ ವಾಹನಗಳ ಚಾಲಕರು/ಮಾಲೀಕರು ಡಿ.31ರ ಸಾಯಂಕಾಲದೊಳಗೆ ತೆರವು ಮಾಡಬೇಕು, ಇಲ್ಲದಿದ್ದರೆ ದಂಡ ವಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಪಾರ್ಕಿಂಗ್ ಸ್ಥಳಗಳ ಕುರಿತಂತೆಯೂ ಮಾಹಿತಿ ನೀಡಿದ್ದಾರೆ.
ವಾಹನಗಳ ಪಾರ್ಕಿಂಗ್ ಸ್ಥಳ ಇಂತಿದೆ..
ಶಿವಾಜಿನಗರ ಬಿ.ಎಂ.ಟಿ.ಸಿ ಶಾಪಿಂಗ್ ಕಾಂಪ್ಲೆಕ್ಸ್‌ನ 1ನೇ ಮಹಡಿ
ಯು.ಬಿ. ಸಿಟಿ, ಗರುಡಾ ಮಾಲ್, ಕಾಮರಾಜ್ ರಸ್ತೆ (ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್‌ವರೆಗೆ)
ಅನಿಲ್ ಕುಂಬ್ಳೆ ಸರ್ಕಲ್
ಮೆಯೋ ಹಾಲ್ ಜಂಕ್ಷನ್.
ಡೆಕಥ್ಲಾನ್ (ಬ್ರಿಗೇಡ್ ರಸ್ತೆ)
ಟ್ರಿನಿಟಿ ಸರ್ಕಲ್
ಹಾಸ್ಮಟ್ ಆಸ್ಪತ್ರೆ
ಆಶೀರ್ವಾದಮ್ ಜಂಕ್ಷನ್