ಬೆಂಗಳೂರು: ಹೊಸ ವರ್ಷ 2026 ನ್ನು ದೇಶಾದ್ಯಂತ ಸಂಭ್ರಮದಿಂದ ಸ್ವಾಗತಿಸಲಾಗಿದೆ. ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲದಲ್ಲಿ ಸಂಭ್ರಮಾಚರಣೆ ನಡೆದಿದ್ದು, ಯುವಜನತೆ ಕೇಕ್ ಕತ್ತರಿಸಿ ಹೊಸ ವರ್ಷವನ್ನು ಸ್ವಾಗತಿಸಿದರು.
ಈ ಮಧ್ಯೆ ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಅಹಿತಕರ ಘಟನೆಯೊಂದು ನಡೆದಿದೆ. ಕುಡಿದ ಮತ್ತಿನಲ್ಲಿ ಓರ್ವ ವ್ಯಕ್ತಿ ಮಹಿಳಾ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿರುವಂತಹ ಘಟನೆ ನಡೆದಿದೆ. ಸದ್ಯ ಆತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ದೆಹಲಿ, ಅಹಮದಾಬಾದ್, ಕೋಲ್ಕತ್ತಾ ಸೇರಿದಂತೆ ದೇಶದ ಹಲವು ಪ್ರಮುಖ ನಗರಗಳಲ್ಲಿ ಪಟಾಕಿ ಸಿಡಿಸಿ ಹೊಸ ವರ್ಷವನ್ನು ಸ್ವಾಗತಿಸಲಾಯಿತು.
ಹೊಸ ವರ್ಷಾಚರಣೆ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ಪೊಲೀಸರು ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ. ನಗರದಾದ್ಯಂತ 20,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಚ್ ಸ್ಟ್ರೀಟ್ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ 6,000ಕ್ಕೂ ಹೆಚ್ಚು ಸಿಬ್ಬಂದಿ ಕಣ್ಗಾವಲಿರಲಿದೆ.