ಸಚಿವ ರಾಮಲಿಂಗಾ ರೆಡ್ಡಿ. 
ರಾಜ್ಯ

ಚಲಿಸುತ್ತಿರುವ ಬಸ್ ಹತ್ತಲು ಪ್ರಯತ್ನಿಸಬೇಡಿ: ಸಾರ್ವಜನಿಕರಿಗೆ ಸಚಿವ ರಾಮಲಿಂಗಾ ರೆಡ್ಡಿ ಮನವಿ

ಬನಶಂಕರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಪದ್ಮನಾಭ ನಗರದ ಬಳಿ ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಬಸ್‌ನ ಚಕ್ರಗಳ ಕೆಳಗೆ ಸಿಲುಕಿದ 20 ವರ್ಷದ ಯುವತಿ ಸಾವನ್ನಪ್ಪಿದ ಘಟನೆ ಕುರಿತು ಸಚಿವರು ಪ್ರತಿಕ್ರಿಯೆ ನೀಡಿದರು.

ಬೆಂಗಳೂರು: ಚಲಿಸುತ್ತಿರುವ ಬಸ್'ಗಳನ್ನು ಹತ್ತಲು ಪ್ರಯತ್ನಿಸಬೇಡಿ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಬನಶಂಕರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಪದ್ಮನಾಭ ನಗರದ ಬಳಿ ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಬಸ್‌ನ ಚಕ್ರಗಳ ಕೆಳಗೆ ಸಿಲುಕಿದ 20 ವರ್ಷದ ಯುವತಿ ಸಾವನ್ನಪ್ಪಿದ ಘಟನೆ ಕುರಿತು ಸಚಿವರು ಪ್ರತಿಕ್ರಿಯೆ ನೀಡಿದರು.

ಒಬ್ಬ ವ್ಯಕ್ತಿ ಚಲಿಸುತ್ತಿರುವ ಬಸ್ಸನ್ನು ಹತ್ತಯಲು ಪ್ರಯತ್ನಿಸಿದರೆ ಅಥವಾ ಬಸ್ ಹತ್ತುವಾಗ ನಿರ್ಲಕ್ಷ್ಯ ವಹಿಸಿದರೆ ಅಥವಾ ಫುಟ್‌ಬೋರ್ಡ್‌ನಲ್ಲಿ ನಿಂತಾಗಲೂ ಕೂಡ ಅಪಘಾತ ಸಂಭವಿಸುವ ಸಾಧ್ಯತೆಯಿದೆ. ಈ ವಿಷಯಗಳ ಬಗ್ಗೆ ನಾವು ಈಗಾಗಲೇ ಜಾಗೃತಿ ಮೂಡಿಸಿದ್ದೇವೆ, ಆದರೆ ಜನರು ಅದೇ ತಪ್ಪನ್ನು ಮಾಡುತ್ತಿದ್ದಾರೆಂದು ಹೇಳಿದರು.

ಬಿಎಂಟಿಸಿ 6,500 ಕ್ಕೂ ಹೆಚ್ಚು ಬಸ್‌ಗಳನ್ನು ಹೊಂದಿದ್ದು, ಬಸ್ ಗಳ ಕೊರತೆಯಿಲ್ಲ. ರಾಜಧಾನಿ ಬೆಂಗಳೂರಿನ ಜನರು ಆತಂಕ ಪಡುವ ಅಗತ್ಯವಿಲ್ಲ. ಒಂದು ಬಸ್ ಮಿಸ್ ಆದರೂ, ಮುಂದಿನ ವಾಹನಕ್ಕಾಗಿ ಕಾಯಬೇಕು. ಜೀವಗಳನ್ನು ಅಪಾಯಕ್ಕೆ ಸಿಲುಕಿಸುವ ಬದಲು ತಮ್ಮ ಗಮ್ಯಸ್ಥಾನವನ್ನು ತಲುಪಲು ಮತ್ತೊಂದು ಬಸ್ ಹತ್ತಬೇಕು ಎಂದು ತಿಳಿಸಿದರು.

ಬಸ್ ಪ್ರಯಾಣಿಕ ವೇದಿಕೆಯ ಸದಸ್ಯ ವಿನಯ್ ಶ್ರೀನಿವಾಸ ಅವರು ಮಾತನಾಡಿ,. ಕೆಲವು ಸ್ಥಳಗಳಲ್ಲಿ ಬಸ್‌ಗಳ ಕೊರತೆಯಿದೆ. ಆದ್ದರಿಂದ ಸಾರ್ವಜನಿಕರು ತಮ್ಮ ಗಮ್ಯಸ್ಥಾನಗಳನ್ನು ತಲುಪುವಲ್ಲಿ ವಿಳಂಬವಾಗುತ್ತದೆ ಎಂದು ಆತಂಕಗೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರವು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಮತ್ತು ಬಸ್‌ಗಳಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಮತ್ತು ಸುರಕ್ಷತಾ ಕ್ರಮಗಳ ಕುರಿತು ಅಭಿಯಾನಗಳನ್ನು ನಡೆಸಬೇಕು ಎಂದು ಹೇಳಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಬಿಎಂಟಿಸಿ, ಬಸ್ ಚಾಲಕನಿಂದ ಯಾವುದೇ ತಪ್ಪಿಲ್ಲ ಎಂದು ಹೇಳಿದೆ. ಆದಾಗ್ಯೂ, ಪ್ರಯಾಣಿಕರು ಬಸ್‌ಗಳನ್ನು ಹತ್ತುವಾಗ ಮತ್ತು ಇಳಿಯುವಾಗ ಜಾಗರೂಕರಾಗಿರುವಂತೆ ಮನವಿ ಮಾಡಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT