ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮಂಡ್ಯ ಸರ್ಕಾರಿ ಶಾಲಾ ಆವರಣದಲ್ಲಿ 8 ವರ್ಷದ ಬಾಲಕಿ ಮೇಲೆ gang-rape; ಆಸ್ಪತ್ರೆಗೆ ದಾಖಲು!

ಹಾಡುಹಗಲೇ ಮೂವರು ಕಾಮುಕರು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಜ.31ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸಾಂದರ್ಭಿಕ ಚಿತ್ರ
Srinivasa Murthy VN
Updated On : 2 Feb 2025, 6:38 pm

ಮಂಡ್ಯ: 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಭೀಕರ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ (Mandya) ನಗರದ ಹೊರ ವಲಯದಲ್ಲಿ ಈ ಘಟನೆ ನಡೆದಿದ್ದು, ಕೇಕ್ ಕೊಡಿಸಿ, ಚಾಕು ಹಾಕುವುದಾಗಿ ಬೆದರಿಸಿ ಸರ್ಕಾರಿ ಶಾಲಾ ಆವರಣದಲ್ಲೇ 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ.

ಹಾಡುಹಗಲೇ ಮೂವರು ಕಾಮುಕರು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಜ.31ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Advertisement

Advertisement

ಚಿಕ್ಕಮ್ಮನೊಂದಿಗೆ ನೋವು ತೋಡಿಕೊಂಡ ಬಾಲಕಿ

ಇನ್ನು ತನ್ನ ಮೇಲಾದ ದುಷ್ಕೃತ್ಯವನ್ನು ಬಾಲಕಿ ಯಾರೊಂದಿಗೆ ಹೇಳಿಕೊಂಡಿರಲಿಲ್ಲ. ಬಾಲಕಿ ಋತುಮತಿಯಾಗಿ ಎರಡು ದಿನ ಕಳೆದರೂ ಆಕೆಗೆ ಹೊಟ್ಟೆ ನಾವು, ರಕ್ತಸ್ರಾವ ನಿಂತಿರಲಿಲ್ಲ. ಇದರಿಂದ ಅನುಮಾನಗೊಂಡ ಬಾಲಕಿ ಚಿಕ್ಕಮ್ಮ ಬಂದು ವಿಚಾರಿಸಿದಾಗ ಬಾಲಕಿ ನಡೆದ ಘಟನೆ ವಿವರಿಸಿದ್ದಾಳೆ. ಚಿಕ್ಕಮ್ಮನ ಬಳಿ ಕಾಮಾಂಧರ ದುಷ್ಕೃತ್ಯದ ಬಗ್ಗೆ ಬಾಲಕಿ ಬಾಯಿಬಿಟ್ಟಿದ್ದಾಳೆ.

ಸದ್ಯ ಅಸ್ವಸ್ಥ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಬಂದ ಪೊಲೀಸರು ಬಾಲಕಿಯ ಆರೋಗ್ಯ ವಿಚಾರಣೆ ನಡೆಸಿದ್ದು, ಮಾತ್ರವಲ್ಲದೇ ನಂತರ ಬಾಲಕಿಯ ಆರೋಗ್ಯದ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Also Read

ಅಮಾಯಕ ಗಂಡನ ಕಿಡ್ನಿ ಮಾರಿ, ಫೇಸ್`ಬುಕ್ Lover ಜೊತೆ ಮಹಿಳೆ ಪರಾರಿ! ನ್ಯಾಯ ಕೇಳಿದ್ದಕ್ಕೆ ಥಳಿಸಿದ ಕ್ರೂರಿ!

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement