ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು: ಕುಟುಂಬಸ್ಥರಿಂದ ವೈದ್ಯರ ನಿರ್ಲಕ್ಷ್ಯದ ಆರೋಪ

ಇದಾದ ಸ್ಪಲ್ಪ ಹೊತ್ತಿಗೆ ಬಾಣಂತಿ ಗಂಗವ್ವ ಗೊಡಕುಂದ್ರಿ ಮೃತಪಟ್ಟಿದ್ದಾರೆ. ಬಿಮ್ಸ್​ ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಬಿಮ್ಸ್ ಆಸ್ಪತ್ರೆ
Sumana Upadhyaya
Updated On : 2 Feb 2025, 10:23 am

ಬೆಳಗಾವಿ: ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವು ಸಂಭವಿಸಿದೆ. ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ಗಂಗವ್ವ ಗೊಡಕುಂದ್ರಿ (31ವ) ಮೃತ ದುರ್ದೈವಿಯಾಗಿದ್ದು, ಗಂಗವ್ವ ಗೊಡಕುಂದ್ರಿ ಜನವರಿ 28 ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜನವರಿ 30ರ ರಾತ್ರಿ ಗಂಗವ್ವ ಗೊಡಕುಂದ್ರಿ ಅವರಿಗೆ ಹೆರಿಗೆ ಆಗಿತ್ತು. ಗಂಗವ್ವ ಗೊಡಕುಂದ್ರಿ ಅವರಿಗೆ ಬಿಪಿ ಲೋ ಆಗಿ ಸೀರಿಯಸ್ ಇದೆ ಎಂದು ವೈದ್ಯರು ಜ.31ರಂದು ಕುಟುಂಬಸ್ಥರಿಗೆ ತಿಳಿಸಿದ್ದರು.

ಇದಾದ ಸ್ಪಲ್ಪ ಹೊತ್ತಿಗೆ ಬಾಣಂತಿ ಗಂಗವ್ವ ಗೊಡಕುಂದ್ರಿ ಮೃತಪಟ್ಟಿದ್ದಾರೆ. ಬಿಮ್ಸ್​ ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಸಿರಿಯಸ್ ಇದ್ದಾಗ ವೈದ್ಯರು ಸರಿಯಾಗಿ ಚಿಕಿತ್ಸೆ ಕೊಟ್ಟಿದ್ದರೇ ಅಕ್ಕ ಉಳಿಯುತ್ತಿದ್ದಳು. ನನ್ನ ಅಕ್ಕನ ಸಾವಿಗೆ ವೈದ್ಯರು ಕಾರಣ ಎಂದು ಗಂಗವ್ವ ಸಹೋದರ ಶಂಕರಪ್ಪ ಆರೋಪಿಸಿದ್ದಾರೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Also Read

ಕರ್ನಾಟಕ: ನಾಲ್ಕು ತಿಂಗಳಲ್ಲಿ 217 ಬಾಣಂತಿಯರ ಸಾವು! ತಜ್ಞರು ಏನಂತಾರೆ?

ಜಿಲ್ಲೆಯಲ್ಲಿ 29 ಬಾಣಂತಿಯರ ಸಾವು

Advertisement

Advertisement

ಕಳೆದ ವರ್ಷ ಬೆಳಗಾವಿ ಜಿಲ್ಲೆಯಲ್ಲಿ 29 ಬಾಣಂತಿಯರು ಮತ್ತು 322 ಶಿಶುಗಳು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗಳು ತಿಳಿಸಿದ್ದರು. ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದಿರುವುದು, ರಕ್ತಸ್ರಾವ, ವೈದ್ಯರ ನಿರ್ಲಕ್ಷ್ಯ ಮುಂತಾದ ಕಾರಣಗಳಿಂದ ಬಾಣಂತಿಯರು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement