ಸಿದ್ದರಾಮಯ್ಯ  
ರಾಜ್ಯ

ದಿಢೀರ್ ಅನಾರೋಗ್ಯ: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಸಿಎಂ ಸಿದ್ದರಾಮಯ್ಯ ಅವರಿಗೆ ಇದ್ದಕ್ಕಿದ್ದಂತೆ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿ ಪ್ರಾಥಮಿಕ ತಪಾಸಣೆ ನಡೆಸಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದಾಗಿವೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರಿಗೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಆಗಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಇದ್ದಕ್ಕಿದ್ದಂತೆ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿ ಪ್ರಾಥಮಿಕ ತಪಾಸಣೆ ನಡೆಸಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದಾಗಿವೆ.

ಎರಡು ದಿನ ವಿಶ್ರಾಂತಿಗೆ ವೈದ್ಯರ ಸೂಚನೆ

ಸಿದ್ದರಾಮಯ್ಯನವರ ಎಡಗಾಲಿನ ಮಂಡಿ ನೋವು ಹೆಚ್ಚಾಗಿದೆ. ಹೀಗಾಗಿ ಮಣಿಪಾಲ್​ ಆಸ್ಪತ್ರೆಯ ಡಾ. ಸತ್ಯನಾರಾಯಣ ಅವರು ಸಿಎಂ ಸಿದ್ದರಾಮಯ್ಯರನ್ನು ತಪಾಸಣೆ ನಡೆಸಿದ್ದಾರೆ. ಸಿದ್ದರಾಮಯ್ಯ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದೇ ಜಾಗದಲ್ಲಿ ಮತ್ತೆ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. 2 ದಿನ ಪ್ರಯಾಣ ಮಾಡದೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ, ರಾಮನಗರ ಪ್ರವಾಸ ರದ್ದು

ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ರದ್ದಾಗಿದೆ. ಚಿಕ್ಕಬಳ್ಳಾಪುರದ ಹೊಸೂರು ಗ್ರಾಮಕ್ಕೆ ಇಂದು ಸಿದ್ದರಾಮಯ್ಯ ಭೇಟಿ ನೀಡಬೇಕಿತ್ತು. ಆದರೆ ಇದೀಗ ದಿಢೀರ್ ಆಗಿ ಸಿದ್ದರಾಮಯ್ಯ ಭೇಟಿ ರದ್ದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್