ಬೋರ್ಡ್ ಮೇಲೆ ಬರೆದ ಸಚಿವ ಶಿವರಾಜ್ ತಂಗಡಗಿ 
ರಾಜ್ಯ

Video: ಸಂಸ್ಕೃತಿ ಸಚಿವರಿಗೂ ಕನ್ನಡ ಬರಲ್ವಾ?; ಬೋರ್ಡ್ ಮೇಲೆ ಬರೆಯಲು ತಡಕಾಡಿದ Shivaraj Tangadagi!

ಈ ಹಿಂದೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಪ್ರಸಂಗ ವ್ಯಾಪಕ ವೈರಲ್ ಆಗಿತ್ತು.

ಕೊಪ್ಪಳ: ಕರ್ನಾಟಕ ಸರ್ಕಾರದ ಸಚಿವರೊಬ್ಬರು ಕನ್ನಡ ಬರೆಯಲು ತಡಕಾಡಿದ ಪ್ರಸಂಗದ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಈ ಹಿಂದೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಪ್ರಸಂಗ ವ್ಯಾಪಕ ವೈರಲ್ ಆಗಿತ್ತು. ಇದೀಗ ಈ ಪಟ್ಟಿಗೆ ಮತ್ತೋರ್ವ ಸಚಿವರ ಸೇರ್ಪೆಡೆಯಾಗಿದ್ದು, ಈ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಟ್ರೋಲಿಗರಿಗೆ ಆಹಾರವಾಗಿದ್ದಾರೆ.

ಕನ್ನಡ ಬರೆಯಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರೇ ಪರದಾಡಿದ ವಿಡಿಯೋ ಈಗ ವೈರಲ್ ಆಗುತ್ತಿದೆ.

ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಶಿವರಾಜ ತಂಗಡಗಿ ‘‘ಶುಭವಾಗಲಿ’’ ಎಂದು ಬೋರ್ಡ್​ ಮೇಲೆ ಬರೆಯಲು ಮುಂದಾಗಿದ್ದಾರೆ. ಈ ವೇಳೆ, ಶುಭವಾಗಲಿ ಸರಿಯಾಗಿ ಬರೆಯಲಾಗದೇ ಸಚಿವ ತಂಗಡಗಿ ಯಡವಟ್ಟು ಮಾಡಿಕೊಂಡಿದ್ದಾರೆ.

ಶಿವರಾಜ್ ತಂಗಡಗಿ ತಪ್ಪಾಗಿ ಬರೆಯುತ್ತಿದ್ದರೂ ಅದನ್ನು ಸರಿಪಡಿಸದೇ ಅವರ ಸುತ್ತಲಿದ್ದವರು ಚಪ್ಪಾಳಿ ತಟ್ಟುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದ್ದು, ಕರ್ನಾಟಕ ಸಚಿವರ ಕನ್ನಡ ಪ್ರೀತಿ ಕುರಿತು ಮತ್ತೊಮ್ಮೆ ಚರ್ಚೆಯಾಗುವಂತೆ ಮಾಡುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT