ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 
ರಾಜ್ಯ

Aero India 2025: ಬೆಂಗಳೂರು ಏರ್‌ಪೋರ್ಟ್‌ ವಿಮಾನ ಹಾರಾಟದಲ್ಲಿ ವ್ಯತ್ಯಯ; ಇಲ್ಲಿದೆ ವಿವರ...

ಫೆಬ್ರವರಿ 5ರಿಂದ 14ರವರೆಗೆ ಕೆಲ ಅವಧಿಗಳಲ್ಲಿ ವಾಯುಪ್ರದೇಶವನ್ನು ಮುಚ್ಚುವುದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ತಿಳಿಸಿದೆ.

ಬೆಂಗಳೂರು: ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2025ಕ್ಕೆ ದಿನಗಣನೆ ಶುರುವಾಗಿದ್ದು, ಈ ನಡುವಲ್ಲೇ ವಾಯುಪ್ರದೇಶವನ್ನು ಮುಚ್ಚುವ ಪರಿಷ್ಕೃತ ಸಮಯ ಪಟ್ಟಿಯನ್ನು ಕೆಐಎ ಪ್ರಕಟಿಸಿದೆ.

ಫೆಬ್ರವರಿ 5 ರಿಂದ 14ರವರೆಗೆ ಕೆಲ ಅವಧಿಗಳಲ್ಲಿ ವಾಯುಪ್ರದೇಶವನ್ನು ಮುಚ್ಚುವುದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ತಿಳಿಸಿದೆ.

ಪರಿಷ್ಕೃತ ಸಮಯದ ಪಟ್ಟಿ ಇಂತಿದೆ..

  • ಫೆಬ್ರವರಿ 5, 6 ಮತ್ತು 8ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 3ರಿಂದ 4.30 ರವರೆಗೆ

  • ಫೆಬ್ರವರಿ 7 ಬೆಳಿಗ್ಗೆ 9ರಿಂದ 11ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4.30ರವರೆಗೆ

  • ಫೆಬ್ರವರಿ 8 ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 3ರಿಂದ 4.30 ರವರೆಗೆ

  • ಫೆಬ್ರವರಿ 9 ಬೆಳಿಗ್ಗೆ 9ರಿಂದ 11ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4.30 ರವರೆಗೆ

  • ಫೆಬ್ರವರಿ 10ರಂದು ಬೆಳಿಗ್ಗೆ 9ರಿಂದ 11.30ರವರೆಗೆ ಮತ್ತು ಮಧ್ಯಾಹ್ನ 2.30ರಿಂದ 3.30ರವರೆಗೆ.

  • ಫೆಬ್ರವರಿ 11 ಮತ್ತು 12ರಂದು ಮಧ್ಯಾಹ್ನ 12ರಿಂದ 2.30ರವರೆಗೆ.

  • ಫೆಬ್ರವರಿ 13 ಮತ್ತು 14ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5ರವರೆಗೆ ವಾಯುಪ್ರದೇಶವನ್ನು ಮುಚ್ಚಲಾಗುವುದು ಎಂದು ತಿಳಿಸಿದೆ.

ಏಷ್ಯಾದ ಅತಿ ದೊಡ್ಡ ಏರ್ ಶೋ ಯಲಹಂಕದ ವಾಯನೆಲೆಯಲ್ಲಿ ಫೆಬ್ರವರಿ 10 ರಿಂದ 14 ರವರಗೆ ನಡೆಯಲಿದ್ದು, ದೇಶ ವಿದೇಶಗಳ ಅನೇಕ ಗಣ್ಯರು, ಉದ್ಯಮಿಗಳು, ವಾಯುಪಡೆಗಳ ಸಿಬ್ಬಂದಿ ಆಗಮಿಸಲಿದ್ದಾರೆ. ಆಕರ್ಷಕ ಏರ್ ಶೋ ಕೂಡ ನಡೆಯಲಿದೆ.

ಏರ್ ಶೋಗೆ ಆಗಮಿಸುವವರಿಗೆ ಪಾರ್ಕಿಂಗ್ ವ್ಯವಸ್ಥೆ, ಉಚಿತ ಬಸ್ ವ್ಯವಸ್ಥೆಯನ್ನು ವಾಯುಪಡೆ ಮಾಡುತ್ತಿದೆ. 15ನೇ ಆವೃತ್ತಿಯ ಏರ್ ಶೋ ಇದಾಗಿದ್ದು, ಲಕ್ಷಾಂತರ ಜನ ಆಗಮಿಸುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!