ಎಚ್.ಎನ್.ಪಾವನ 
ರಾಜ್ಯ

ಬೆಂಗಳೂರು ವಿವಿ ಹಾಸ್ಟೆಲ್​​ನಲ್ಲಿ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಎಂಎ ಓದುತ್ತಿದ್ದ ಎಚ್.ಎನ್.ಪಾವನ ಅವರು ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್​​ನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸೋಮವಾರ ನಡೆದಿದೆ.

ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಎಂಎ ಓದುತ್ತಿದ್ದ ಎಚ್.ಎನ್.ಪಾವನ ಅವರು ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸ್ಟೆಲ್‌ನಲ್ಲಿದ್ದ ಕೆಲ ಯುವತಿಯರು ಗಮನಿಸಿ ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಪಾವನ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದ ನಿವಾಸಿಯಾಗಿದ್ದು. ನಾನು ಗೆಳೆಯನೊಬ್ಬನನ್ನು ನಂಬಿದ್ದೆ, ಆತನಿಂದ ಮೋಸವಾಗಿದೆ. ಕ್ಷಮಿಸಿ ಅಪ್ಪ, ಅಮ್ಮ.. ಐ ಲವ್ ಯೂ ಎಂದು ಡೆತ್​ನೋಟ್​​ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.

ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ವಿದ್ಯಾರ್ಥಿನಿ ಪಾವನ ಶವ ಶಿಫ್ಟ್ ಮಾಡಲಾಗಿದ್ದು,​ ಪೋಷಕರು ಬೆಂಗಳೂರಿಗೆ ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು