ಮಂಕಾಳ್ ವೈದ್ಯ-ಡಾ.ಜಿ ಪರಮೇಶ್ವರ್  online desk
ರಾಜ್ಯ

"ಗೋಕಳ್ಳರ ಮೇಲೆ ಸ್ಥಳದಲ್ಲೇ ಶೂಟೌಟ್": ಮಂಕಾಳ್ ವೈದ್ಯ ಹೇಳಿಕೆಗೆ ವ್ಯಾಪಕ ವಿರೋಧ; ಗೃಹ ಸಚಿವರು ಹೇಳಿದ್ದೇನೆಂದರೆ...

ಒಂದೆಡೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಮಂಕಾಳು ವೈದ್ಯ ಅವರ ಹೇಳಿಕೆಯನ್ನು ಆರ್ ಎಸ್ಎಸ್ ಮನಸ್ಥಿಗೆ ಹೋಲಿಕೆ ಮಾಡಿದರೆ, ಮತ್ತೊಂದೆಡೆ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದ್ದು ಸಚಿವರ ಹೇಳಿಕೆಯನ್ನು ಖಂಡಿಸಲೂ ಆಗದೇ, ಸಮರ್ಥಿಸಿಕೊಳ್ಳಲೂ ಆಗದೇ ಇರುವ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಇದೆ.

ಬೆಂಗಳೂರು: ಗೋಕಳ್ಳತನ ಮಾಡುವವರ ಮೇಲೆ ಸ್ಥಳದಲ್ಲೇ ಶೂಟೌಟ್ ಮಾಡಲಾಗುವುದು ಎಂಬ ಕಾಂಗ್ರೆಸ್ ಸಚಿವ ಮಂಕಾಳ್ ವೈದ್ಯ ನೀಡಿದ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಒಂದೆಡೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಮಂಕಾಳು ವೈದ್ಯ ಅವರ ಹೇಳಿಕೆಯನ್ನು ಆರ್ ಎಸ್ಎಸ್ ಮನಸ್ಥಿಗೆ ಹೋಲಿಕೆ ಮಾಡಿದರೆ, ಮತ್ತೊಂದೆಡೆ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದ್ದು ಸಚಿವರ ಹೇಳಿಕೆಯನ್ನು ಖಂಡಿಸಲೂ ಆಗದೇ, ಸಮರ್ಥಿಸಿಕೊಳ್ಳಲೂ ಆಗದೇ ಇರುವ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಇದೆ.

ತಮ್ಮ ಸಹೋದ್ಯೋಗಿ ಸಚಿವ ಮಂಕಾಳ್ ವೈದ್ಯ ಅವರ ಹೇಳಿಕೆಗಳ ಪ್ರತಿಕ್ರಿಯೆ ಕೇಳಿದ ಮಾಧ್ಯಮಗಳಿಗೆ ಉತ್ತರಿಸಿರುವ ಗೃಹ ಸಚಿವ ಡಾ.ಜಿ ಪರಮೆಶ್ವರ್, ಮಂಕಾಳು ವೈದ್ಯ ಅವರದ್ದು ವೈಯಕ್ತಿಕ ಹೇಳಿಕೆ. ಈ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಮಂಕಾಳು ವೈದ್ಯ ಅವರ ಹೇಳಿಕೆಗೆ ಹಲವರಿಂದ ವಿರೋಧ ವ್ಯಕ್ತವಾಗುತ್ತಿದ್ದು, ಮಂಕಾಳ್ ವೈದ್ಯ ಸಮಾಜವಾದಿ ಸಿದ್ದರಾಮಯ್ಯ ಅವರ ಸರ್ಕಾರದ ಸಚಿವರಾ? ಮಂಕಾಳು ವೈದ್ಯ ಅವರು ಸಿದ್ದರಾಮಯ್ಯ ಸರ್ಕಾರವನ್ನು ಬಿಜೆಪಿ ಸರ್ಕಾರ ಎಂದು ಭಾವಿಸಿದ್ದಾರಾ? ದನಕಳ್ಳತನ ಮಾಡಿದರೆ ಅವರಿಗೆ ಶಿಕ್ಷೆ ಕೊಡಿಸುವ ವ್ಯವಸ್ಥೆ ಇದೆ ಎಂಬುದನ್ನೂ ಮರೆತು ಮಾತನಾಡುತ್ತಿರುವ ಸಚಿವರ ಹೇಳಿಕೆ ಸರ್ವಾಧಿಕಾರಿತನವನ್ನು ತೋರುತ್ತಿದೆ. ಇಂತಹ ಮಂತ್ರಿಯನ್ನು ತಕ್ಷಣವೇ ಸಿದ್ದರಾಮಯ್ಯ ವಜಾಗೊಳಿಸಬೇಕೆಂಬ ಆಗ್ರಹವೂ ಕೇಳಿಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT