ಡಿಕೆ ಶಿವಕುಮಾರ್ ನೇತೃತ್ವದ ಸಭೆ 
ರಾಜ್ಯ

Invest Karnataka 2025: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಹೊಸ ಕೈಗಾರಿಕಾ ನೀತಿ ಬಿಡುಗಡೆ

2,000 ಹೂಡಿಕೆದಾರರು ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ ಮತ್ತು 60 ಕ್ಕೂ ಹೆಚ್ಚು ಉದ್ಯಮ ತಜ್ಞರು ಸಭೆಯಲ್ಲಿ ಮಾತನಾಡಲಿದ್ದಾರೆ. 18 ದೇಶಗಳಲ್ಲಿ, ಒಂಬತ್ತು ಪ್ರತ್ಯೇಕ ಪೆವಿಲಿಯನ್‌ಗಳನ್ನು ಹೊಂದಿರುತ್ತವೆ.

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ 'ಇನ್ವೆಸ್ಟ್ ಕರ್ನಾಟಕ 2025'ರಲ್ಲಿ 18 ದೇಶಗಳ ಹೂಡಿಕೆದಾರರು ಭಾಗವಹಿಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.

ಪೂರ್ವಭಾವಿ ಸಿದ್ಧತಾ ಪರಿಶೀಲನಾ ಸಭೆಯ ನಂತರ ಮಾತನಾಡಿದ ಅವರು, ಫೆಬ್ರವರಿ 11 ರಂದು ಸಂಜೆ ಔಪಚಾರಿಕ ಉದ್ಘಾಟನೆ ನಂತರ ಫೆಬ್ರವರಿ 12 ರಿಂದ ಮೂರು ದಿನಗಳ ಕಾಲ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, 10 ಲಕ್ಷ ಕೋಟಿ ರೂ. ಹೂಡಿಕೆ ಪ್ರಸ್ತಾವನೆ ಆಕರ್ಷಿಸುವ ನಿರೀಕ್ಷೆಯಿದೆ ಎಂದರು.

2,000 ಹೂಡಿಕೆದಾರರು ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ ಮತ್ತು 60 ಕ್ಕೂ ಹೆಚ್ಚು ಉದ್ಯಮ ತಜ್ಞರು ಸಭೆಯಲ್ಲಿ ಮಾತನಾಡಲಿದ್ದಾರೆ. 18 ದೇಶಗಳಲ್ಲಿ, ಒಂಬತ್ತು ಪ್ರತ್ಯೇಕ ಪೆವಿಲಿಯನ್‌ಗಳನ್ನು ಹೊಂದಿರುತ್ತವೆ. ಹೂಡಿಕೆದಾರರಿಗೆ ವಿವಿಧ ಹೂಡಿಕೆ ಅವಕಾಶಗಳು ಮತ್ತು ಉದ್ಯಮ ಸ್ನೇಹಿ ನೀತಿಗಳನ್ನು ಸರ್ಕಾರ ವಿವರಿಸುತ್ತದೆ ಎಂದು ಹೇಳಿದರು.

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಹಲವು ತಿಂಗಳುಗಳಿಂದ ಈ ಸಮಾವೇಶಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಯುಎಸ್, ಯುರೋಪ್, ದಕ್ಷಿಣ ಕೊರಿಯಾ, ಜಪಾನ್ ಮತ್ತು ಇತರ ಹಲವು ದೇಶಗಳಿಗೆ ನಿಯೋಗ ಕಳುಹಿಸಿ,ರೋಡ್ ಶೋಗಳಲ್ಲಿ ಭಾಗವಹಿಸಿದ್ದು, ಹೂಡಿಕೆದಾರರೊಂದಿಗೆ ಹಲವಾರು ಸಭೆಗಳನ್ನು ನಡೆಸಿದ್ದಾರೆ ಎಂದು ತಿಳಿಸಿದರು.

ಎಂ.ಬಿ. ಪಾಟೀಲ್ ಮಾತನಾಡಿ, - ಟೆಕ್-ಚಾಲಿತ, ಹಸಿರು, ಅಂತರ್ಗತ ಮತ್ತು ಸ್ಥಿತಿಸ್ಥಾಪಕ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಈ ಸಮಾವೇಶದ ಥೀಮ್ ಸಿದ್ದಪಡಿಸಲಾಗಿದೆ. ದಾವೋಸ್‌ನಲ್ಲಿನ ವಿಶ್ವ ಆರ್ಥಿಕ ವೇದಿಕೆಯಿಂದ (WEF) ಸ್ಫೂರ್ತಿ ಪಡೆದು, ಹೊಸ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಪ್ರಮುಖ ಅಂಶವಾಗಿ, ರಫ್ತು ಉತ್ತೇಜನಕ್ಕೆ ಬಲವಾದ ಒತ್ತು ನೀಡುವ ಹೊಸ ಕೈಗಾರಿಕಾ ನೀತಿಯನ್ನು (2025-30) ಈ ಸಮಾವೇಶದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಡಾ.ಡಿ.ಎಂ.ನಂಜುಂಡಪ್ಪ ಸಮಿತಿಯ ವರದಿಯಂತೆ ಹಿಂದುಳಿದ ಮತ್ತು ಅತ್ಯಂತ ಹಿಂದುಳಿದ ಪ್ರದೇಶಗಳಲ್ಲಿನ ಕೈಗಾರಿಕೆಗಳಿಗೆ ಈ ನೀತಿಯು ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT