ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು 
ರಾಜ್ಯ

ರಾಜಕಾರಣ, ಪತ್ರಿಕಾ ರಂಗ ಬೇರ್ಪಡಿಸಲು ಸಾಧ್ಯವಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಮಾತ್ರವಲ್ಲ. ಖಾಸಗಿ ಬಡಾವಣೆಗಳಲ್ಲಿ ನಿವೇಶನಗಳಿಗೆ ಅನುಮೋದನೆ ನೀಡುವಾಗ ಅದರಲ್ಲಿ ಪತ್ರಕರ್ತರಿಗೆ ನಿಗದಿತ ಪ್ರಮಾಣದಲ್ಲಿ ನಿವೇಶನ ಮೀಸಲಿಡಬೇಕು ಎಂದು ಷರತ್ತು ವಿಧಿಸಬೇಕು ಎಂದರು.

ಬೆಂಗಳೂರು: ರಾಜಕಾರಣ, ಪತ್ರಿಕಾ ರಂಗ ಬೇರ್ಪಡಿಸಲು ಸಾಧ್ಯವಿಲ್ಲ. ಪತ್ರಿಕೆ ಇಲ್ಲದೆ ರಾಜಕಾರಣ ನಡೆಯಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿಯ 2023 ಮತ್ತು 2024ನೇ ಸಾಲಿನ ವಾರ್ಷಿಕ ಹಾಗೂ ವಿಶೇಷ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಉಪ ಮುಖ್ಯಮಂತ್ರಿ ,ಸರ್ಕಾರ ನಿರ್ಣಯಗಳನ್ನು ತೆಗೆದುಕೊಂಡರೂ ಅದನ್ನು ಜನರಿಗೆ ಮುಟ್ಟಿಸಲು ಪತ್ರಿಕೆಗಳು ಬೇಕು. ಹಾಗಾಗಿ ಜನ ಸಾಮಾನ್ಯರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಾಮಾಜಿಕ ವರದಿ ಬಿತ್ತರಿಸುವ ಮೂಲಕ ಪತ್ರಿಕೆಗಳು ಸಾಮಾಜಿಕ ಹೊಣೆಗಾರಿಕೆ ನಿರ್ವಹಿಸುತ್ತಿವೆ ಎಂದರು.

ಸಮಾಜದ ಬದಲಾವಣೆಯಲ್ಲಿ, ಜ್ಞಾನ ಹೆಚ್ಚಿಸುವಲ್ಲಿ, ಭಾಷೆ ಬೆಳವಣಿಗೆಯಲ್ಲಿ ಪತ್ರಿಕೆಗಳು ಮಹತ್ತರ ಪಾತ್ರವನ್ನು ವಹಿಸುತ್ತವೆ. ಪತ್ರಕರ್ತರನ್ನು ಗೌರವಿಸುತ್ತಿರುವ ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ತಿಳಿಸಿದರು.

ಪತ್ರಿಕಾ ರಂಗ ಎಂಬುದು ಸಮಾಜದ ನಾಲ್ಕನೇ ಅಂಗವಾಗಿದೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಷ್ಟೇ ಪತ್ರಿಕಾರಂಗವೂ ಪ್ರಮುಖವಾಗಿದೆ. ಸ್ವಸ್ಥ ಸಮಾಜ ಕಟ್ಟಲು ದಿನ ಪತ್ರಿಕೆಗಳು ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳು ಹಗಲಿರುಳು ಕೆಲಸ ಮಾಡುತ್ತಿವೆ ಎಂದರು.

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮಾತನಾಡಿ, ಪತ್ರಕರ್ತರಿಗೆ ಆರೋಗ್ಯ ವಿಮೆ ಒದಗಿಸುವ ಯೋಜನೆ ಬಗ್ಗೆ ಈಗಾಗಲೇ ಎರಡು ಬಾರಿ ಸಭೆ ನಡೆಸಿ ಚರ್ಚಿಸಲಾಗಿದೆ. ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದೆ ಎಂದು ತಿಳಿಸಿದರು.

ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನುಂ ಮಾತನಾಡಿ, ವಾರ್ಷಿಕ ಪ್ರಶಸ್ತಿಯ ಮೊತ್ತವನ್ನು ರೂ. 25,000 ದಿಂದ ರೂ. 50,000ಕ್ಕೆ ಹೆಚ್ಚಿಸಲಾಗಿದೆ. ಜೀವಮಾನದ ಸಾಧನೆ ಮೊತ್ತವನ್ನು ರೂ. 1,00000ಕ್ಕೆ ಏರಿಸಲಾಗಿದೆ ಎಂದು ವಿವರಿಸಿದರು.

2023ನೇ ಸಾಲಿನ ಜೀವಮಾನದ ಸಾಧನೆಯ ವಿಶೇಷ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಅ.ಚ. ಶಿವಣ್ಣ ಹಾಗೂ 2024ನೇ ಸಾಲಿನ ಜೀವಮಾನದ ಸಾಧನೆಯ ವಿಶೇಷ ಪ್ರಶಸ್ತಿಗೆ ಭಾಜನರಾದ ವಾರ್ತಾ ಭಾರತಿಯ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಅವರಿಗೆ ಪ್ರದಾನ ಮಾಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT