ರಾಜ್ಯ

ಬೆಂಗಳೂರು: ತನ್ನ ಸ್ನೇಹಿತನ ಜೊತೆ ಪತ್ನಿಯ ಅನೈತಿಕ ಸಂಬಂಧ; ಬೇಸತ್ತು ನಡುರಸ್ತೆಯಲ್ಲೇ ಚೂರಿ ಇರಿದು ಹತ್ಯೆಗೈದ ಪತಿ!

ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತಿಯೊಬ್ಬ ನಡುರಸ್ತೆಯಲ್ಲೇ ಪತ್ನಿಗೆ ಏಳೆಂಟು ಬಾರಿ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆನೇಕಲ್ ನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ.

ಬೆಂಗಳೂರು: ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತಿಯೊಬ್ಬ ನಡುರಸ್ತೆಯಲ್ಲೇ ಪತ್ನಿಗೆ ಏಳೆಂಟು ಬಾರಿ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆನೇಕಲ್ ನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ.

ಇಂದು ಬೆಳಗ್ಗೆ ತನ್ನ ಆರು ವರ್ಷದ ಮಗನನ್ನು ಶಾಲೆಗೆ ಬಿಡಲು ಬಂದಿದ್ದ 29 ವರ್ಷದ ಶ್ರೀಗಂಗಾಗೆ ಪತಿ 32 ವರ್ಷದ ಮೋಹನ್ ರಾಜ್ ರಸ್ತೆ ಮಧ್ಯೆ ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಂದಿದ್ದಾನೆ. ದಂಪತಿಗೆ 7 ವರ್ಷಗಳ ಹಿಂದೆ ಮದುವೆಯಾಗಿತ್ತು. ಆದರೆ ಶ್ರೀಗಂಗಾ ತನ್ನ ಸ್ನೇಹಿತನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ ಎಂಬ ಶಂಕೆಯಿಂದಾಗಿ ಮೋಹನ್ ರಾಜ್ ಪದೇ ಪದೇ ಜಗಳವಾಡುತ್ತಿದ್ದನು. ಹೀಗಾಗಿ ಶ್ರೀಗಂಗೆ 8 ತಿಂಗಳಿನಿಂದ ಪತಿಯಿಂದ ದೂರವಾಗಿದ್ದಳು. ಆದರೆ ನಿನ್ನೆ ರಾತ್ರಿ ಮೋಹನ್ ರಾಜ್‌ ತನ್ನ ಮಗುವನ್ನ ನೋಡಲು ಮನೆಗೆ ಬಂದಿದ್ದ. ಆಗ ಕೂಡ ಇಬ್ಬರ ಮಧ್ಯೆ ಜಗಳವಾಗಿತ್ತು.

ಇಂದು ಪತ್ನಿಯನ್ನು ಕೊಲ್ಲಲೇಬೇಕೆಂಬ ಉದ್ದೇಶದಿಂದ ಮೋಹನ್ ರಾಜ್ ಚೂರಿ ಸಮೇತ ಬಂದಿದ್ದು ಪತ್ನಿಯ ಮೇಲೆ ಬರ್ಬರವಾಗಿ ದಾಳಿ ಮಾಡಿದ್ದಾನೆ. ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಶ್ರೀಗಂಗಾಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಹೆಬ್ಬಗೋಡಿ ಪೊಲೀಸರು ಆರೋಪಿ ಮೋಹನ್ ರಾಜ್ ಅವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!