ರಾಜ್ಯ

ಸರ್ಕಾರಿ ಕಚೇರಿಗಳಲ್ಲಿ ಮತ್ತು ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನಿಷೇಧ: ಮಹತ್ವದ ಆದೇಶ

ಪ್ಲಾಸ್ಟಿಕ್‌ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು

ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್​​ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

ಸರ್ಕಾರಿ ಆದೇಶದಲ್ಲೇನಿದೆ?

ಪ್ಲಾಸ್ಟಿಕ್‌ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್‌ ಬಾಟಲ್​ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.

ಇಂತಹ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ಉಳ್ಳ ಗ್ಲಾಸ್‌, ಸ್ಟೀಲ್‌, ಪೇಪರ್‌ ಮತ್ತಿತರ ಪ್ಲಾಸ್ಟಿಕ್‌ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಅಧಿಸೂಚನೆ / ಆದೇಶ / ಸುತ್ತೋಲೆ ಹೊರಡಿಸಲಾಗಿದೆ ಎಂದು ಸರ್ಕಾರಿ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಎಲ್ಲ ಇಲಾಖೆಗಳ ಮುಖ್ಯಸ್ಥರು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ, ಇಲಾಖೆ, ಮಂಡಳಿ, ನಿಗಮಗಳಿಗೆ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಬೇಕು ಎಂದೂ ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT