ಸಂಗ್ರಹ ಚಿತ್ರ 
ರಾಜ್ಯ

ಅನೈತಿಕ ಸಂಬಂಧ: ಪತ್ನಿಯ ಕತ್ತು ಹಿಸುಕಿ ಕೊಲೆಗೈದ ಪತಿ, ಪೊಲೀಸರಿಗೆ ಶರಣು

ರಬಿಯಾ (32) ಮೃತ ಮಹಿಳೆ. ನಿಜಾಮುದ್ದೀನ್ ಬಂಧಿತ ಆರೋಪಿ. ದಂಪತಿಗಳು ತಮ್ಮ ಮಕ್ಕಳೊಂದಿಗೆ ಈ ಹಿಂದೆ ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ವಾಸಿಸುತ್ತಿದ್ದರು.

ಬೆಂಗಳೂರು: ಪತ್ನಿಯ ಕತ್ತು ಹಿಸುಕಿ ಹತ್ಯೆಗೈದ ಪತಿಯೊಬ್ಬ, ತಾನೇ ಸೂಲಿಬೆಲೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರ ಮುಂದ ಶರಣಾಗಿದ್ದಾನೆ.

ರಬಿಯಾ (32) ಮೃತ ಮಹಿಳೆ. ನಿಜಾಮುದ್ದೀನ್ (35) ಬಂಧಿತ ಆರೋಪಿ. ದಂಪತಿಗಳು ತಮ್ಮ ಮಕ್ಕಳೊಂದಿಗೆ ಈ ಹಿಂದೆ ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ವಾಸಿಸುತ್ತಿದ್ದರು. ವೃತ್ತಿಯಲ್ಲಿ ಸರಕು ವಾಹನ ಚಾಲಕನಾಗಿರುವ ನಿಜಾಮುದ್ದೀನ್, ಪತ್ನಿಯ ಅಕ್ರಮ ಸಂಬಂಧಗಳ ಬಗ್ಗೆ ತಿಳಿದ ನಂತರ, ಹೊಸಕೋಟೆಗೆ ಸ್ಥಳಾಂತರಗೊಂಡು, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ರಬಿಯಾ ವಿಜಯಪುರಕ್ಕೆ ಮರಳಲು ನಿಜಾಮುದ್ದೀನ್ ಜೊತೆ ಪದೇ ಪದೇ ಜಗಳವಾಡುತ್ತಿದ್ದು, ಇದಕ್ಕೆ ನಿಜಾಮುದ್ದೀನ್ ನಿರಾಕರಿಸಿದ್ದ. ಈ ನಡುವೆ ಪತಿ ಮನೆಯಲ್ಲಿ ಇಲ್ಲದ ವೇಳೆ ಪರಪುರುಷರೊಂದಿಗೆ ರಬಿಯಾ ಕಾಲ ಕಳೆಯುತ್ತಿದ್ದು, ಇದನ್ನು ತಿಳಿದು, ಆಕೆಯನ್ನು ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ.

ರಬಿಯಾ ಮೂವರು ಮಕ್ಕಳ ತಾಯಿಯಾಗಿದ್ದು, ಮಕ್ಕಳೆಲ್ಲರು ಮನೆಯಲ್ಲಿಯೇ ಇದ್ದ ಕಾರಣ , ಊಟದ ನಂತರ ವಾಕಿಂಗ್ ಗೆಂದು ಮನೆಯ ಸಮೀಪದ ಕೆರೆ ಬಳಿಗೆ ಕರೆದುಕೊಂಡು ಹೋಗಿದ್ದಾನೆ.

ಆ ವೇಳೆ ಪತ್ನಿಯೊಂದಿಗೆ ಮಾತಿನ ಚಕಮಕಿ ನಡೆಸಿದ್ದು, ಆಕೆಯ ಕತ್ತು ಹಿಸುಕಿ ಹತ್ಯೆ ಗೈದಿದ್ದಾನೆ. ಬಳಿಕ ತಾನೇ ಠಾಣೆಗೆ ಪೊಲೀಸರ ಮುಂದೆ ಶರಣಾಗಿದ್ದಾನೆ. ಇದೀಗ ಮಹಿಳೆಯ ಶವವನ್ನು ಪತ್ತೆ ಮಾಡಿರುವ ಪೊಲೀಸರು, ಹೊಸಕೋಟೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT