ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಾಲೇಜು ಹಾಸ್ಟೆಲ್‌ನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!

ವಸತಿ ನಿಲಯದಲ್ಲಿದ್ದ ಅನಾಮಿಕ ಊಟಕ್ಕೆ ಬಾರದಿದ್ದನ್ನು ಗಮನಿಸಿದ ಸ್ನೇಹಿತರು, ರೂಮಿಗೆ ಹೋಗಿ ಬಾಗಿಲು ತಟ್ಟಿದ್ದಾರೆ. ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಹಾಸ್ಟೆಲ್ ವಾರ್ಡನ್ ಗೆ ವಿಷಯ ತಿಳಿಸಿದ್ದಾರೆ. ವಾರ್ಡನ್ ಕೊಠಡಿಯ ಬಳಿ ಬಂದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಶವ ಇರುವುದು ಬೆಳಕಿಗೆ ಬಂದಿದೆ.

ಬೆಂಗಳೂರು: ರಾಮನಗರ ಜಿಲ್ಲೆಯ ಕನಕಪುರ ಮುಖ್ಯ ರಸ್ತೆಯ ದೇವರಕಗ್ಗಲಹಳ್ಳಿಯಲ್ಲಿರುವ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್'ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಅನಾಮಿಕ ವಿನಿತ್ (19) ಮೃತ ದುರ್ದೈವಿ. ಈಕೆ ಕೇರಳದ ಕಣ್ಣೂರು ಗ್ರಾಮದ ನಿವಾಸಿಯಾಗಿದ್ದು, ಹಾರೋಹಳ್ಳಿಯ ದಯಾನಂದ ಸಾಗರ ಕಾಲೇಜಿನಲ್ಲಿ ಬಿ.ಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು.

ವಸತಿ ನಿಲಯದಲ್ಲಿದ್ದ ಅನಾಮಿಕ ಊಟಕ್ಕೆ ಬಾರದಿದ್ದನ್ನು ಗಮನಿಸಿದ ಸ್ನೇಹಿತರು, ರೂಮಿಗೆ ಹೋಗಿ ಬಾಗಿಲು ತಟ್ಟಿದ್ದಾರೆ. ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಹಾಸ್ಟೆಲ್ ವಾರ್ಡನ್ ಗೆ ವಿಷಯ ತಿಳಿಸಿದ್ದಾರೆ. ವಾರ್ಡನ್ ಕೊಠಡಿಯ ಬಳಿ ಬಂದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಶವ ಇರುವುದು ಬೆಳಕಿಗೆ ಬಂದಿದೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಘಟನೆಯ ನಂತರ, ಕಾಲೇಜಿನ ವಿದ್ಯಾರ್ಥಿಗಳು 'ಜಸ್ಟೀಸ್ ಫಾರ್ ಅನಾಮಿಕಾ' ಆನ್‌ಲೈನ್ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ವಿದ್ಯಾರ್ಥಿನಿಯ ಪೋಷಕರು ಸಲ್ಲಿಸಿದ ದೂರಿನ ಆಧಾರದ ಮೇಲೆ ಹಾರೋಹಳ್ಳಿ ಪೊಲೀಸರು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಾಸ್ಟೆಲ್ ರೂಮಿನಲ್ಲಿ ಡೆತ್ ನೋಟ್ ಪತ್ತೆಯಾಗಿದೆ ಎಂದು ರಾಮನಗರ ಎಸ್‌ಪಿ ಆರ್ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!