ಸಾಂದರ್ಭಿಕ ಚಿತ್ರ 
ರಾಜ್ಯ

ಕಲುಷಿತ ನೀರು ಸೇವಿಸಿ 30 ಮಂದಿ ಅಸ್ವಸ್ಥ: ಸ್ಥಳಕ್ಕೆ BWSSB ಅಧಿಕಾರಿಗಳ ಭೇಟಿ, ಪರಿಶೀಲನೆ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮುಖ್ಯ ಎಂಜಿನಿಯರ್ ಸುರೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬೆಂಗಳೂರು: ಕಲುಷಿತ ನೀರು ಸೇವಿಸಿ ನಗರದಲ್ಲಿ 30 ಮಂದಿ ಅಸ್ವಸ್ಥಗೊಂಡ ಘಟನೆಯ ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಬಿಡಬ್ಲ್ಯೂಎಸ್ಎಸ್'ಬಿ ಅಧಿಕಾರಿ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮುಖ್ಯ ಎಂಜಿನಿಯರ್ ಸುರೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಪೂರ್ವ ವಲಯದ ಪುಲಕೇಶಿ ನಗರ ವಾರ್ಡ್‌ನ ಪ್ರೊಮೆನೇಡ್ ರಸ್ತೆಯ 2ನೇ ಕ್ರಾಸ್‌ನಲ್ಲಿರುವ ಹಳೆಯ ತುಕ್ಕು ಹಿಡಿದ ನೀರಿನ ಪೈಪ್‌ನಿಂದ ನೀರು ಮಾಲಿನ್ಯ ಉಂಟಾಗಿರುವುದಾಗಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ತುಕ್ಕು ಹಿಡಿದಿದ್ದ ಪೈಪ್ ಹೊಡೆದಿದ್ದು, ಇದರಿಂದ ನೀರು ಕಲುಷಿತಗೊಂಡಿದೆ. ಇದೀಗ ಸಮಸ್ಯೆ ಸರಿಪಡಿಸಲಾಗಿದ್ದು, ಪ್ರೊಮೆನೇಡ್ ರಸ್ತೆಯ 2 ನೇ ಕ್ರಾಸ್‌ನಲ್ಲಿರುವ ಎಲ್ಲಾ ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಏತನ್ಮಧ್ಯೆ ಮಾಧ್ಯಮಗಳ ವರದಿಗಳಿಗೆ ಸ್ಥಳೀಯರು ಧನ್ಯವಾದಗಳನ್ನು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು, ಮೆಟ್ರೋ ಸಂಚಾರ ವ್ಯತ್ಯಯ!

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ತಿರಸ್ಕಾರ: 'ಸುಪ್ರೀಂ' ತೀರ್ಪು ಸ್ವಾಗತಿಸಿದ ಡಿಕೆ ಶಿವಕುಮಾರ್

ಮೂಲಭೂತವಾದಿಗಳ ಒತ್ತಡಕ್ಕೆ ಮಣಿದ ಪಾಕ್ ಸರ್ಕಾರ; ಹಿಂದೂ ಹೆಸರುಗಳ ಮರು ನಾಮಕರಣ ಮುಂದೂಡಿಕೆ!

SCROLL FOR NEXT