ಸಚಿವ ಶಿವರಾಜ್ ತಂಗಡಗಿ  
ರಾಜ್ಯ

'ನಾನು ಬಿಎಸ್ಸಿ ಪದವೀಧರ, ಕನ್ನಡ ಬರೆಯಲು ಬರದೇ ಇರುವಷ್ಟು ದಡ್ಡ ನಾನಲ್ಲ': ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಭೇಟಿ ನೀಡಿದ್ದ ಸಚಿವರು ಕನ್ನಡದಲ್ಲಿ ಶುಭವಾಗಲಿ ಬರೆಯಲು ಪರದಾಡಿದ್ದರು. ಬಳಿಕ ಬೆಂಬಲಿಗರ ಸಹಾಯದೊಂದಿಗೆ ಸರಿಯಾಗಿ ಬರೆದಿದ್ದರು.

ಕೊಪ್ಪಳ: ಕನ್ನಡದಲ್ಲಿ ಶುಭವಾಗಲಿ ಎಂದು ಬರೆಯಲು ತಡಕಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಈ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೇ ಕನ್ನಡ ಬರೆಯಲು ಬರಲ್ಲ ಎಂಬ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟ್ರೋಲ್ ಆದ ಬಗ್ಗೆ ಮಾತಾಡಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಸುಳೇಕಲ್‌ನಲ್ಲಿ ಮಾತನಾಡಿರುವ ಅವರು, ನಾನು ಬಿಎಸ್ಸಿ ಪದವೀಧರ. ಕನ್ನಡ ಬರೆಯಲು ಬರದೇ ಇರುವಷ್ಟು ದಡ್ಡ ನಾನಲ್ಲ. ಪೂರ್ತಿ ಬರೆಯುವವರೆಗೂ ಕಾಯುವ ತಾಳ್ಮೆ ಇಲ್ಲದವರು ವಿಡಿಯೋ ಹರಿಬಿಟ್ಟಿದ್ದಾರೆ ಎಂದು ಸಮಜಾಯಿಷಿ ನೀಡಿದರು.

ಕೆಲ ದಿನಗಳ ಹಿಂದೆ ಕೊಪ್ಪಳ ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಭೇಟಿ ನೀಡಿದ್ದ ಸಚಿವರು ಕನ್ನಡದಲ್ಲಿ ಶುಭವಾಗಲಿ ಎಂದು ಬರೆಯಲು ಪರದಾಡಿದ್ದರು. ಬಳಿಕ ಬೆಂಬಲಿಗರ ಸಹಾಯದೊಂದಿಗೆ ಸರಿಯಾಗಿ ಬರೆದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ.

ನಾನು ಬೇರೆ ಏನೋ ಬರೆಯಲು ಮುಂದಾಗಿದ್ದೆ. ಆದರೆ, ಅಲ್ಲಿದ್ದವರು ಶುಭವಾಗಲಿ ಅಂತ ಬರೆಯಲು ಹೇಳಿದರು. ಆಗ ಭ ಅಕ್ಷರದಲ್ಲಿ ಸ್ವಲ್ಪ ತಪ್ಪಾಗಿತ್ತು. ಆದರೆ, ಅಕ್ಷರ ಬರೆಯಲಾರದ ಸ್ಥಿತಿಯಲ್ಲಿ ನಾನಿಲ್ಲ. ನನ್ನ ಬಗ್ಗೆ ಮಾತನಾಡೋರು ನನ್ನ ತಾಳ್ಮೆ ಪರೀಕ್ಷೆ ಮಾಡಬೇಡಿ. ಕಳೆದ ಹನ್ನೆರಡು ವರ್ಷಗಳಿಂದ ರಾಜಕೀಯದಲ್ಲಿದ್ದೇನೆ.ಎಂದಾದರೂ ಕನ್ನಡ ತಪ್ಪಾಗಿ ಮಾತನಾಡಿದ್ದೇನಾ? ಯಾವುದಾದರೂ ಹೆಸರನ್ನು ತಪ್ಪಾಗಿ ಹೇಳಿದ್ದೇನಾ? ಸ್ಪಷ್ಟವಾಗಿ ಕನ್ನಡದಲ್ಲಿಯೇ ಭಾಷಣ ಮಾಡುತ್ತೇನೆ. ನನ್ನ ಸಾಮರ್ಥ್ಯವನ್ನು ನೋಡಿ ಮಾತನಾಡಿ ಎಂದರು.

ಕಳೆದ ಎರಡು ವರ್ಷ ಇಲಾಖೆ ಹೇಗೆ ನಿಭಾಯಿಸಿದ್ದೇನೆ ಅಂತ ನೋಡಿ. ನನ್ನ ಕಾರ್ಯನಿರ್ವಹಣೆ ಬಗ್ಗೆ ಸಾಹಿತಿಗಳೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ನನ್ನ ಬಗ್ಗೆ ಟೀಕೆ ಮಾಡಲು ಇದುವರೆಗೆ ಏನೂ ಸಿಕ್ಕಿಲ್ಲ ಅಂತ ಅಸಹಾಯಕರಾಗಬೇಡಿ ಎಂದು ತಂಗಡಗಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT