ರಾಜ್ಯ

ಬಿಟ್ ಕಾಯಿನ್ ಹಗರಣದಲ್ಲಿ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಗೆ ಸಂಕಷ್ಟ: SIT ನೊಟೀಸ್

ಕೆಲವು ತಿಂಗಳ ಹಿಂದೆ ಕೂಡ SIT ಅಧಿಕಾರಿಗಳು ನಲಪಾಡ್ ಅವರನ್ನು ವಿಚಾರಣೆ ಮಾಡಿ ಹೇಳಿಕೆ ಪಡೆದಿದ್ದರು. ಹ್ಯಾಕರ್ ಶ್ರೀಕಿಯಿಂದ ಕೋಟ್ಯಂತರ ರೂಪಾಯಿ ಹಣವನ್ನು ವ್ಯವಹಾರಿಕವಾಗಿ ಪಡೆದಿದ್ದಾರೆ ಎಂಬ ಆರೋಪದ ಬಗ್ಗೆ SIT ಅಧಿಕಾರಿಗಳು ತನಿಖೆ ನಡೆಸಿದ್ದರು.

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಪ್ರಕರಣದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್​ಗೆ ಬಂಧನ ಭೀತಿ ಎದುರಾಗಿದೆ. ಹ್ಯಾಕರ್ ಶ್ರೀಕಿ ಜೊತೆ ನಲಪಾಡ್​ಗೆ ಸಂಪರ್ಕ ಇದೆ ಹಾಗೂ ವ್ಯವಹಾರಿಕ ನಂಟು ಇತ್ತು ಎಂದು ತನಿಖೆಯಲ್ಲಿ ಬಯಲಾಗಿದ್ದು, ಆರೋಪ ಹಿನ್ನೆಲೆಯಲ್ಲಿ ನಾಳೆ ಫೆ.7 ರಂದು ವಿಚಾರಣೆಗೆ ಹಾಜರಾಗುವಂತೆ ಸೆಕ್ಷನ್ 41ರಡಿ ವಿಶೇಷ ತನಿಖಾ ತಂಡ (SIT) ನೋಟಿಸ್ ನೀಡಿದೆ.

ಕೆಲವು ತಿಂಗಳ ಹಿಂದೆ ಕೂಡ SIT ಅಧಿಕಾರಿಗಳು ನಲಪಾಡ್ ಅವರನ್ನು ವಿಚಾರಣೆ ಮಾಡಿ ಹೇಳಿಕೆ ಪಡೆದಿದ್ದರು. ಹ್ಯಾಕರ್ ಶ್ರೀಕಿಯಿಂದ ಕೋಟ್ಯಂತರ ರೂಪಾಯಿ ಹಣವನ್ನು ವ್ಯವಹಾರಿಕವಾಗಿ ಪಡೆದಿದ್ದಾರೆ ಎಂಬ ಆರೋಪದ ಬಗ್ಗೆ SIT ಅಧಿಕಾರಿಗಳು ತನಿಖೆ ನಡೆಸಿದ್ದರು.

ವಿಚಾರಣೆ ನಡೆಸಿದ್ದ ಪೊಲೀಸರು

ಪ್ರಮುಖ ಆರೋಪಿಯಾದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ನಲಪಾಡ್ ಆಪ್ತನಾಗಿದ್ದ ಎನ್ನುವ ಕಾರಣಕ್ಕೆ ಬೆಂಗಳೂರಿನ ಕಾಟನ್​ಪೇಟೆ ಹ್ಯಾಕಿಂಗ್ ಕೇಸ್​ನಲ್ಲಿ ಶ್ರೀಕಿ ಜೊತೆ ವ್ಯವಹಾರಿಕ ಸಂಬಂಧದ ಅನುಮಾನದಲ್ಲಿ ವಿಚಾರಣೆ ನಡೆಸಲಾಗಿತ್ತು. ಇದೀಗ ನಲಪಾಡ್ ಆರೋಪಿ ಎಂದು ಎಸ್‌ಐಟಿ ಹೇಳಿದೆ.

ಬಿಟ್‌ಕಾಯಿನ್ ಕೇಸ್​ನಲ್ಲಿ ನಲಪಾಡ್ ಆರೋಪಿ

ಈ ಹಿಂದೆ ಸಿಐಡಿ ಕಚೇರಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರನ್ನು ವಿಚಾರಣೆ ಮಾಡಲಾಗಿತ್ತು. ಹೇಳಿಕೆ ದಾಖಲು ಮಾಡಿಕೊಂಡ ಬಳಿಕ ಪ್ರಕರಣದಲ್ಲಿ ನಲಪಾಡ್ ಅವರನ್ನೂ ಆರೋಪಿಯನ್ನಾಗಿ ಮಾಡಲಾಗಿದೆ.

ಖುದ್ದು ವಿಚಾರಣೆಗೆ ಹಾಜರಾಗುವಂತೆ ನೊಟೀಸ್

ಶ್ರೀಕಿ ಜೊತೆಗೆ ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಸಿರುವ ಹಿನ್ನಲೆಯಲ್ಲಿ ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ನಲಪಾಡ್‌ಗೆ ಎಸ್‌ಐಟಿ ಅಧಿಕಾರಿಗಳು ನೊಟೀಸ್ ನೀಡಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯೊಂದಿಗೆ ನಂಟು ಹೊಂದಿದ್ದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ನಲಪಾಡ್‌ಗೆ ನೋಟಿಸ್​ ನೀಡಲಾಗಿತ್ತು.

ಆಗ ಹೇಳಿಕೆ ದಾಖಲಿಸಿಕೊಂಡಿದ್ದರು. ಆದರೆ ಈ ಬಾರಿ ನಲಪಾಡ್‌ರನ್ನೇ ಆರೋಪಿಸಿ ನೋಟಿಸ್ ನೀಡಲಾಗಿದೆ. ಸಿಐಡಿಯ ಇ-ಪ್ರೊಕ್ಯೂರ್‌ಮೆಂಟ್ ಜಾಲತಾಣ ಹ್ಯಾಕ್ ಮಾಡಿ 1 ಕೋಟಿ ರೂಪಾಯಿ ವಂಚಿಸಿದ್ದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಐಪಿಎಸ್ ಅಧಿಕಾರಿ ವಂಶಿಕೃಷ್ಣ ಅವರೆದುರು ನಲಪಾಡ್​ ಹಾಜರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

SCROLL FOR NEXT