ಸಿಎಂ ಸಿದ್ದರಾಮಯ್ಯ  
ರಾಜ್ಯ

ಕೃಷಿ ಕಾನೂನು ರದ್ದತಿ: ಪ್ರಣಾಳಿಕೆಯ ಭರವಸೆ ಈಡೇರಿಕೆ ವಿಳಂಬ; ಕಾಂಗ್ರೆಸ್ ವಿರುದ್ಧ 'ಎದ್ದೇಳು ಕರ್ನಾಟಕ' ಸಂಘಟನೆ ವಾಗ್ದಾಳಿ

ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ತೋರುತ್ತಿರುವ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಎದ್ದೇಳು ಕರ್ನಾಟಕದ ಕೇಂದ್ರ ಕಾರ್ಯಕಾರಿ ಗುಂಪಿನ ಸದಸ್ಯೆ ತಾರಾ ರಾವ್ ಅವರು ಮಾತನಾಡಿ ರಾಜ್ಯ ಸರ್ಕಾರದ ಧೋರಣೆಯ ಬಗ್ಗೆ ಅಸಹನೆ ವ್ಯಕ್ತಪಡಿಸಿದರು.

ಬೆಂಗಳೂರು: ಹಿಂದಿನ ಸರ್ಕಾರದ ಕೋಮುವಾದಿ ಅಜೆಂಡಾದ ವಿರುದ್ಧ ಸಾರ್ವಜನಿಕ ಅಭಿಪ್ರಾಯವನ್ನು ಒಟ್ಟುಗೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಮತ್ತು 2023 ರಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಕೊಡುಗೆ ನೀಡಿದ ಎದ್ದೇಳು ಕರ್ನಾಟಕ ಎಂಬ ನಾಗರಿಕ ಸಂಘಟನೆಯು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ತಿರುಗಿ ಬಿದ್ಧಿಗೆ.

ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ತೋರುತ್ತಿರುವ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಎದ್ದೇಳು ಕರ್ನಾಟಕದ ಕೇಂದ್ರ ಕಾರ್ಯಕಾರಿ ಗುಂಪಿನ ಸದಸ್ಯೆ ತಾರಾ ರಾವ್ ಅವರು ಮಾತನಾಡಿ ರಾಜ್ಯ ಸರ್ಕಾರದ ಧೋರಣೆಯ ಬಗ್ಗೆ ಅಸಹನೆ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಈಡೇರಿಸುತ್ತದೆ ಎಂದು ನಾವು ಕಾತರದಿಂದ ಕಾಯುತ್ತಿದ್ದೇವೆ. ಅವರು ಖಾತರಿಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾತನಾಡುತ್ತಲೇ ಇರುತ್ತಾರೆ, ಆದರೆ ಅವರು ಮೊದಲು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದನ್ನು ಈಡೇರಿಸಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ. ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಅವರು, ಹಿಂದಿನ ಸರ್ಕಾರವು ಪರಿಚಯಿಸಿದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ. ಕಾಂಗ್ರೆಸ್ ವಿರೋಧ ಪಕ್ಷದಲ್ಲಿದ್ದಾಗ ಕಾನೂನನ್ನು ಕಟುವಾಗಿ ವಿರೋಧಿಸಿತ್ತು, ಸುಮಾರು 19 ತಿಂಗಳ ಅಧಿಕಾರಾವಧಿಯಲ್ಲಿ ಕಾನೂನುಗಳು ಜಾರಿಯಾಗಿವೆ, ಆದರೆ ಅವರೇ ವಿರೋಧಿಸಿದ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಇಷ್ಟು ಸಮಯ ತೆಗೆದುಕೊಳ್ಳುತ್ತಿರುವುದು ಏಕೆ ಎಂದು ಕಿಡಿಕಾರಿದ್ದಾರೆ.

‘ಎದ್ದೇಳು ಕರ್ನಾಟಕ’ ತನ್ನ ವ್ಯಾಪ್ತಿಯನ್ನು ರಾಜ್ಯದ ಆಚೆಗೂ ವಿಸ್ತರಿಸಿಕೊಂಡಿದ್ದು, ದೇಶದ ಇತರ ಭಾಗಗಳಲ್ಲೂ ಚಳವಳಿ ಕವಲೊಡೆಯುತ್ತಿದೆ. ಅದರ ನಾಯಕರು ಪ್ರಸ್ತುತ ಸರ್ಕಾರದ ತಾನು ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಒತ್ತಾಯಿಸುತ್ತಿದೆ.

ಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆಯ ವಿಷಯವನ್ನು ಕೈಗೆತ್ತಿಕೊಳ್ಳಲು ಅತಿದೊಡ್ಡ ವಿರೋಧ ಪಕ್ಷವಾಗಿರುವ ಕಾಂಗ್ರೆಸ್‌ಗೆ ರಾಷ್ಟ್ರೀಯ ಮಟ್ಟದಲ್ಲಿ ಎದ್ದೇಳು ಕರ್ನಾಟಕ ಒತ್ತಾಯಿಸುತ್ತಿದೆ. ಕಾಂಗ್ರೆಸ್ ದೃಢವಾದ ನಿಲುವು ತೆಗೆದುಕೊಳ್ಳಬೇಕಾಗಿದೆ. ಎಐಸಿಸಿ ಕಳೆದ ಕೆಲವು ದಿನಗಳ ಹಿಂದೆ ಮೇಲ್ವಿಚಾರಣಾ ಸಮಿತಿಯನ್ನು ರಚಿಸಲು ಆದೇಶ ಹೊರಡಿಸಿದೆ ಆದರೆ ಇದು ಸಂಪೂರ್ಣ ಪರಿಹಾರವಲ್ಲ, ಕಾಗದದ ಬ್ಯಾಲೆಟ್ ಪೇಪರ್ ತರುವಲ್ಲಿ ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡಬೇಕು ಎಂದು ಅವರು ಹೇಳಿದರು. ಕಾಂಗ್ರೆಸ್ ಈ ಬಗ್ಗೆ ಸಾಕಷ್ಟು ದೃಢವಾದ ನಿಲುವು ತಳೆಯದಿರುವುದು ನಿರಾಶೆ ತಂದಿದೆ ಎಂದು ಬೇಸರ ವ್ಯಕ್ತ ಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT