ಬಿವೈ ವಿಜಯೇಂದ್ರ 
ರಾಜ್ಯ

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ಕ್ಲೀನ್ ಚಿಟ್ ನೀಡಿಲ್ಲ: ಬಿ.ವೈ ವಿಜಯೇಂದ್ರ

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿದ್ದಾರೆ. ಈ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತು.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಕ್ಲೀನ್ ಚಿಟ್ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿದ್ದಾರೆ. ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತು. ಇದು ಅರ್ಜಿಯನ್ನು ತಿರಸ್ಕರಿಸಿರುವುದಷ್ಟೇ, ಆದರೆ ಸಿಎಂ ಸಿದ್ದರಾಮಯ್ಯ ನಿರಪರಾಧಿ ಎಂದರ್ಥವಲ್ಲ ಎಂದು ಸ್ಪಷ್ಟಪಡಿಸಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲಿನ ಆರೋಪಗಳನ್ನು ಹೈಕೋರ್ಟ್ ಮುಕ್ತಗೊಳಿಸಿಲ್ಲ. ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸುವುದಿಲ್ಲ ಎಂದಷ್ಟೇ ಹೇಳಿದೆ. ಹೈಕೋರ್ಟ್‌ನ ಈ ನಿರ್ಧಾರವು ಮುಡಾ ಪ್ರಕರಣದಲ್ಲಿ ಸಿಎಂ ಕುಟುಂಬದ ಕೈವಾಡದ ಬಗ್ಗೆ ಬಿಜೆಪಿಯ ಪಾದಯಾತ್ರೆ ಸೇರಿದಂತೆ ಹೋರಾಟ ಮತ್ತು ಪ್ರತಿಭಟನೆಯನ್ನು ದುರ್ಬಲಗೊಳಿಸುವುದಿಲ್ಲ’ ಎಂದು ವಿಜಯೇಂದ್ರ ಹೇಳಿದರು.

ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯದ (ಇ.ಡಿ) ತನಿಖೆಗಳು ಇನ್ನೂ ನಡೆಯುತ್ತಿವೆ ಮತ್ತು ಫಲಿತಾಂಶವನ್ನು ಕಾದು ನೋಡಬೇಕಾಗಿದೆ. ಸಾವಿರಾರು ಕೋಟಿ ರೂ.ಗಳ ಮುಡಾ ಹಗರಣದಲ್ಲಿ ಸಿಎಂ ಕುಟುಂಬದ ಕೈವಾಡವನ್ನು ಬಯಲಿಗೆಳೆಯಲು ನಾವು ಹೋರಾಟ ನಡೆಸಿದ್ದೇವೆ. ಇಂದಿನ ಹೈಕೋರ್ಟ್ ತೀರ್ಪು ಮುಖ್ಯಮಂತ್ರಿ ಅಥವಾ ಅವರ ಕುಟುಂಬವನ್ನು ನಿರಪರಾಧಿ ಎಂದು ಘೋಷಿಸಿಲ್ಲ. ಲೋಕಾಯುಕ್ತ ತನಿಖೆಯ ಅಂತಿಮ ಫಲಿತಾಂಶಕ್ಕಾಗಿ ಕಾಯೇಬೇಕು ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಜಯೇಂದ್ರ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಕೆಳ ನ್ಯಾಯಾಲಯ ನೀಡಿದ್ದ ಸಮನ್ಸ್ ಅನ್ನು ರದ್ದುಗೊಳಿಸಿದೆ.

ಈ ವಿಷಯವು ದೀರ್ಘಕಾಲದವರೆಗೆ ಹೈಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ ಮತ್ತು ಆ ವಾದಗಳ ಆಧಾರದ ಮೇಲೆ, ನ್ಯಾಯಾಲಯವು ಈಗ ಸಮನ್ಸ್ ಅನ್ನು ಮರುಪರಿಶೀಲಿಸುವಂತೆ ಕೆಳ ನ್ಯಾಯಾಲಯಕ್ಕೆ ಸೂಚಿಸಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT