ಸಂಗ್ರಹ ಚಿತ್ರ 
ರಾಜ್ಯ

ಉಡಾನ್‌ ಯೋಜನೆಯಡಿ ರಾಜ್ಯದಲ್ಲಿ 5 ಹೊಸ ಮಿನಿ ಏರ್‌ಪೋರ್ಟ್‌ ನಿರ್ಮಾಣ!

ಉಡಾನ್‌ ಯೋಜನೆಯಡಿ ಏರ್‌ಸ್ಟ್ರಿಫ್ಸ್‌ ನಿರ್ಮಾಣಕ್ಕೆ ಕರ್ನಾಟಕದ ಬಳ್ಳಾರಿ, ಕೋಲಾರ, ಕುಶಾಲನಗರ, ರಾಯಚೂರು ಹಾಗೂ ಹಾಸನವನ್ನು ತಾತ್ಕಾಲಿಕವಾಗಿ ಗುರುತಿಸಲಾಗಿದೆ.

ಬೆಂಗಳೂರು: ಉಡಾನ್ (ಉಡೇ ದೇಶ್ ಕಾ ಆಮ್ ನಾಗರಿಕ್) ಯೋಜನೆಯಡಿ 5 ಹೊಸ ಏರ್‌ಸ್ಟ್ರಿಪ್‌ (ಮಿನಿ ಏರ್‌ಪೋರ್ಟ್‌) ನಿರ್ಮಾಣಕ್ಕೆ ರಾಜ್ಯದಲ್ಲಿ ಸ್ಥಳಗಳನ್ನು ನಾಗರಿಕ ವಿಮಾನಯಾನ ಸಚಿವಾಲಯವು ಗುರ್ತಿಸಿದೆ.

ಮಾಜಿ ಮುಖ್ಯಮಂತ್ರಿ ಮತ್ತು ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ ಅವರು ಬುಧವಾರ ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹಲ್ ಅವರು ಉತ್ತರಿಸಿದರು.

ಉಡಾನ್‌ ಯೋಜನೆಯಡಿ ಏರ್‌ಸ್ಟ್ರಿಫ್ಸ್‌ ನಿರ್ಮಾಣಕ್ಕೆ ಕರ್ನಾಟಕದ ಬಳ್ಳಾರಿ, ಕೋಲಾರ, ಕುಶಾಲನಗರ, ರಾಯಚೂರು ಹಾಗೂ ಹಾಸನವನ್ನು ತಾತ್ಕಾಲಿಕವಾಗಿ ಗುರುತಿಸಲಾಗಿದೆ. ಬೀದರ್‌, ಮೈಸೂರು, ವಿದ್ಯಾನಗರ, ಹುಬ್ಬಳ್ಳಿ, ಕಲಬುರಗಿ, ಬೆಳಗಾವಿ, ಶಿವಮೊಗ್ಗದಲ್ಲಿ ಈಗಾಗಲೇ ವಿಮಾನಗಳ ಹಾರಾಟ ಪ್ರಕ್ರಿಯೆ ಮುಂದುವರಿದಿದೆ. ವಿಜಯಪುರ ಹಾಗೂ ಕಾರವಾರದಲ್ಲಿ ಇನ್ನಷ್ಟೇ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಆರಂಭವಾಗಬೇಕಿದೆ ಎಂದು ಹೇಳಿದರು.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಯೊಬ್ಬರು ಮಾತನಾಡಿ, ಈ ಐದು ಏರ್‌ಸ್ಟ್ರಿಪ್‌ಗಳಿಗೆ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದ್ದು, ವಿಭಿನ್ನ ಹಂತಗಳಲ್ಲಿವೆ ಎಂದು ತಿಳಿಸಿದ್ದಾರೆ.

ಉಡಾನ್‌-ಪ್ರಾದೇಶಿಕ ಸಂಪರ್ಕ ಯೋಜನೆಯು ಮಾರುಕಟ್ಟೆ ಆಧಾರಿತವಾಗಿದೆ. ವಿಮಾನಯಾನ ಮಾರ್ಗ, ಸಂಪರ್ಕ ಸ್ಥಳಗಳು, ನಿರ್ದಿಷ್ಟ ಹಾರಾಟ ಮಾರ್ಗಗಳ ವಿಚಾರವಾಗಿ ಏರ್‌ಲೈನ್‌ ಆಪರೇಟರ್‌ಗಳ ಕಾರ್ಯಸಾಧ್ಯತಾ ಸ್ಥಿತಿಗತಿ ಆಧರಿಸಿ ನಿಯಮಿತವಾಗಿ ಬಿಡ್ಡಿಂಗ್‌ ಸುತ್ತುಗಳು ನಡೆಯಲಿವೆ. ಹಾಗೆಯೇ ವಿಮಾನಯಾನ ಸೇವೆ ಮೇಲ್ದರ್ಜೆಗೇರಿಸುವುದು, ನವೀಕರಿಸುವುದು ಸೂಕ್ತ ಬಿಡ್‌ ಹಾಗೂ ಆಯ್ದ ಏರ್‌ಲೈನ್‌ ಆಪರೇಟರ್‌ಗಳಿಗೆ ಹಂಚಿಕೆ ಮಾಡುವುದರ ಮೇಲೆ ಅವಲಂಬಿತವಾಗಿರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video