ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ  
ರಾಜ್ಯ

Aero India: ತೇಜಸ್‌ನಲ್ಲಿ ಹಾರಾಟ ನಡೆಸಿದ ಏರ್ ಚೀಫ್ ಮಾರ್ಷಲ್ AP ಸಿಂಗ್, ಸೇನಾ ಮುಖ್ಯಸ್ಥ ದ್ವಿವೇದಿ!

ಯಶಸ್ವಿ ಹಾರಾಟದ ನಂತರ ಜನರಲ್ ದ್ವಿವೇದಿ, ಇದು ತಮ್ಮ ಜೀವನದ ಅತ್ಯುತ್ತಮ ಕ್ಷಣ ಎಂದು ಬಣ್ಣಿಸಿದರು.

ಬೆಂಗಳೂರು: ನಗರದ ಯಲಹಂಕ ವಾಯುನೆಲೆಯಲ್ಲಿ ಫೆಬ್ರವರಿ 10 ರಿಂದ 14 ರವರೆಗೆ ನಡೆಯಲಿರುವ ಏಷ್ಯಾದ ಅತಿದೊಡ್ಡ ಏರೋಸ್ಪೇಸ್ ಪ್ರದರ್ಶನವಾದ ಏರೋ ಇಂಡಿಯಾ 2025 ಕ್ಕೆ ವೇದಿಕೆ ಸಿದ್ಧವಾಗಿದೆ. ದ್ವೈವಾರ್ಷಿಕವಾಗಿ ನಡೆಯುವ 15 ನೇ ಆವೃತ್ತಿಯ ಏರೋ ಇಂಡಿಯಾ ಶೋನಲ್ಲಿ ಇತ್ತೀಚಿನ ಅತ್ಯಾಧುನಿಕ ವೈಮಾನಿಕ ತಂತ್ರಜ್ಞಾನವು ಅನಾವರಣಗೊಳ್ಳಲಿದೆ.

ಇದರ ಪೂರ್ವಭಾವಿಯಾಗಿ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಭಾನುವಾರ ಯಲಹಂಕದ ವಾಯುನೆಲೆಯಲ್ಲಿ ಲಘು ಯುದ್ಧ ವಿಮಾನ (ಎಲ್‌ಸಿಎ) ತೇಜಸ್‌ನಲ್ಲಿ ಹಾರಾಟ ನಡೆಸಿದರು.

ಏರ್ ಚೀಫ್ ಮಾರ್ಷಲ್ ಅವರು ಸೇನಾ ಮುಖ್ಯಸ್ಥರೊಂದಿಗೆ ಲೋಹದ ಹಕ್ಕಿಯನ್ನು ಹಾರಿಸುತ್ತಿದ್ದಂತೆ ಎಲ್ಲರ ಕಣ್ಣುಗಳು ಆಕಾಶದತ್ತ ನೆಟ್ಟಿದವು. ಯಶಸ್ವಿ ಹಾರಾಟದ ನಂತರ ಜನರಲ್ ದ್ವಿವೇದಿ, ಇದು ತಮ್ಮ ಜೀವನದ ಅತ್ಯುತ್ತಮ ಕ್ಷಣ ಎಂದು ಬಣ್ಣಿಸಿದರು.

ಏರ್ ಚೀಪ್ ಮಾರ್ಷಲ್ ಎಪಿ ಸಿಂಗ್ ನನ್ನ ಗುರುಗಳು. ಹಾರಾಟದ ಸಂದರ್ಭದಲ್ಲಿ ಸಾಕಷ್ಟು ಕಲಿಸಿದ್ದಾರೆ. ರಾಷ್ಟ್ರೀಯ ರಕ್ಷಣಾ ಅಕಾಡೆಮಿ ದಿನಗಳಿಂದಲೂ ನಾವಿಬ್ಬರು ಒಟ್ಟಾಗಿದ್ದೇವೆ. ನಾನು ವಾಯುಪಡೆಗೆ ಹೋಗಿದ್ದರೆ ಯುದ್ಧ ವಿಮಾನ ಪೈಲಟ್ ಆಗುತ್ತಿದ್ದೆ ಎಂದು ಜನರಲ್ ದ್ವಿವೇದಿ ಸುದ್ದಿಗಾರರಿಗೆ ತಿಳಿಸಿದರು.

LCA ತೇಜಸ್ ಭಾರತೀಯ ಯುದ್ಧ ವಿಮಾನವಾಗಿದ್ದು, ಭಾರತೀಯ ವಾಯುಪಡೆ (ಐಎಎಫ್) ಮತ್ತು ಭಾರತೀಯ ನೌಕಾಪಡೆಗಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ತಯಾರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಉಗ್ರರೊಂದಿಗೆ ನಂಟು ಆರೋಪ: ಬಳ್ಳಾರಿ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

SCROLL FOR NEXT