ಮರಕ್ಕೆ ಡಿಕ್ಕಿ ಹೊಡೆದ ಬಸ್ 
ರಾಜ್ಯ

ಚಾಮರಾಜನಗರ: ಚಾಲಕನಿಗೆ ಮೂರ್ಛೆ, ಮರಕ್ಕೆ KSRTC ಬಸ್ ಡಿಕ್ಕಿ, ಹಲವರಿಗೆ ಗಾಯ

ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅದೃಷ್ಟವಶಾತ್​​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಚಾಮರಾಜನಗರ: KSRTC ಬಸ್​ ಚಾಲಕರೊಬ್ಬರು ಮೂರ್ಛೆ ಬಂದು ಪ್ರಜ್ಞೆ ತಪ್ಪಿದ ಪರಿಣಾಮ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪ್ರಯಾಣಿಕರು ಗಾಯಗೊಂಡ ಘಟನೆ ಜಿಲ್ಲೆಯ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ಭಾನುವಾರ ನಡೆದಿದೆ.

ಹನೂರು ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್​​ ಚಾಲಕನಿಗೆ ದಿಢೀರ್ ಮೂರ್ಛೆ ರೋಗ ಕಾಣಿಸಿಕೊಂಡಿದೆ. ಪರಿಣಾಮ, ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದು, ಮುಂಭಾಗದ ಗಾಜು ನಜ್ಜುಗುಜ್ಜಾಗಿದೆ. ಇದರಿಂದ ಬಸ್ ಮುಂಭಾಗದಲ್ಲಿಯೇ ಕುಳಿತಿದ್ದ ಐವರು ಪ್ರಯಾಣಿಕರು ಸೇರಿದಂತೆ 6 ಮಂದಿಗೆ ಗಾಯಗಳಾಗಿವೆ.

ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅದೃಷ್ಟವಶಾತ್​​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್​ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆಯದೇ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ ಎಡಭಾಗಕ್ಕೆ ಪಲ್ಟಿಯಾಗಿದ್ದರೆ ಅಪಾರ ಪ್ರಮಾಣದ ಸಾವು ನೋವಾಗುವ ಸಾಧ್ಯತೆ ಇತ್ತೆಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ