ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ 
ರಾಜ್ಯ

ಸಿಎಂ ಸಿದ್ದರಾಮಯ್ಯ ಪತ್ನಿ, ಸಚಿವ ಬೈರತಿಗೆ ಮತ್ತೆ ರಿಲೀಫ್: ಇಡಿ ಸಮನ್ಸ್ ಗೆ ತಡೆ ವಿಸ್ತರಿಸಿದ ಹೈಕೋರ್ಟ್

ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. ಹೀಗಾಗಿ ಫೆಬ್ರವರಿ 20ರ ರವರೆಗೆ ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆಯಾಗಿದೆ.

ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ)ದ ನೋಟಿಸ್​ ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಸೋಮವಾರ ವಿಸ್ತರಿಸಿದೆ.

ಇಡಿ ಸಮನ್ಸ್​ ರದ್ದು ಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. ಹೀಗಾಗಿ ಫೆ. 20ರ ರವರೆಗೆ ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇದರಿಂದ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್​ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ಇಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶ್ ಅವರು​ ಇಡಿ ಸಮನ್ಸ್ ಪ್ರಶ್ನಿಸಿ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಫೆಬ್ರವರಿ 10ರ ವರೆಗೆ ಇಡಿ ನೀಡಿದ್ದ ಸಮನ್ಸ್‌ಗೆ ತಡೆ ನೀಡಿದ್ದರು. ಇದೀಗ ಮತ್ತೆ ಫೆಬ್ರವರಿ 20 ರವರೆಗೆ ತಡೆಯಾಜ್ಞೆಯನ್ನು ವಿಸ್ತರಿಸಲಾಗಿದೆ.

ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ಅವರು, ಇಡಿ ಸಮನ್ಸ್ ಜಾರಿಗೊಳಿಸಿದಾಗ ಹೈಕೋರ್ಟ್ ಮಧ್ಯಪ್ರವೇಶ ಮಾಡಬಾರದು. ಈ ಬಗ್ಗೆ ಸುಪ್ರೀಂಕೋರ್ಟ್ ನ ಇತ್ತೀಚಿನ ತೀರ್ಪು ಇದೆ ಎಂದರು.

ಸಚಿವ ಬೈರತಿ ಸುರೇಶ್ ಪರ ವಾದ ಮಂಡಿಸಿದ ವಕೀಲ ಸಿ.ವಿ.ನಾಗೇಶ್, ಇಡಿ ತನಿಖಾಧಿಕಾರಿಗಳು ನಮೂನೆಯೊಂದನ್ನು ಕಳುಹಿಸಿದ್ದಾರೆ. ಇದರಲ್ಲಿ ಬೈರತಿ ಕುಟುಂಬದವರು, ಉದ್ಯೋಗಿಗಳು ಇತರರ ವಿವರ ಕೇಳಿದ್ದಾರೆ. ಇದು ಅವರ ಖಾಸಗಿತನದ ಸ್ಪಷ್ಟ ಉಲ್ಲಂಘನೆ.14 ಸೈಟ್ ಹಂಚಿಕೆಗೂ ಬೈರತಿ ಸುರೇಶ್ ಗೂ ಸಂಬಂಧವಿಲ್ಲ. ಮುಡಾದಲ್ಲಿ ಬೈರತಿ ಸುರೇಶ್ ಯಾವುದೇ ಹುದ್ದೆ ವಹಿಸಿಕೊಂಡಿಲ್ಲ. ಹೀಗಾಗಿ ಇಡಿ ಸಮನ್ಸ್ ಕಾನೂನುಬಾಹಿರವೆಂದು ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video