ಪಾರ್ಥಿವ ಶರೀರದ ಮೆರವಣಿಗೆ ನಡೆಸುತ್ತಿರುವುದು. 
ರಾಜ್ಯ

ಶಿವಮೊಗ್ಗ: ತರಬೇತಿ ವೇಳೆ ಹುತಾತ್ಮನಾದ ಯೋಧ ಮಂಜುನಾಥ್ ಅಂತ್ಯಕ್ರಿಯೆ

ಪಾರ್ಥಿವ ಶರೀರವನ್ನು ಬೆಳಿಗ್ಗೆ ಶಿವಮೊಗ್ಗ ನಗರಕ್ಕೆ ತರಲಾಯಿತು. ಈ ವೇಳೆ ಸಂಸದ ಬಿ.ವೈ. ರಾಘವೇಂದ್ರ ಮತ್ತು ಶಾಸಕ ಎಸ್.ಎನ್. ಚನ್ನಬಸಪ್ಪ ಅಂತಿಮ ನಮನ ಸಲ್ಲಿಸಿದರು.

ಶಿವಮೊಗ್ಗ: ಆಗ್ರಾದಲ್ಲಿ ತರಬೇತಿ ವೇಳೆ ಪ್ಯಾರಚೂಟ್ ಜಿಗಿತದಲ್ಲಿ ಹುತಾತ್ಮರಾದ ವಾರಂಟ್ ಆಫೀಸರ್ ಜಿ.ಎಸ್.ಮಂಜುನಾಥ್ ಅಂತ್ಯಕ್ರಿಯೆ ಸ್ವಗ್ರಾಮ ಸಂಕೂರಿನಲ್ಲಿ ಸಕಲ ಸರ್ಕಾರ ಗೌರವಗಳೊಂದಿಗೆ ಭಾನುವಾರ ನೆರವೇರಿತು.

ಪಾರ್ಥಿವ ಶರೀರವನ್ನು ಬೆಳಿಗ್ಗೆ ಶಿವಮೊಗ್ಗ ನಗರಕ್ಕೆ ತರಲಾಯಿತು. ಈ ವೇಳೆ ಸಂಸದ ಬಿ.ವೈ. ರಾಘವೇಂದ್ರ ಮತ್ತು ಶಾಸಕ ಎಸ್.ಎನ್. ಚನ್ನಬಸಪ್ಪ ಅಂತಿಮ ನಮನ ಸಲ್ಲಿಸಿದರು, ನಂತರ ಬೆಳಿಗ್ಗೆ 11.30ಕ್ಕೆ ಸೇನಾ ವಾಹನದಲ್ಲಿ ಹೊಸನಗರಕ್ಕೆ ತರಲಾಯಿತು. ನಂತರ ಹೊಸನಗರಕ್ಕೆ ಕರೆದೊಯ್ಯಲಾಯಿತು. ಬಳಿಕ, ಊರಿನ ಪ್ರಮುಖ ರಸ್ತೆಗಳಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಯಿತು. ಸುಮಾರು 12 ಕಿ.ಮೀ.ಮೆರವಮಿಗೆಯಲ್ಲಿ ಸಾಗಿತು.

ಹುಟ್ಟೂರಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ನಂತರ ಶಾಸಕ ಬೇಲೂರು ಗೋಪಾಲಕೃಷ್ಣ, ತಹಶೀಲ್ದಾರ್ ರಶ್ಮಿ ಹಾಲೇಶ್ ಮತ್ತು ಕಾಂಗ್ರೆಸ್ ನಾಯಕ ಕಲಗೋಡು ರತ್ನಾಕರ್ ಗೌರವ ಸಲ್ಲಿಸಿದರು.

ಬಳಿಕ ರಾಜ್ಯ ಪೊಲೀಸ್ ತುಕಡಿ ಹಾಗೂ ವಾಯುಸೇನೆ ಕುಶಲತೋಪು ಸಿಡಿಸಿ ಅಂತಿಮ ನಮನ ಸಲ್ಲಿಸಿದ ನಂತರ, ಪಾರ್ಥೀವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್