ರಾಜನಾಥ್ ಸಿಂಗ್ 
ರಾಜ್ಯ

Aero India 2025: ಭದ್ರತೆ ದುರ್ಬಲವಾಗಿದ್ದರೆ ಶಾಂತಿ ಅಸಾಧ್ಯ; ಬೆಂಗಳೂರಿನಲ್ಲಿ ಏರ್ ಶೋ ಉದ್ಘಾಟಿಸಿದ ರಾಜನಾಥ್ ಸಿಂಗ್

ಇಂದು ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ 2025 ವೈಮಾನಿಕ ಪ್ರದರ್ಶನವನ್ನು ರಾಜನಾಥ್ ಸಿಂಗ್ ಉದ್ಘಾಟಿಸಿದರು.

ಬೆಂಗಳೂರು: ಭದ್ರತೆ ದುರ್ಬಲವಾಗಿದ್ದರೆ ಶಾಂತಿ ಸ್ಥಾಪಿಸಲು ಸಾಧ್ಯವಿಲ್ಲ ಮತ್ತು ಬಲಿಷ್ಠರಾಗಿರುವುದರಿಂದ ಮಾತ್ರ ನಾವು ಉತ್ತಮ ಜಗತ್ತಿಗಾಗಿ ಕೆಲಸ ಮಾಡಲು ಸಾಧ್ಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.

ಇಂದು ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ 2025 ವೈಮಾನಿಕ ಪ್ರದರ್ಶನವನ್ನು ರಾಜನಾಥ್ ಸಿಂಗ್ ಉದ್ಘಾಟಿಸಿದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಹ ಸಮಾರಂಭದಲ್ಲಿ ಭಾಗವಹಿಸಿದ್ದರು.

ಬಳಿಕ ಮಾತನಾಡಿದ ರಾಜನಾಥ್ ಸಿಂಗ್, ಜಾಗತಿಕ ಅನಿಶ್ಚಿತತೆಗಳನ್ನು ಉಲ್ಲೇಖಿಸಿ, ಒಂದು ದೊಡ್ಡ ದೇಶವಾಗಿ, ಭಾರತ ಯಾವಾಗಲೂ ಶಾಂತಿ ಮತ್ತು ಸ್ಥಿರತೆಯ ಪ್ರತಿಪಾದಕವಾಗಿದೆ ಎಂದು ಹೇಳಿದರು.

"ಏರೋ ಇಂಡಿಯಾದಲ್ಲಿ ವಿದೇಶಗಳಿಂದ ಬಂದ ನಮ್ಮ ಸ್ನೇಹಿತರ ಉಪಸ್ಥಿತಿಯು(ಏರೋ ಇಂಡಿಯಾದಲ್ಲಿ) ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯದ ನಮ್ಮ ದೃಷ್ಟಿಕೋನವನ್ನು ಹಂಚಿಕೊಳ್ಳುತ್ತಾರೆ ಎಂಬುದಕ್ಕೆ ಸಾಕ್ಷಿಯಾಗಿದೆ" ಎಂದರು.

ಶಿವಕುಮಾರ್ಉತ್ತರ ಪ್ರದೇಶದಲ್ಲಿ ಸಂಸ್ಕೃತಿಯ ಮಹಾ ಕುಂಭಮೇಳ ನಡೆಯುತ್ತಿದೆ. ಇಲ್ಲಿ ಬೆಂಗಳೂರಿನಲ್ಲಿ ತಂತ್ರಜ್ಞಾನ ಹಾಗೂ ಯುದ್ಧೋಪಕರಣಗಳ, ಯುದ್ಧ ವಿಮಾನಗಳ ಮಹಾ ಕುಂಭ ನಡೆಯುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

ಹೊಸ ಸವಾಲುಗಳಿಗೆ ಉತ್ತರ ಹುಡುಕುವ ಕಾರ್ಯ ಮಾಡಬೇಕಿದೆ. ಶಾಂತಿ, ಶಕ್ತಿ ನಮ್ಮ ಮಂತ್ರ ಬಲ ಆಗಬೇಕಿದೆ. ನಾವು ಬಲಾಢ್ಯರಾಗಿ ವಿಶ್ವದಲ್ಲಿ ನಮ್ಮ ಸ್ಥಾನ ಪ್ರದರ್ಶನ ಮಾಡಬೇಕಿದೆ. ಅತ್ಯಾಧುನಿಕ ಅನ್ವೇಷಣೆ ಮೂಲಕ ನಾವು ಮುಂದೆ ಹೆಜ್ಜೆ ಇಟ್ಟಿದ್ದೇವೆ ಏರ್​ಶೋ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇವೆ. 10 ವರ್ಷಗಳಿಂದ ವೈಮಾನಿಕ‌ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದೇವೆ. ಬಜೆಟ್​ನಲ್ಲಿ ರಕ್ಷಣಾ ಕ್ಷೇತ್ರಕ್ಕೆ 1,080 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದು ಅವರು ತಿಳಿಸಿದರು.

ಬೆಂಗಳೂರು ಭಾರತದ ಏರ್‌ಫೋರ್ಸ್‌ನ ಪ್ರಮುಖ ಕೇಂದ್ರವಾಗಿದೆ ಮತ್ತು ಏರೋಸ್ಪೇಸ್ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT