ಸಂಗ್ರಹ ಚಿತ್ರ 
ರಾಜ್ಯ

ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು BJP ಸದಸ್ಯರ ಸದಸ್ಯತ್ವ ರದ್ದುಗೊಳಿಸಿದ ಆಯುಕ್ತರು!

ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ್ ಅವರು ವಾರ್ಡ್‌ ನಂ.41ರ ಸದಸ್ಯ ಮಂಗೇಶ ಪವಾರ ಹಾಗೂ ವಾರ್ಡ್ ನಂ.23ರ ಜಯಂತ ಜಾಧವ ಅವರ ಪಾಲಿಕೆ ಸದಸ್ಯತ್ವ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ: ತಮ್ಮ ಪತ್ನಿಯರ ಹೆಸರಿನಲ್ಲಿ ಮಹಾನಗರ ಪಾಲಿಕೆಯ ಮಳಿಗೆಗಳನ್ನು ಪಡೆದ ಪ್ರಕರಣದಡಿ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಲಾಗಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ್ ಅವರು ವಾರ್ಡ್‌ ನಂ.41ರ ಸದಸ್ಯ ಮಂಗೇಶ ಪವಾರ ಹಾಗೂ ವಾರ್ಡ್ ನಂ.23ರ ಜಯಂತ ಜಾಧವ ಅವರ ಪಾಲಿಕೆ ಸದಸ್ಯತ್ವ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

ತಿಂಡಿ ಮಳಿಗೆಗಳ ಹರಾಜಿನಲ್ಲಿ ಸದಸ್ಯ ಮಂಗೇಶ ಪವಾರ ಅವರು ತಮ್ಮ ಪತ್ನಿ ನೀತಾ ಪವಾರ ಹಾಗೂ ಜಯಂತ ಜಾಧವ ಅವರು ತಮ್ಮ ಪತ್ನಿ ಸೋನಾಲಿ ಜಾಧವ ಅವರ ಹೆಸರಿನಲ್ಲಿ ಮಳಿಗೆಗಳನ್ನು ಬಾಡಿಗೆಗೆ ಪಡೆದಿದ್ದರು. ಪಾಲಿಕೆ ಸದಸ್ಯರಾಗುವ ಮುನ್ನವೇ ಅವರು ಬಾಡಿಗೆ ಪಡೆದುಕೊಂಡಿದ್ದರು. ಸದಸ್ಯರಾಗಿ ಆಯ್ಕೆಯಾದ ಬಳಿಕವೂ ಅದನ್ನು ವಾಪಸ್​ ನೀಡಿರಲಿಲ್ಲ. ಹೀಗಾಗಿ ಸಾಮಾಜಿಕ ಕಾರ್ಯಕರ್ತ ಸುಜೀತ ಮುಳಗುಂದ 2023ರ ನವೆಂಬರ್ 9ರಂದು ದೂರು ನೀಡಿ ಸದಸ್ಯರ ಸದಸ್ಯತ್ವವನ್ನು ರದ್ದುಗೊಳಿಸುವ ಮನವಿ ಮಾಡಿದ್ದರು. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ಪ್ರಾದೇಶಿಕ ಆಯುಕ್ತರು ಇದೀಗ ಪಾಲಿಕೆ ಸದಸ್ಯತ್ವ ರದ್ದುಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT