ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ 
ರಾಜ್ಯ

Mysuru: ಅವಹೇಳನಕಾರಿ ಪೋಸ್ಟ್; ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ; ಓರ್ವನ ಬಂಧನ; ಏಳು ಪೊಲೀಸರಿಗೆ ಗಾಯ; Video

ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಆರೋಪದಲ್ಲಿ ಸುರೇಶ್‌ ಎಂಬಾತನನ್ನು (32) ಪೊಲೀಸರು ಬಂಧಿಸಿದ್ದಾರೆ.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಒಂದು ಸೋಷಿಯಲ್‌ ಮೀಡಿಯಾ ಪೋಸ್ಟ್ ಸಾಮಾಜಿಕ ಸ್ವಾಸ್ಥ್ಯವನ್ನೇ ಕೆಡಿಸಿದೆ. ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಪೋಸ್ಟ್ ಮಾಡಿದ್ದ.

ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಆರೋಪದಲ್ಲಿ ಸುರೇಶ್‌ ಎಂಬಾತನನ್ನು (32) ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸೋಮವಾರ ರಾತ್ರಿ ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆ ಮುಂಭಾಗ ಮುಸ್ಲಿಂ ಸಮುದಾಯದ ಪ್ರಮುಖರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದ್ದರು.

ಯಾವಾಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತೋ ಉದಯಗಿರಿ ಪೊಲೀಸರು ಸ್ವಯಂಪ್ರೇರಿತ ಕೇಸ್‌ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಆ ಪೋಸ್ಟ್ ಒಂದು ಸಮುದಾಯದ ಯುವಕರನ್ನು ರೊಚ್ಚಿಗೆಬ್ಬಿಸಿತ್ತು. ತಕ್ಷಣ ಅವರು ಉದಯಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸರು, ಕೆಲ ಧಾರ್ಮಿಕ ಮುಖಂಡರು ಹಾಗೂ ರಾಜಕೀಯ ಮುಖಂಡರು ಅಲ್ಲಿದ್ದ ಯುವಕರಿಗೆ ಶಾಂತಿ ಕಾಪಾಡುವಂತೆ ಮನವರಿಕೆ ಮಾಡಲು ಪ್ರಯತ್ನಿಸಿದರು. ಆದರೆ ಅಲ್ಲಿದ್ದ ಗುಂಪು ಇದನ್ನು ಕೇಳಲು ಸಿದ್ಧರಿರಲಿಲ್ಲ.‌ ಏಕಾಏಕಿ ಘೋಷಣೆ ಕೂಗುತ್ತಾ ಪೊಲೀಸರು ಹಾಗೂ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದರು.

ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದಾಗ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಲಾಠಿ ಪ್ರಹಾರ ಮಾಡಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು. ಘಟನೆಯಲ್ಲಿ ಕೆಲವರಿಗೆ ಕಲ್ಲೇಟಿನಿಂದ ಗಾಯವಾಗಿದೆ. ಶಾಂತಿನಗರ ಮುಖ್ಯರಸ್ತೆ, ಮಹದೇವಪುರ ರಸ್ತೆ ಬಂದ್‌ ಮಾಡಿ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ದೆಹಲಿ ಚುನಾವಣೆ ಫಲಿತಾಂಶದ ಬಳಿಕ ರಾಹುಲ್‌ ಗಾಂಧಿ, ಕೇಜ್ರಿವಾಲ್‌, ಅಖಿಲೇಶ್‌ ಯಾದವ್‌ ಅವರ ಅರೆನಗ್ನ ಫೋಟೊ ಸೃಷ್ಟಿಸಿ, ಅವರ ತೊಡೆಯಲ್ಲಿ ವ್ಯಕ್ತಿಯೊಬ್ಬರು ನಮಾಜ್‌ ಮಾಡುತ್ತಿರುವಂತೆ, ಬುರ್ಖಾ ಧರಿಸಿದ ಮಹಿಳೆಯಂತೆ ಚಿತ್ರಿಸಿದ್ದಾರೆ.

ಏಳು ಪೊಲೀಸ್ ಅಧಿಕಾರಿಗಳಿಗೆ ಗಾಯ

ಉದಯಗಿರಿ ಘರ್ಷಣೆಯಲ್ಲಿ ಏಳು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಮತ್ತು ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು ಬಂಧಿಸಲು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಮೈಸೂರು ಎಡಿಜಿಪಿ ಹಿತೇಂದ್ರ ಹೇಳಿದ್ದಾರೆ.

ಅವಹೇಳನಕಾರಿ ಪೋಸ್ಟರ್ ಹಾಕಿದ್ದ ಪ್ರಕರಣದ ಆರೋಪಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂಬ ಊಹಾಪೋಹಾದಿಂದ ಪ್ರತಿಭಟನೆಗಳು ಭುಗಿಲೆದ್ದವು. ಹಿಂಸಾಚಾರಕ್ಕೆ ಯಾರು ಕಾರಣರು ಮತ್ತು ಯಾವುದೇ ಸಂಘಟನೆ ಭಾಗಿಯಾಗಿದೆಯೇ ಎಂದು ತನಿಖೆಯಿಂದ ತಿಳಿದು ಬರುತ್ತದೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಹಿತೇಂದ್ರ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT