ಸಿಎಂ ಸಿದ್ದರಾಮಯ್ಯ- ಸಂಸದ ತೇಜಸ್ವಿ ಸೂರ್ಯ online desk
ರಾಜ್ಯ

"ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಪ್ರಕ್ರಿಯೆ ಆರಂಭಿಸಿದ್ದೇ ನೀವು, ದರ ಕಡಿಮೆ ಮಾಡಲು ನಿಮ್ಮನ್ನು ತಡೆಯುತ್ತಿರುವುದು ಏನು?": CM ಗೆ Tejasvi Surya

ಸಾಮಾಜಿಕ ಜಾಲತಾಣದಲ್ಲಿ ಸಿಎಂ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿದ್ದೇ ರಾಜ್ಯ ಸರ್ಕಾರ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯ ವಿಷಯವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಮೆಟ್ರೋ ಪ್ರಯಾಣ ದರ ಏರಿಕೆಯ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದರು.

ಸಿಎಂ ಸಿದ್ದರಾಮಯ್ಯ ಅವರ ಸ್ಪಷ್ಟನೆಯ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿಎಂ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿದ್ದೇ ರಾಜ್ಯ ಸರ್ಕಾರ ಎಂದು ಆರೋಪಿಸಿದ್ದಾರೆ.

"2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿಯೊಂದು ಇಲಾಖೆಗಳಲ್ಲಿಯೂ ಬೆಲೆ ಏರಿಕೆ ಸಾಮಾನ್ಯವಾಗಿದೆ. ಬಿಎಂಟಿಸಿ ಪ್ರಯಾಣ ದರ, ವಿದ್ಯುತ್‌ ಬಿಲ್‌, ಆಸ್ತಿ ತೆರಿಗೆ, ಅಬಕಾರಿ ಸುಂಕ ಹೀಗೆ ಪ್ರತಿಯೊಂದರ ಬೆಲೆ ಏರಿಕೆಯಾಗಿದೆ.

ಪ್ರಸ್ತುತ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಕುರಿತು ದರ ನಿಗದಿ ಸಮಿತಿ ರಚಿಸಲು ಮತ್ತು ಇದರ ಸಂಪೂರ್ಣ ಪ್ರಕ್ರಿಯೆಯನ್ನು ಪ್ರಾರಂಭಿಸಲು BMRCL ಗೆ ರಾಜ್ಯ ಸರ್ಕಾರ ಸಲಹೆ ನೀಡಿದ್ದು, ಸಮಿತಿಯಲ್ಲಿನ ರಾಜ್ಯ ಪ್ರತಿನಿಧಿಗಳ ಪ್ರಯಾಣದ ದರ ಏರಿಕೆಯ ಒತ್ತಾಯದ ಮೇರೆಗೆ ಪರಿಷ್ಕೃತ ದರದ ವರದಿಯನ್ನು ಬಿಡುಗಡೆ ಮಾಡಲಾಗಿದೆ" ಎಂದು ಹೇಳಿದ್ದಾರೆ.

ಪ್ರಯಾಣದ ದರ ಏರಿಕೆಯಿಂದ ಬೆಂಗಳೂರಿನ ಜನತೆಗೆ ಉಂಟಾಗುವ ತೊಂದರೆಗಳ ಅರಿತು ಬಿಜೆಪಿ ದರ ಏರಿಕೆಯನ್ನು ಮೊದಲಿನಿಂದಲೂ ವಿರೋಧಿಸುತ್ತಲೇ ಬಂದಿದೆ ಎಂದು ಹೇಳಿರುವ ಸಂಸದ ತೇಜಸ್ವಿ, ಮುಖ್ಯಮಂತ್ರಿಗಳಿಗೆ ಈ ಸಮಸ್ಯೆ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಪರಿಷ್ಕೃತ ದರಗಳ ಏರಿಕೆಯನ್ನು ಮರು ಪರಿಶೀಲಿಸಿ ನ್ಯಾಯಸಮ್ಮತ ದರ ನಿಗದಿಪಡಿಸಲು ನೆರವಾಗಬೇಕು, ದರ ಕಡಿಮೆ ಮಾಡಲು ನಿಮ್ಮನ್ನು ಯಾವ ಕಾನೂನು ಅಡ್ಡಿಪಡಿಸುವುದಿಲ್ಲ. ಬೆಂಗಳೂರಿನ ಸಂಸದರು ಹಾಗೂ ದರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತೊಡಗಿರುವ ಕೇಂದ್ರ ಸರ್ಕಾರದ ಅಧಿಕಾರಿಗಳು ಬೆಂಗಳೂರಿನ ಜನರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯದಲ್ಲಿ ತಮಗೆ ಸಲಹೆ ಮತ್ತು ಸಹಕಾರ ನೀಡಲು ಸಿದ್ದರಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!