ಹಾವೇರಿ: ಎತ್ತಿನಗಾಡಿಗೆ ಬೈಕ್ ಡಿಕ್ಕಿ; ಮೈಲಾರ ಜಾತ್ರೆಗೆ ತೆರಳುತ್ತಿದ್ದ BSc ವಿದ್ಯಾರ್ಥಿಗಳು ಸೇರಿ ಮೂವರು ಸಾವು
ಆಕಾಶ್ ಮತ್ತು ದರ್ಶನ್ ಅಂತಿಮ ವರ್ಷದ ಬಿಎಸ್ಸಿ ಓದುತ್ತಿದ್ದರು. ಶಶಿಕುಮಾರ್ ಹನುಮನಮಟ್ಟಿ ಗ್ರಾಮದಲ್ಲಿನ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು.
ಹಾವೇರಿ: ಎತ್ತಿನಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ನಡೆದಿದೆ.
ಶಶಿಕುಮಾರ್ ಉಪ್ಪಾರ (25), ಆಕಾಶ್ ಬಿರಾದಾರ (23) ಮತ್ತು ದರ್ಶನ್ (23) ಮೃತ ದುರ್ದೈವಿಗಳು. ಈ ಮೂವರು ಹನುಮನಮಟ್ಟಿಯಿಂದ ಮೈಲಾರ ಜಾತ್ರೆಗೆ ಬೈಕ್ನಲ್ಲಿ ಹೊರಟಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಆಕಾಶ್ ಮತ್ತು ದರ್ಶನ್ ಅಂತಿಮ ವರ್ಷದ ಬಿಎಸ್ಸಿ ಓದುತ್ತಿದ್ದರು. ಶಶಿಕುಮಾರ್ ಹನುಮನಮಟ್ಟಿ ಗ್ರಾಮದಲ್ಲಿನ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.