ಅಕ್ರಮ ಮರಳು ಗಣಿಗಾರಿಕೆ 
ರಾಜ್ಯ

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಬೆದರಿಕೆ, ನಿಂದನೆ: ಮೂವರ ಬಂಧನ

ಶಿವಮೊಗ್ಗದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಸವೇಶ್ ಅವರು ಮಹಿಳಾ ಅಧಿಕಾರಿಗೆ ಅವಾಚ್ಯವಾಗಿ ಬಾಯಿಗೆ ಬಂದಂತೆ ಬೈದಿರುವುದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭದ್ರಾವತಿ: ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿಯೊಬ್ಬರು ದಾಳಿ ನಡೆಸಿದ ಸಂದರ್ಭದಲ್ಲಿ ಜಿಲ್ಲೆಯ ಶಾಸಕರೊಬ್ಬರ ಪುತ್ರ ಅಶ್ಲೀಲ ಪದಗಳಿಂದ ನಿಂದಿಸಿ, ಬೆದರಿಕೆ ಹಾಕಿದ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದು, ಈ ನಡುವಲ್ಲೇ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಕಟ್ಟೆಯ ರವಿ (30), ಹಾಸನ ಜಿಲ್ಲೆಯ ಅರಕಲಗೂಡಿನ ವರುಣ್ (34) ಮತ್ತು ಭದ್ರಾವತಿ ತಾಲೂಕಿನ ಸುರೇಂದ್ರಗೌಡ ಕ್ಯಾಂಪ್‌ನ ಅಜಯ್ (28) ಎಂದು ಗುರುತಿಸಲಾಗಿದೆ.

ಪೊಲೀಸ್ ದೂರು ದಾಖಲಿಸಿದ ಮಹಿಳಾ ಅಧಿಕಾರಿಗಳು, ಆರೋಪಿಗಳು ತಮ್ಮ ತಂಡದ ಸದಸ್ಯರ ಮೇಲೆ ಭಾರೀ ವಾಹನ ಚಲಾಯಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಹೇಳಿಕೊಂಡಿದ್ದಾರೆ.

ಈ ಮಧ್ಯೆ, ಶಾಸಕನ ಪುತ್ರನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಭದ್ರಾವತಿಯ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಶಿವಮೊಗ್ಗದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಸವೇಶ್ ಅವರು ಮಹಿಳಾ ಅಧಿಕಾರಿಗೆ ಅವಾಚ್ಯವಾಗಿ ಬಾಯಿಗೆ ಬಂದಂತೆ ಬೈದಿರುವುದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹಿಳಾ ಅಧಿಕಾರಿ ಅಕ್ರಮ ಮರಳು ಗಣಿಗಾರಿಕೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಅಲ್ಲಿದ್ದ ವ್ಯಕ್ತಿಯೊಬ್ಬ ಯಾರಿಗೋ ಫೋನ್ ಮಾಡಿ ನಡೆದಿರುವ ಘಟನೆ ವಿವರಿಸುತ್ತಾನೆ. ಅತ್ತ ಕಡೆಯಿಂದ ಮಾತನಾಡುತ್ತಿದ್ದ ವ್ಯಕ್ತಿಯು ಅಧಿಕಾರಿಗೆ ಪೋನ್ ಕೊಡು ಎನ್ನುತ್ತಾನೆ. ಆದರೆ, ಮಹಿಳಾ ಅಧಿಕಾರಿ ನನ್ನ ಫೋನ್‌ಗೆ ಕರೆ ಮಾಡಲು ತಿಳಿಸಿ ಎಂದು ಮಾತನಾಡಲು ನಿರಾಕರಿಸುತ್ತಾರೆ. ಆಗ ಸ್ಥಳದಲ್ಲಿದ್ದ ವ್ಯಕ್ತಿ ಸ್ಪೀಕರ್ ಆನ್ ಮಾಡುತ್ತಾನೆ. ಅತ್ತ ಕಡೆಯಿಂದ ಅಶ್ಲೀಲ ಪದ ಬಳಸಿ ಮಹಿಳಾ ಅಧಿಕಾರಿಗೆ ಬೈಯ್ಯಲಾಗುತ್ತದೆ. ಅಧಿಕಾರಿ ಪ್ರತಿರೋಧ ತೋರಿದರೂ ಅಶ್ಲೀಲ ಪದ ಬಳಕೆ ಮಾಡಿ ಆತ ಮಾತನಾಡುತ್ತಾನೆ. ಈ ವಿಡಿಯೋ ವೈರಲ್ ಆಗಿದ್ದು, ಪ್ರತಿಪಕ್ಷಗಳು ಆಡಳಿತಾರೂಢ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ, ಭೂಕುಸಿತ; ಐವರು ಮಕ್ಕಳು ಸೇರಿ 11 ಮಂದಿ ಸಾವು

ಸಚಿವ ಸಂಪುಟಕ್ಕೆ ಮರಳಲು ಕೊನೆಯ ಯತ್ನ: ದೆಹಲಿಯಲ್ಲಿ ರಾಜಣ್ಣ ಶಕ್ತಿ ಪ್ರದರ್ಶನ; ಮೂಲೆಗುಂಪು ಮಾಡಿದ್ರೆ ಬಿಜೆಪಿ ಸೇರ್ಪಡೆ?

ಬೆಂಗಳೂರಿಗೆ ಕಾವೇರಿ ನೀರು ತಂದದ್ದು ಹೆಗಡೆ: ಪರಿಶುದ್ಧ ರಾಜಕಾರಣಿಯನ್ನು ಏಣಿಯಂತೆ ಬಳಸಿ ಬಿಸಾಡಿದರು; ಡಿ.ಕೆ ಶಿವಕುಮಾರ್

ಬೆಳ್ತಂಗಡಿ: ಯಾವ ಶೋ ರೂಂ ನಿಂದ 'ಬುರುಡೆ' ತಂದಿದ್ದೀರಿ ಅಂತಾ ಕೇಳಿದ್ರು! SIT ವಿಚಾರಣೆ ಬಳಿಕ ಗರಂ ಆದ ಹೋರಾಟಗಾರ! Video

ದೊಡ್ಡಬಳ್ಳಾಪುರ: ಗಣೇಶ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟಗೊಂಡು ಬಾಲಕ ಸಾವು; ಆರು ಮಂದಿಗೆ ಗಾಯ

SCROLL FOR NEXT