ಈಜಿಪುರ ಮೇಲ್ಸೇತುವೆ ಕಾಮಗಾರಿ. 
ರಾಜ್ಯ

ಬೆಂಗಳೂರು: ಡಿಸೆಂಬರ್ ವೇಳೆಗೆ ಈಜಿಪುರ ಮೇಲ್ಸೇತುವೆ ಯೋಜನೆ ಕಾಮಗಾರಿ ಪೂರ್ಣ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಪ್ರತಿದಿನ ಕಾಮಗಾರಿ ಕಾರ್ಯವನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ನಾನೂ ನಿಯಮಿತವಾಗಿ ಪ್ರಗತಿಯನ್ನು ಪರಿಶೀಲಿಸುತ್ತಿದ್ದೇನೆ.

ಬೆಂಗಳೂರು: ಈ ವರ್ಷದ ಡಿಸೆಂಬರ್ ವೇಳೆಗೆ ಈಜಿಪುರ ಮೇಲ್ಸೇತುವೆ ಯೋಜನೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಂಗಳವಾರ ಭರವಸೆ ನೀಡಿದರು.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಮಂಗಳವಾರ ಈಜಿಪುರ ಮೇಲ್ಸೇತುವೆ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಪ್ರತಿದಿನ ಕಾಮಗಾರಿ ಕಾರ್ಯವನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ನಾನೂ ನಿಯಮಿತವಾಗಿ ಪ್ರಗತಿಯನ್ನು ಪರಿಶೀಲಿಸುತ್ತಿದ್ದೇನೆಂದು ಹೇಳಿದರು.

ಜನವರಿ 7ರಂದು ಸಭೆ ನಡೆಸಿದ್ದ ವೇಳೆ ಮೂರು ಸ್ಲ್ಯಾಬ್‌ಗಳನ್ನು ಸರಿಪಡಿಸಲು ಒಂದು ತಿಂಗಳ ಗಡುವನ್ನು ನೀಡಲಾಗಿತ್ತು. ಗುತ್ತಿಗೆದಾರರು ಕೆಲಸವನ್ನು ಕಾರ್ಯಗತಗೊಳಿಸಿದ್ದಾರೆ. ಮುಂದಿನ ವರ್ಷದ ವೇಳೆಗೆ ಮೇಲ್ಸೇತುವೆ ಕಾರ್ಯ ಪೂರ್ಣಗೊಳ್ಳಳಿದೆ ಎಂದು ತಿಳಿಸಿದರು.

ಬಿಎಸ್‌ಸಿಪಿಎಲ್‌ನ ಹಿರಿಯ ಎಂಜಿನಿಯರ್ ಒಬ್ಬರು ಮಾತನಾಡಿ, ಯೋಜನೆಯು ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ. 2026 ರಲ್ಲಿ ಪಾಲಿಕೆಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದರು.

ಹಿಂದಿನ ಗುತ್ತಿಗೆದಾರರು ಶೇಕಡಾ 30 ರಷ್ಟು ಕೆಲಸ ಮಾಡಿ, ಕಾಮಗಾರಿಯನ್ನು ಕೈಬಿಟ್ಟಿದ್ದರು. ಇದರಿಂದ ಸವಾಲುಗಳು ಎದುರಾಗಿತ್ತು.ಅರ್ಧ ಮುಗಿದ ಕೆಲಸವನ್ನು ಕೈಗೆತ್ತಿಕೊಳ್ಳುವುದು ತುಂಬಾ ಸವಾಲಿನ ಕೆಲಸ. ಸ್ಥಳದಲ್ಲಿ ಭೂಸ್ವಾಧೀನದ ಸಮಸ್ಯೆ ಇತ್ತು. ಈಜಿಪುರ ಭಾಗದಲ್ಲಿ ಸೇಂಟ್ ಜಾನ್ಸ್ ಆಸ್ಪತ್ರೆ ಕಡೆಯಿಂದ ಕನಿಷ್ಠ 15 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಬೇಕಾಗಿದ್ದು, ಇದು ಸವಾಲಾಗಿ ಪರಿಣಮಿಸಿದೆ ಎಂದು ತಿಳಿಸಿದರು.

ಈ ವೇಳೆ ಸಚಿವ ರಾಮಲಿಂಗಾ ರೆಡ್ಡಿಯವರು ಮೂರು ತಿಂಗಳೊಳಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮತ್ತು ಜಮೀನು ಕಳೆದುಕೊಳ್ಳುವವರಿಗೆ ಕೂಡಲೇ ನಗದು ಪರಿಹಾರ ಪಾವತಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು,

ವಿಶೇಷ ಯೋಜನೆಗಳ ವಿಭಾಗದ ಬಿಬಿಎಂಪಿ ಎಂಜಿನಿಯರ್ ಅವರು ಮಾತನಾಡಿ,, ಪಿಲ್ಲರ್ 9 ರಿಂದ ಪಿಲ್ಲರ್ 60 ರವರೆಗಿನ ಕೆಲಸವು ಪರಿಣಾಮ ಬೀರುವುದಿಲ್ಲ. ಆದರೆ, ಅದರಿಂದ ಮುಂದೆ ಸಾಗುವ ಕಾಮಗಾರಿಗಳಿಗೆ ಸಮಸ್ಯೆಗಳು ಎದುರಾಗಲಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ: 5ನೇ ತರಗತಿವರೆಗಿನ ವಿದ್ಯಾರ್ಥಿಗಳ ದೈಹಿಕ ತರಗತಿಗಳಿಗೆ ಬ್ರೇಕ್!

ಪಹಲ್ಗಾಮ್ ಉಗ್ರ ದಾಳಿ: 1,597 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ NIA; ಉನ್ನತ LeT ಕಮಾಂಡರ್ ಸಾಜಿದ್ ಜಾಟ್ ಹೆಸರು ಉಲ್ಲೇಖ!

Gold Rate: ಮತ್ತೆ ಗಗನಕ್ಕೇರಿದ ಚಿನ್ನದ ದರ, ಒಂದೇ ದಿನ ಬರೊಬ್ಬರಿ 4 ಸಾವಿರ ರೂ ಏರಿಕೆ, ಎಷ್ಟು ಗೊತ್ತಾ?

Video: ಯಶವಂತಪುರ ನಿಲ್ದಾಣದಲ್ಲಿ ಹೈಡ್ರಾಮಾ: RPF ಸಿಬ್ಬಂದಿ ಮೇಲೆ ಪುಂಡರ ಹಲ್ಲೆ, ರೈಲು ವಿಳಂಬ! ಆಗಿದ್ದೇನು?

ನವೆಂಬರ್‌ನಲ್ಲಿ ನಿರುದ್ಯೋಗ ದರ ಶೇ. 4.7 ಕ್ಕೆ ಇಳಿಕೆ, ಉದ್ಯೋಗ ಮಾರುಕಟ್ಟೆ ಚೇತರಿಕೆ!

SCROLL FOR NEXT