ಕಾವೇರಿ ಆರತಿ. 
ರಾಜ್ಯ

ಟಿ ನರಸೀಪುರ ತ್ರಿವೇಣಿ ಸಂಗಮದಲ್ಲಿ ಕುಂಭ ಮೇಳ: ಅದ್ಧೂರಿಯಾಗಿ ನಡೆದ ಕಾವೇರಿ ಆರತಿ; ಡಿಕೆಶಿ ಪುಣ್ಯ ಸ್ನಾನ

ದಕ್ಷಿಣ ಪ್ರಯಾಗ ಎಂದೇ ಪ್ರಸಿದ್ಧಿ ಪಡೆದಿರುವ ಮೈಸೂರು ಜಿಲ್ಲೆಯ ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಹರಿದು ಬಂದಿದ್ದ ಭಕ್ತ ಸಾಗರವು ‘ಕಾವೇರಿ ಆರತಿ’ಯ ಬೆಳಗನ್ನು ಕಣ್ತುಂಬಿಕೊಂಡಿತು.

ಮೈಸೂರು: ಕಾವೇರಿ-ಕಪಿಲ-ಸ್ಫಟಿಕ ನದಿಗಳ ಪವಿತ್ರ ಸಂಗಮ ಸ್ಥಳವಾದ ಮೈಸೂರು ಜಿಲ್ಲೆಯ ತಿ.ನರಸೀಪುರದ ತಿರುಮಕೂಡಲಿನಲ್ಲಿ ಕುಂಭಮೇಳ ಸೋಮವಾರದಿಂದ ಆರಂಭಗೊಂಡಿದ್ದು, 2ನೇ ದಿನವಾದ ಮಂಗಳವಾರ ಕಾವೇರಿ ಆರತಿ ಅದ್ಧೂರಿಯಾಗಿ ನೆರವೇರಿತು.

ದಕ್ಷಿಣ ಪ್ರಯಾಗ ಎಂದೇ ಪ್ರಸಿದ್ಧಿ ಪಡೆದಿರುವ ಮೈಸೂರು ಜಿಲ್ಲೆಯ ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಹರಿದು ಬಂದಿದ್ದ ಭಕ್ತ ಸಾಗರವು ‘ಕಾವೇರಿ ಆರತಿ’ಯ ಬೆಳಗನ್ನು ಕಣ್ತುಂಬಿಕೊಂಡಿತು. ಕುಂಭಮೇಳದ ಎರಡನೇ ದಿನವಾದ ಮಂಗಳವಾರ, ಅಗಸ್ತ್ಯೇಶ್ವರ ಸ್ವಾಮಿ ದೇಗುಲದ ಸ್ನಾನಘಟ್ಟದಲ್ಲಿ ಅರ್ಚಕರು ಬೆಳಗಿದ ದೀಪಗಳು ಕಾವೇರಿ, ಕಪಿಲೆ, ಸ್ಪಟಿಕ ನದಿಗಳ ಸಂಗಮದಲ್ಲಿ ಕಂಗೊಳಿಸಿದವು.

ಸಂಗಮದ ಬಳಿ ನೆರಿದಿದ್ದ ಭಕ್ತರು ಜೀವನದಿಗಳಾದ ‘ಕಾವೇರಿ’, ‘ಕಪಿಲೆ’ಗೆ ಜಯಕಾರ ಹಾಕಿದರು. ಸ್ವರ್ಗಸದೃಶ ವಾತಾವರಣ ನೋಡಿದವರ ಎದೆಯಲ್ಲಿ ಭಕ್ತಿರಸವು ಹರಿಯಿತು. ಶಿವಸ್ತುತಿಯು ಮೊಳಗುತ್ತಿದ್ದಂತೆ ದೀಪಗಳನ್ನು ಒಂಭತ್ತು ಅರ್ಚಕರು ಹೊತ್ತಿಸಿದರು. ಕಾವೇರಿ ಮಾತೆಗೆ ಮೂರು ಸುತ್ತು ಬೆಳಗಿ, ಆಗಸಕ್ಕೆ ತೋರಿದರು. ನೋಡುತ್ತಿದ್ದ ಭಕ್ತರು, ಕೈ ಮುಗಿದರು. ‘ಕಾಲಭೈರವ’, ‘ರುದ್ರ’ ಶ್ಲೋಕಗಳ ಗೀತೆಗಳ ಹಿಮ್ಮೇಳವು ಭಾವ ತೀವ್ರತೆಯನ್ನು ಹೆಚ್ಚಿಸಿತು.

ಈ ನಡುವೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಟಿ. ನರಸೀಪುರ ತಾಲ್ಲೂಕಿನ ಗುಂಜಾನರಸಿಂಹ ದೇಗುಲದ ಬಳಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ, ಗಂಗಾಪೂಜೆ, ಕಾವೇರಿ ದೀಪಾರತಿ ನೆರವೇರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT