ಡಿ.ಕೆ ಶಿವಕುಮಾರ್ 
ರಾಜ್ಯ

ಮೆಟ್ರೋ ದರ ಇಳಿಸಬೇಕು ಎಂಬುದು ನಮ್ಮ ಅಭಿಪ್ರಾಯ, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು: ಡಿ.ಕೆ ಶಿವಕುಮಾರ್

ಜನರ ಮನವಿ ಆಲಿಸಿ ಮುಖ್ಯಮಂತ್ರಿಗಳು ಮೆಟ್ರೋ ದರ ಇಳಿಸುವ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ. ಜನಸಾಮಾನ್ಯರು ಹಾಗೂ ಮೆಟ್ರೋ ಹಿತಾಸಕ್ತಿ ಕಾಯಲು ಯಾವ ನಿರ್ಧಾರ ಮಾಡುತ್ತಾರೋ ಮಾಡಲಿ.

ಬೆಂಗಳೂರು: ಮೆಟ್ರೋ ದರ ಇಳಿಸಬೇಕು ಎಂದು ನಮ್ಮ ಸರ್ಕಾರ ಅಭಿಪ್ರಾಯವನ್ನು ಬಿಎಂಆರ್ ಸಿಎಲ್ ಗೆ ತಿಳಿಸಿದ್ದು, ಅಂತಿಮ ತೀರ್ಮಾನ ಕೇಂದ್ರ ಸಮಿತಿ ತೆಗೆದುಕೊಳ್ಳಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಬಿಎಂಆರ್ ಸಿಎಲ್ ಮೆಟ್ರೋ ಟಿಕೆಟ್ ದರ ಕಡಿಮೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, ನಮಗೂ ಅದಕ್ಕೂ ಸಂಬಂಧವಿಲ್ಲ. ಈ ವಿಚಾರ ರಾಜ್ಯ ಸರ್ಕಾರದ ಸುಪರ್ದಿಗೆ ಬರಲ್ಲ, ಇದಕ್ಕಾಗಿಯೇ ಕೇಂದ್ರ ಸಮಿತಿ ರಚಿಸಲಾಗಿದೆ.

ಜನರ ಮನವಿ ಆಲಿಸಿ ಮುಖ್ಯಮಂತ್ರಿಗಳು ಮೆಟ್ರೋ ದರ ಇಳಿಸುವ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ. ಜನಸಾಮಾನ್ಯರು ಹಾಗೂ ಮೆಟ್ರೋ ಹಿತಾಸಕ್ತಿ ಕಾಯಲು ಯಾವ ನಿರ್ಧಾರ ಮಾಡುತ್ತಾರೋ ಮಾಡಲಿ. ಈ ದರ ನಿಗದಿಗೆ ನ್ಯಾಯಾಧೀಶರ ನೇತೃತ್ವದ ಪ್ರತ್ಯೇಕ ಕೇಂದ್ರ ಸಮಿತಿ ಮಾಡಲಾಗಿದೆ. ಆ ಸಮಿತಿಗೆ ನಾವು ನಮ್ಮ ಅಭಿಪ್ರಾಯ ತಿಳಿಸುತ್ತೇವೆ, ಅಂತಿಮ ನಿರ್ಧಾರ ಅವರದು" ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!