ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ 
ರಾಜ್ಯ

'11 ಸಾವಿರ ರೇಷ್ಮೆ ಸೀರೆ, 750 ಜೊತೆ ಚಪ್ಪಲಿ, 7 ಕೆಜಿ ಚಿನ್ನಾಭರಣ...': Jayalalitha ವಸ್ತುಗಳ ಹಸ್ತಾಂತರ ಪ್ರಕ್ರಿಯೆ ಆರಂಭ! ಏನೆಲ್ಲಾ ಇವೆ ಗೊತ್ತಾ?

ಈಗಾಗಲೇ ತಮಿಳುನಾಡಿನಿಂದ ಪೊಲೀಸರು ಬಿಗಿ ಭದ್ರತೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದು, ಇಂದು (ಫೆಬ್ರವರಿ 14) ಅಥವಾ ನಾಳೆ(ಫೆಬ್ರವರಿ 15) ತೆಗೆದುಕೊಂಡು ಹೋಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿಪತ್ರಗಳು, ಅಪಾರ ಒಡವೆ ಮತ್ತು ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಈ ಸಂಬಂದ ಈಗಾಗಲೇ ತಮಿಳುನಾಡು ಪೊಲೀಸರು ಮತ್ತು ಅಧಿಕಾರಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಮತ್ತು ನಾಳೆ ಹಸ್ತಾಂತರ ಪ್ರಕ್ರಿಯೆ ನಡೆಯಲಿದ್ದು, ಜಯಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿಪತ್ರಗಳು, 11,344 ರೇಷ್ಮೆ ಸೀರೆಗಳು, 7040 ಗ್ರಾಂ ತೂಕದ 468 ಬಗೆಯ ಚಿನ್ನ, ವಜ್ರಖಚಿತ ಆಭರಣಗಳು ಹಾಗೂ 750 ಜೊತೆ ಚಪ್ಪಲಿಗಳು, ವಾಚ್‌ಗಳು ಸೇರಿದಂತೆ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ.

ಈಗಾಗಲೇ ತಮಿಳುನಾಡಿನಿಂದ ಪೊಲೀಸರು ಬಿಗಿ ಭದ್ರತೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದು, ಇಂದು (ಫೆಬ್ರವರಿ 14) ಅಥವಾ ನಾಳೆ(ಫೆಬ್ರವರಿ 15) ತೆಗೆದುಕೊಂಡು ಹೋಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಯಾ ಸಂಬಂಧಿಕರಿಂದ ತಕರಾರು

ಈ ಹಿಂದೆ ಜಯಲಲಿತಾ ಅವರ ಸಂಬಂಧಿಕರು ಎಂದು ಹೇಳಿಕೊಂಡಿದ್ದ ದೀಪ ಹಾಗೂ ದೀಪಕ್ ಎಂಬುವವರು ತಾವು ಜಯಲಲಿತಾ ಅವರ ಸಂಬಂಧಿಕರಾಗಿದ್ದು, ಜಯಲಲಿತಾ ಒಡವೆಯನ್ನ ನಮಗೆ ಕೊಡಿ ಎಂದು ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿಯನ್ನ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಅವರ ಅರ್ಜಿಯನ್ನು ವಜಾ ಮಾಡಿತ್ತು. ಇಂದು ನ್ಯಾಯಾಧೀಶರ ಸಮ್ಮುಖದಲ್ಲಿ ತಮಿಳುನಾಡು ಸರ್ಕಾರಕ್ಕೆ ಎಲ್ಲಾ ವಸ್ತುಗಳನ್ನು ವರ್ಗಾವಣೆ ಮಾಡಲಾಗುತ್ತಿದೆ. ವಕೀಲರು ಹಾಗೂ ತಮಿಳುನಾಡಿನ ಕೆಲವು ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಪ್ರತಿಯೊಂದು ಮಾಹಿತಿಯನ್ನು ನೀಡಿ ಚಿನ್ನದ ಒಡವೆಗಳನ್ನು ತೂಕವನ್ನು ಹಾಕುತ್ತಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರಿಂದ ಮುಟ್ಟುಗೋಲು ಹಾಕಿಕೊಂಡಿದ್ದ ಬೆಲೆ ಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ಹರಾಜು ಹಾಕುವ ಬದಲು ತಮಿಳುನಾಡು ಸರ್ಕಾರದ ಸುಪರ್ದಿಗೆ ನೀಡುವಂತೆ ವಿಶೇಷ ನ್ಯಾಯಾಲಯ ಈ ಹಿಂದೆ ಆದೇಶಿಸಿತ್ತು.

ಏನೆಲ್ಲಾ ಇವೆ?

7040 ಗ್ರಾಂ ತೂಕದ 468 ಬಗೆಯ ಚಿನ್ನ, ವಜ್ರಖಚಿತ ಆಭರಣಗಳು, 700 ಕೆ.ಜಿ ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜರೇಟರ್, 10 ಟಿವಿ ಸೆಟ್, 8 VCR, 1 ವಿಡಿಯೋ ಕ್ಯಾಮರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೆಕಾರ್ಡರ್ ಹಾಗೂ 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್​ಗಳು ತಮಿಳುನಾಡು ಸರ್ಕಾರಕ್ಕೆ ಸೇರಲಿವೆ.

ವಿಶೇಷ ನ್ಯಾಯಾಲಯವು ಬೆಲೆ ಬಾಳುವ ವಸ್ತುಗಳು, ಚಿನ್ನ ಮತ್ತು ವಜ್ರಾಭರಣಗಳನ್ನು ಹಿಂದಿರುಗಿಸಲು 2024ರ ಫೆ.19ಕ್ಕೆ ದಿನಾಂಕ ನಿಗದಿಪಡಿಸಿತ್ತು. 2024ರ ಮಾರ್ಚ್ 6 ಮತ್ತು 7ರಂದು ಅವುಗಳನ್ನು ಸ್ವಾಧೀನಪಡಿಸಿಕೊಳ್ಳಲು ಅಧಿಕೃತ ಅಧಿಕಾರಿಗಳನ್ನು ನಿಯೋಜಿಸುವಂತೆ ತಮಿಳುನಾಡು ಸರಕಾರಕ್ಕೆ ನಿರ್ದೇಶನ ನೀಡಿತ್ತು.

ಈ ಮಧ್ಯೆ, ದೀಪಾ ಮತ್ತು ದೀಪಕ್‌ ಅವರು ವಿಶೇಷ ನ್ಯಾಯಾಲಯದ ಆದೇಶದ ವಿರುದ್ಧ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆಸ್ತಿ ಮತ್ತು ಬೆಲೆ ಬಾಳುವ ವಸ್ತುಗಳ ಹಸ್ತಾಂತರ ಪ್ರಕ್ರಿಯೆಗೆ ಒಂದು ದಿನ ಮೊದಲು 2024ರ ಮಾರ್ಚ್ 5ರಂದು ಹೈಕೋರ್ಟ್‌ನ ಏಕ ಸದಸ್ಯ ಪೀಠ, ವಿಶೇಷ ನ್ಯಾಯಾಲಯದ ಆದೇಶವನ್ನು ತಡೆಹಿಡಿದಿತ್ತು.

ಈಗ ಮೇಲ್ಮನವಿ ವಜಾಗೊಂಡ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಆಸ್ತಿ ಮತ್ತು ಆಭರಣಗಳನ್ನು ಹಸ್ತಾಂತರಿಸುತ್ತಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯವು, 2014ರ ಸೆ.27ರಂದು ಜಯಲಲಿತಾ ಅವರಿಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರೂ. ದಂಡ ವಿಧಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ದೇವರ ಮೊರೆ ಹೋದ ಡಿಕೆಶಿ ಬೆಂಬಲಿಗರು: ಅಯ್ಯಪ್ಪ ಮಾಲಾಧಾರಿಗಳ ವಿಶೇಷ ಪೂಜೆ; ಗಣಪತಿ ದೇವಾಲಯಲ್ಲಿ ಈಡುಗಾಯಿ ಸೇವೆ!

SCROLL FOR NEXT