ಸಾಂದರ್ಭಿಕ ಚಿತ್ರ 
ರಾಜ್ಯ

ರೈಲಿನಿಂದ ತಳ್ಳಿ ವ್ಯಕ್ತಿ ಕೊಲೆ: ಪೊಲೀಸರಿಂದ ಇಬ್ಬರ ಬಂಧನ

ಆರೋಪಿಗಳಿಬ್ಬರೂ ಕಲಬುರಗಿ ಜಿಲ್ಲೆಯ ಸೇಡಂ ಮೂಲದವರು. ಈ ಇಬ್ಬರು ಆರೋಪಿಗಳು ಮಂಗಳವಾರ ರಾತ್ರಿ 7.15ಕ್ಕೆ ಹೊರಟಿದ್ದ ರೈಲಿಗೆ ಯಶವಂತಪುರದಲ್ಲಿ ಹತ್ತಿದ್ದಾರೆ.

ಬೆಂಗಳೂರು: ಮಂಗಳವಾರ ರಾತ್ರಿ ಯಶವಂತಪುರ-ಬೀದರ್ ಎಕ್ಸ್‌ಪ್ರೆಸ್‌ನಿಂದ ಪ್ರಯಾಣಿಕನನ್ನು ತಳ್ಳಿದ ಇಬ್ಬರು ವ್ಯಕ್ತಿಗಳನ್ನು ನಗರದ ರೈಲ್ವೆ ಉಪವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ತೋಟಗಾರ ಎಸ್.ದೇವಪ್ಪ (45) ಮತ್ತು ಪೇಂಟರ್ ಆಗಿರುವ ಎಚ್.ಪೀರಪ್ಪ (31 ) ಬಂಧಿತ ಆರೋಪಿಗಳು. ಆರೋಪಿಗಳಿಬ್ಬರೂ ಕಲಬುರಗಿ ಜಿಲ್ಲೆಯ ಸೇಡಂ ಮೂಲದವರು. ಈ ಇಬ್ಬರು ಆರೋಪಿಗಳು ಮಂಗಳವಾರ ರಾತ್ರಿ 7.15ಕ್ಕೆ ಹೊರಟಿದ್ದ ರೈಲಿಗೆ ಯಶವಂತಪುರದಲ್ಲಿ ಹತ್ತಿದ್ದಾರೆ.

ಜನರಲ್ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಕೂರಲು ಸೀಟು ಸಿಕ್ಕಿರಲಿಲ್ಲ. ಹೀಗಾಗಿ ಇಬ್ಬರು ಆರೋಪಿಗಳು ಕುಳಿತಿದ್ದ ಶೌಚಾಲಯದ ಪಕ್ಕದ ಹಾದಿಯಲ್ಲಿ ಕುಳಿತುಕೊಳ್ಳಲು ಪ್ರಯತ್ನಿಸಿದರು. ಆತನಿಗೆ ಜಾಗ ಕೊಡಲು ನಿರಾಕರಿಸಿದ ಇಬ್ಬರೂ ಆತನೊಂದಿಗೆ ಮಾತಿನ ಚಕಮಕಿ ನಡೆಸಿದರು. ಯಲಹಂಕ ಮತ್ತು ಗೌರಿಬಿದನೂರು ನಿಲ್ದಾಣಗಳ ನಡುವೆ ತೀವ್ರ ವಾಗ್ವಾದ ನಡೆಯಿತು, ಇದಾದ ನಂತರ ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ಇಬ್ಬರೂ ಸೇರಿ ಆ ವ್ಯಕ್ತಿಯನ್ನು ತಳ್ಳಿದ್ದಾರೆ. ಪ್ರತ್ಯಕ್ಷದರ್ಶಿಯೊಬ್ಬರು ಕೂಡಲೇ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಮಂಗಳವಾರ ರಾತ್ರಿ ರೈಲ್ವೇ ಪೊಲೀಸರು ಸ್ಥಳಕ್ಕೆ ಧಾವಿಸಿದರು, ಆದರೆ ನಿಖರವಾದ ಸ್ಥಳ ತಿಳಿದಿಲ್ಲದ ಕಾರಣ ಮತ್ತು ಕತ್ತಲೆಯಾದ ಕಾರಣ ಮೃತದೇಹವನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಬುಧವಾರ ಬೆಳಗ್ಗೆ ಶವ ಪತ್ತೆಯಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಹಾಸನದ ಚನ್ನರಾಯಪಟ್ಟಣದ 28 ವರ್ಷದ ಪ್ರತ್ಯಕ್ಷದರ್ಶಿ ನೀಡಿದ ದೂರಿನ ಮೇರೆಗೆ ಬೆಂಗಳೂರು ಗ್ರಾಮಾಂತರ ರೈಲ್ವೆ ಪೊಲೀಸರು ಬಿಎನ್‌ಎಸ್ ಸೆಕ್ಷನ್ 103 ರ ಅಡಿಯಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT