ಬೆಂಗಳೂರಿನಲ್ಲಿ ಬೀದಿ ನಾಯಿಗಳಿಗೆ ರೇಬೀಸ್ ಲಸಿಕೆ ಹಾಕುತ್ತಿರುವ ಬಿಬಿಎಂಪಿ ಕಾರ್ಯಕರ್ತರು 
ರಾಜ್ಯ

BBMP: 4.30 ಕೋಟಿ ರೂ ವೆಚ್ಚದಲ್ಲಿ 1.84 ಲಕ್ಷ ಬೀದಿನಾಯಿಗಳಿಗೆ ಲಸಿಕೆ

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಂಯೋಜಿತ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೀದಿ ನಾಯಿಗಳಿಗೆ ಬಹು-ರೋಗ ಲಸಿಕೆಯನ್ನು ನೀಡುತ್ತಿರುವುದು ಇದೇ ಮೊದಲು ಎಂದು ಹೇಳಿದರು.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಈ ವರ್ಷ ಹೊಸದಾಗಿ ಪರಿಚಯಿಸಲಾದ 'ಸಂಯೋಜಿತ ಲಸಿಕೆ'ಯನ್ನು 1.84 ಲಕ್ಷ ಬೀದಿ ನಾಯಿಗಳಿಗೆ ಹಾಕುವ ಗುರಿ ಹೊಂದಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಂಯೋಜಿತ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೀದಿ ನಾಯಿಗಳಿಗೆ ಬಹು-ರೋಗ ಲಸಿಕೆಯನ್ನು ನೀಡುತ್ತಿರುವುದು ಇದೇ ಮೊದಲು ಎಂದು ಹೇಳಿದರು. ಕಾರ್ಯಕ್ರಮಕ್ಕಾಗಿ ನಿಗದಿಪಡಿಸಿದ 4.98 ಕೋಟಿ ರೂಪಾಯಿ ಬಜೆಟ್‌ನಲ್ಲಿ, 4.40 ಕೋಟಿ ರೂಪಾಯಿಗಳನ್ನು ಲಸಿಕೆಗಾಗಿ ಬಳಸಿ ಉಳಿದ ಹಣವನ್ನು ಕೋಲ್ಡ್ ಸ್ಟೋರೇಜ್ ಸೌಲಭ್ಯಗಳಿಗಾಗಿ ಬಳಸಲಾಗುವುದು ಎಂದರು.

ಬಿಬಿಎಂಪಿ ಪಶುಸಂಗೋಪನಾ ಇಲಾಖೆಯು ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಣಿ ಜನನ ನಿಯಂತ್ರಣ (ABC) ಕಾರ್ಯಕ್ರಮ ಮತ್ತು ರೇಬೀಸ್ ವಿರೋಧಿ ಲಸಿಕೆ (ARV)ಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದೆ.

ಬೀದಿ ನಾಯಿಗಳಲ್ಲಿ ಮಾರಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಂಯೋಜಿತ ಲಸಿಕೆ ಕಾರ್ಯಕ್ರಮದ ಅಗತ್ಯವಿದೆ. ಬಿಬಿಎಂಪಿಯ 2023 ರ ಸಮೀಕ್ಷೆಯಲ್ಲಿ ಗುರುತಿಸಲಾದ 2.79 ಲಕ್ಷ ಬೀದಿ ನಾಯಿಗಳಲ್ಲಿ, ಶೇಕಡಾ 50ಕ್ಕಿಂತ ಹೆಚ್ಚು ನಾಯಿಗಳು ಪ್ರಸ್ತುತ ಸಂಯೋಜಿತ ಲಸಿಕೆ ಕಾರ್ಯಕ್ರಮಕ್ಕೆ ಒಳಗಾಗುತ್ತಿವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT