ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕಾರು ಅಪಘಾತದಲ್ಲಿ ಕುರುಬೂರು ಶಾಂತಕುಮಾರ್ ಗೆ ಗಂಭೀರ ಗಾಯ; ಪಂಜಾಬ್​ನಿಂದ ಬೆಂಗಳೂರಿಗೆ ಏರ್​​ ಲಿಫ್ಟ್

ಕುರುಬೂರ್ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ನಿನ್ನೆ ಪಂಜಾಬ್​​ನ ಪಟಿಯಾಲ ರಸ್ತೆಯಲ್ಲಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ.

ಕುರುಬೂರು ಶಾಂತಕುಮಾರ್
Lingaraj Badiger
Updated On : 15 Feb 2025, 1:02 pm

ಬೆಂಗಳೂರು: ಪಂಜಾಬ್​ನ ಪಟಿಯಾಲ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಪಟಿಯಾಲದ ಆಸ್ಪತ್ರೆಯೊಂದರಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುರುಬೂರ್ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ನಿನ್ನೆ ಪಂಜಾಬ್​​ನ ಪಟಿಯಾಲ ರಸ್ತೆಯಲ್ಲಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕುರುಬೂರ್ ಶಾಂತಕುಮಾರ್ ಹಾಗೂ ತಮಿಳುನಾಡಿನ ಪಾಂಡಿಯನ್ ಅವರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈಗ ಕುರುಬೂರ್ ಶಾಂತಕುಮಾರ್ ಅವರನ್ನು ಪಟಿಯಾಲ ಆಸ್ಪತ್ರೆಯಿಂದ ಬೆಂಗಳೂರಿಗೆ ಏರ್​ ಲಿಫ್ಟ್​ ಮಾಡಲು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವ್ಯವಸ್ಥೆ ಮಾಡಿದ್ದಾರೆ.

Advertisement

Advertisement

Also Read

ಪ್ರಹ್ಲಾದ್ ಜೋಶಿ ನೇತೃತ್ವದ ಕೇಂದ್ರ ತಂಡದಿಂದ ರೈತ ಮುಖಂಡರೊಂದಿಗೆ ಸಭೆ

ಅಪಘಾತದಲ್ಲಿ ಶಾಂತಕುಮಾರ್ ಅವರ ಬೆನ್ನುಮೂಳೆಗೆ ತೀವ್ರ ಗಾಯಾವಾಗಿದ್ದು, ಬೆಂಗಳೂರಿನಲ್ಲೇ ಚಿಕಿತ್ಸೆ ಕೊಡಿಸಲು ಅವರನ್ನು ಏರ್​ ಲಿಫ್ಟ್ ಮಾಡಿಸಲು ಸೋಮಣ್ಣ ತೀರ್ಮಾನಿಸಿದ್ದು, ಈ ಸಂಬಂಧ ಸೋಮಣ್ಣ ಅವರು ಈಗಾಗಲೇ ಪಟಿಯಾಲ ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸಿದ್ದಾರೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ಕಳೆದ ಒಂದು ವರ್ಷದಿಂದ ದೆಹಲಿಯ ಕನೋಲಿ ಬಾರ್ಡರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಂತಕುಮಾರ್ ಅವರು ಶುಕ್ರವಾರ ದೆಹಲಿಯಲ್ಲಿ ಕರೆಯಲಾಗಿದ್ದ ಸಭೆಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಈ ದುರ್ಘಟನೆ ಸಂಭವಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments