ಸಂಗ್ರಹ ಚಿತ್ರ 
ರಾಜ್ಯ

Mandya: ಆಟವಾಡುವಾಗ ಬಂದೂಕಿನಿಂದ ಸಿಡಿದ ಗುಂಡು; ಮಗು ದಾರುಣ ಸಾವು

ಮೃತ ಮಗುವನ್ನು ಅಭಿಷೇಕ್ (3) ಎಂದು ಗುರ್ತಿಸಲಾಗಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ.

ಮಂಡ್ಯ: ಅಸಲಿ ಬಂದೂಕು ಹಿಡಿದು ಆಟವಾಡುವಾಗ ಆಕಸ್ಮಿಕವಾಗಿ ಗುಂಡು ತಗಲಿ ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಭಾನುವಾರ ನಡೆದಿದೆ.

ಮೃತ ಮಗುವನ್ನು ಅಭಿಷೇಕ್ (3) ಎಂದು ಗುರ್ತಿಸಲಾಗಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ.

ಮಗುವಿನ ಪೋಷಕರು ಶಶಾಂಕ್ ಮತ್ತು ಲಿಪಿಕಾ ಪಶ್ಚಿಮ ಬಂಗಾಳ ಮೂಲದವರಾಗಿದ್ದು, ಕೋಳಿ ಫಾರಂನಲ್ಲಿ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಕೋಳಿಫಾರಂನಲ್ಲಿ ಭದ್ರತೆಗಾಗಿ ಗುಂಡು ತುಂಬಿದ ಒಂದು ಅಸಲಿ ಗನ್‌ ಇಡಲಾಗಿತ್ತು.

ಈ ನಡುವೆ ಕೋಳಿ ಫಾರಂಗೆ ಪುತ್ರ ಸುದೀಪ್ (13) ನೊಂದಿಗೆ ಭವಶಂಕರ್ ದಾಸ್ ಎಂಬಾತ ಬಂದಿದ್ದು, ಮಗುವಿನ ಪೋಷಕರೊಂದಿಗೆ ಮಾತುಕತೆ ನಡೆಸುತ್ತಿದ್ದ. ಈ ವೇಳೆ ಮಗುವಿನೊಂದಿಗೆ ಬಾಲಕ ಸುದೀಪ್ ಆಟವಾಡುತ್ತಿದ್ದ. ಮೇಲೆ ಇದ್ದ ಗನ್ ತೆಗೆದುಕೊಂಡು ಕಳ್ಳ-ಪೊಲೀಸ್ ಆಟವಾಡೋಣ ಎಂದು ಹೇಳಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಮಿಸ್ ಫೈರಿಂಗ್ ಆಗಿದೆ. ಪರಿಣಾಮ ಪುಟ್ಟ ಮಗುವಿನ‌ ಹೊಟ್ಟೆ ನುಸುಳಿದೆ.

ಘಟನೆಯಲ್ಲಿ ಅಭಿಷೇಕ್ ಮಾತ್ರವಲ್ಲದೇ ಆತನ ತಾಯಿ ಕೈಗೂ ಗುಂಡು ತಗುಲಿ ಗಾಯಗೊಂಡಿದ್ದಾರೆ. ತಕ್ಷಣವೇ ‌ಇಬ್ಬರನ್ನೂ ನಾಗಮಂಗಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮಗು ಅದಾಗಲೇ ಮೃತಪಟ್ಟಿದೆ.

ದುರಂತಕ್ಕೆ ಕೋಳಿ ಫಾರಂ ಮಾಲೀಕ ನರಸಿಂಹಮೂರ್ತಿ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ, ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಾಗಮಂಗಲ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಬಂದೂಕು ವಶಕ್ಕೆ ಪಡೆದಿದ್ದಾರೆ. ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT