ಲಕ್ಷ್ಮೀ ಹೆಬ್ಬಾಳ್ಕರ್-ಡಿಕೆ ಶಿವಕುಮಾರ್ 
ರಾಜ್ಯ

Congress Guarantee: ಅನ್ನಭಾಗ್ಯ-ಗೃಹಲಕ್ಷ್ಮೀ ಹಣ ಹಾಕಿಲ್ಲ ಎಂದು ಮಹಿಳೆಯರ ಆಕ್ರೋಶ; ಕೊಟ್ಟ ಮಾತು ತಪ್ಪಲ್ಲ ಎಂದ ಡಿಕೆಶಿ!

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳಿಗೆ ನೀಡಿಲ್ಲ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳಿಗೆ ನೀಡಿಲ್ಲ ಎಂದು ವಿಪಕ್ಷಗಳು ಟೀಕೆ ಮಾಡುತ್ತಿದ್ದು, ಈ ಕುರಿತಂತೆ ಡಿಸಿಎಂ ಡಿಕೆ ಶಿವಕುಮಾರ್ ಇಂದು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆ ಹಣ ಹಾಕುವುದು ಸ್ವಲ್ಪ ತಡವಾಗಿದೆ. ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ವರ್ಗಾಹಿಸಿಲ್ಲ. ಆದರೆ ಸರ್ಕಾರ ಮಾತು ಕೊಟ್ಟಂತೆ ಎರಡು ಯೋಜನೆಗಳ ಹಣವನ್ನು ಖಾತೆಗಳಿಗೆ ಹಾಕುತ್ತೇವೆ ಎಂದು ಆಶ್ವಾಸನೆ ನೀಡಿದರು. ಇನ್ಮುಂದೆ ತಿಂಗಳಿಗೆ ಸರಿಯಾಗಿ ಹಣ ವರ್ಗಾವಣೆಯಾಗಲಿದೆ ಎಂದರು.

ಇದಕ್ಕೂ ಮೊದಲು ಈ ಬಗ್ಗೆ ಪ್ರತಿಕ್ರಿಯಿಸಿದ್ದ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ವಿಪಕ್ಷಗಳು ಟೀಕಿಸುತ್ತಿರುವಂತೆ ನಾಲ್ಕೈದು ತಿಂಗಳ ಗ್ಯಾರಂಟಿ ಹಣ ಬಾಕಿ ಇಲ್ಲ. ಕೇವಲ ಎರಡು ತಿಂಗಳ ಹಣ ಮಾತ್ರ ಬಾಕಿ ಇದೆ. ಎರಡು ತಿಂಗಳಿಗೊಮ್ಮೆ ಹಣ ಹಾಕುತ್ತಿದ್ದೇವೆ. ಇನ್ನ ಮೇಲೆ ಪ್ರತಿ ತಿಂಗಳು ಹಣ ವರ್ಗಾವಣೆಗೆ ವ್ಯವಸ್ಥೆ ಮಾಡುತ್ತೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್