ಸಿಎಂ ಸಿದ್ದರಾಮಯ್ಯ ಮತ್ತಿತರರು 
ರಾಜ್ಯ

ದಲಿತ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವ ಸಭೆ: ಬೇಡಿಕೆ ಪರಿಶೀಲಿಸುವ ಭರವಸೆ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಡಾ. ಹೆಚ್. ಸಿ. ಮಹಾದೇವಪ್ಪ, ಮುನಿಯಪ್ಪ, ಆರ್. ಬಿ. ತಿಮ್ಮಾಪುರ್, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು: ಮುಂದಿನ ತಿಂಗಳು ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ 2025-26ನೇ ಸಾಲಿನ ರಾಜ್ಯದ ಆಯವ್ಯಯ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಯಾರಿ ಮುಂದುವರೆದಿದೆ.

ನಿನ್ನೆ ರಾಜ್ಯ ರೈತ ಸಂಘಗಳು ಹಾಗೂ ಮುಖಂಡರುಗಳೊಂದಿಗೆ ಸಭೆ ನಡೆಸಿ ಬೇಡಿಕೆಗಳು, ಸಲಹೆಗಳನ್ನು ಆಲಿಸಿದ್ದ ಮುಖ್ಯಮಂತ್ರಿ ಇಂದು ದಲಿತ ಮುಖಂಡರೊಂದಿಗೆ ಬಜೆಟ್ ಪೂರ್ವ ಸಭೆ ನಡೆಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಡಾ. ಹೆಚ್. ಸಿ. ಮಹಾದೇವಪ್ಪ, ಮುನಿಯಪ್ಪ, ಆರ್. ಬಿ. ತಿಮ್ಮಾಪುರ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ದಲಿತ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿ ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ಜಾರಿಗೆ ತಂದಿದ್ದು, ಇದನ್ನು 2 ಕೋಟಿಗೆ ವಿಸ್ತರಿಸಬೇಕು ಎನ್ನುವ ಬೇಡಿಕೆ ಬಗ್ಗೆಯೂ ಪರಿಶೀಲಿಸುವುದಾಗಿ ತಿಳಿಸಿದರು.

ಶೋಷಿತರ, ದಲಿತ ಸಮಯದಾಯಗಳ ಬೇಡಿಕೆಗಳನ್ನು ನಾನು ಮುಖ್ಯಮಂತ್ರಿ ಆದ ಬಳಿಕ ನಿರಂತರವಾಗಿ ಈಡೇರಿಸುತ್ತಲೇ ಇದ್ದೇನೆ. ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನ ಅಭಿವೃದ್ಧಿ ಹಣದಲ್ಲಿ ಶೇ. 24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಮ್ಮ ಸರ್ಕಾರ. ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ ಎಂದರು.

ಬಡ್ತಿಯಲ್ಲಿ ಮೀಸಲಾತಿ, ಪಿಟಿಸಿಎಲ್ ಕಾಯ್ದೆ ಮಾಡಿದ್ದು, ಹೊಸದಾಗಿ ಕೈಗಾರಿಕೆ ಆರಂಭಿಸುವವರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಿದ್ದೇವೆ. ಇಡೀ ದೇಶಕ್ಕೆ ಮಾದರಿಯಾದ ಕಾಯ್ದೆ, ಕಾನೂನು, ನಿಯಮಗಳನ್ನು ಮಾಡಿರುವ ದಾಖಲೆ ನಮ್ಮ ಸರ್ಕಾರದ್ದಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಮಾರ್ಚ್ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ 2025 ಮತ್ತು 2026ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT