ನಮ್ಮ ಮೆಟ್ರೋ 
ರಾಜ್ಯ

ದರ ಏರಿಕೆ ಎಫೆಕ್ಟ್: BMRCL ಗೆ ಬಿಸಿ ಮುಟ್ಟಿಸಿದ ಪ್ರಯಾಣಿಕರು, 2.3 ಲಕ್ಷ ಮಂದಿ ಮೆಟ್ರೋ ಓಡಾಟ ಇಳಿಕೆ; ಮತ್ತೆ ಪರಿಶೀಲನಾ ಸಭೆ!

ಬೆಂಗಳೂರಿನಲ್ಲಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದ್ದು, ದರ ಏರಿಕೆ ಬಳಿಕ ಈ ಪ್ರಮಾಣ 6.3 ಲಕ್ಷಕ್ಕೆ ಇಳಿಕೆಯಾಗಿದೆ.

ಬೆಂಗಳೂರು: ಪ್ರಯಾಣ ದರ ಏರಿಕೆ ಬಳಿಕ ಬೆಂಗಳೂರು ಮೆಟ್ರೋ ರೈಲು ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿದ್ದು, ಬರೊಬ್ಬರಿ 2.3 ಲಕ್ಷ ಮಂದಿ ಓಡಾಟ ಇಳಿಕೆಯಾಗಿದೆ ಎಂದು ತಿಳಿದುಬಂದಿದೆ.

ಹೌದು.. ಬೆಂಗಳೂರಿನಲ್ಲಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದ್ದು, ದರ ಏರಿಕೆಯ ಮೊದಲು ಪ್ರತಿದಿನ ಸುಮಾರು 8.5 ಲಕ್ಷ ಪ್ರಯಾಣಿಕರು ನಿಯಮಿತವಾಗಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ದರ ಏರಿಕೆ ಬಳಿಕ ಈ ಪ್ರಮಾಣ 6.3 ಲಕ್ಷಕ್ಕೆ ಇಳಿಕೆಯಾಗಿದೆ. ಆ ಮೂಲಕ ಬರೊಬ್ಬರಿ 2.3 ಲಕ್ಷ ಮಂದಿ ಓಡಾಟ ಇಳಿಕೆಯಾಗಿದೆ ಎಂದು ಬಿಎಂಆರ್‌ಸಿಎಲ್ ಮೂಲಗಳು ತಿಳಿಸಿವೆ.

ಫೆಬ್ರವರಿ 8 ರಂದು, ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಅಧಿಕಾರಿಗಳು ಪ್ರಯಾಣ ದರವನ್ನು ಸುಮಾರು ಶೇ. 100 ರಷ್ಟು ಹೆಚ್ಚಿಸಿದ್ದರು. ಇದರ ಜೊತೆಗೆ, ಬಿಎಂಆರ್‌ಸಿಎಲ್ 'ಪೀಕ್ ಅವರ್' ಸಮಯದಲ್ಲಿ ಶೇ. 5 ರಷ್ಟು ಹೆಚ್ಚುವರಿ ಶುಲ್ಕ ವಿಧಿಸಲು ಪ್ರಾರಂಭಿಸಿತ್ತು. ದರ ಏರಿಕೆ ಜಾರಿಗೆ ಬಂದ ದಿನದಿಂದ ಮೆಟ್ರೋ ರೈಲು ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಕುಸಿತ ಕಂಡು ಬಂದಿದ್ದು, ಹತ್ತು ದಿನಗಳ ನಂತರ, ಪ್ರಯಾಣಿಕರ ಸಂಖ್ಯೆ ದಿನಕ್ಕೆ 6.3 ಲಕ್ಷಕ್ಕೆ ಇಳಿಕೆಯಾಗಿದೆ ಎನ್ನಲಾಗಿದೆ.

ದರ ಹೆಚ್ಚಳದಿಂದ ನಿರೀಕ್ಷಿತ ಆದಾಯ ಕುಸಿತ

"ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಸುಮಾರು 2.3 ಲಕ್ಷ ಇಳಿಕೆಯಾಗಿದ್ದು, ಈ ದರ ಹೆಚ್ಚಳದಿಂದ ನಿರೀಕ್ಷಿತ ಆದಾಯವನ್ನು ಸಾಧಿಸಲಾಗಿಲ್ಲ ಎನ್ನಲಾಗಿದೆ. ಫೆಬ್ರವರಿ 9 ರಂದು ಹೆಚ್ಚಳ ಜಾರಿಗೆ ಬರುವ ಮೊದಲು ಬಿಎಂಆರ್ ಸಿಎಲ್ ಗೆ ಇದ್ದ ಆದಾಯಕ್ಕೆ ಹೋಲಿಸಿದರೆ ಹಾಲಿ ಅಂದರೆ ಟಿಕೆಟ್ ದರ ಹೆಚ್ಚಳದ ಬಳಿಕದ ಆದಾಯ ಕಡಿಮೆಯಾಗಿದೆ. ಬಿಎಂಆರ್‌ಸಿಎಲ್ ಕೆಲವು ವಿಭಾಗಗಳಲ್ಲಿ ಶೇ. 100 ಕ್ಕಿಂತ ಹೆಚ್ಚು ಬದಲಾಗಿ ಶೇ. 71 ರಷ್ಟು ಮೆಟ್ರೋ ರೈಲು ದರ ಹೆಚ್ಚಳಕ್ಕೆ ಮಿತಿ ಹೇರಿದ್ದರೂ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮತ್ತೆ ಪರಿಶೀಲನಾ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಪ್ರವೇಶಿಸಿ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ. ಮಹೇಶ್ವರ ರಾವ್ ಅವರಿಗೆ ಕೆಲವು ವಿಭಾಗಗಳಲ್ಲಿ ದರ ಏರಿಕೆ ಶೇ. 100 ಕ್ಕಿಂತ ಹೆಚ್ಚಾಗಿದ್ದರಿಂದ ಅವರ ನಿರ್ಧಾರವನ್ನು ಮರುಪರಿಶೀಲಿಸುವಂತೆ ನಿರ್ದೇಶಿಸಿದ ನಂತರ ಬಿಎಂಆರ್‌ಸಿಎಲ್ ತನ್ನ ದರ ಏರಿಕೆಯನ್ನು ಮರುಪರಿಶೀಲಿಸಲು ನಿರ್ಧರಿಸಿತ್ತು. ಇದೀಗ ಮೆಟ್ರೋ ರೈಲು ಅಧಿಕಾರಿಗಳು ಮಾರ್ಚ್ 1 ರಂದು ದರ ಏರಿಕೆಯ ಪರಿಣಾಮದ ಕುರಿತು ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಯಾಣಿಕರ ಮೇರೆ ಪರಿಣಾಮ

ಫೆಬ್ರವರಿ 9 ರಂದು ಪ್ರಯಾಣ ದರ ಏರಿಕೆ ಮಾಡಿದ ನಂತರ ಮೆಟ್ರೋ ಪ್ರಯಾಣ ದರ ಏರಿಕೆಯಿಂದ ಪ್ರಯಾಣಿಕರ ಮೇಲೆ ಪರಿಣಾಮ ಬೀರಿದೆ ಎಂದು ಬಿಜೆಪಿ ಸಂಸದ ಪಿ.ಸಿ. ಮೋಹನ್ ಮಂಗಳವಾರ ಹೇಳಿದ್ದಾರೆ. "ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತವು ಬೆಂಗಳೂರು ಮೆಟ್ರೋಗೆ ತೀವ್ರ ಹಾನಿಯನ್ನುಂಟುಮಾಡಿದೆ, ಫೆಬ್ರವರಿ 9 ರಂದು ಪ್ರಯಾಣ ದರ ಏರಿಕೆ ಮಾಡಿದ ನಂತರ ಪ್ರಯಾಣಿಕರ ಸಂಖ್ಯೆ ಕುಸಿತವಾಗಿದೆ" ಎಂದು ಮೋಹನ್ ‘X' ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT