ಕೆ.ಎಚ್ ಮುನಿಯಪ್ಪ 
ರಾಜ್ಯ

BPL ಕಾರ್ಡ್ ಫಲಾನುಭವಿಗಳಿಗೆ ಇನ್ಮುಂದೆ ಹಣದ ಬದಲು ಅಕ್ಕಿ ವಿತರಣೆ: ಆಹಾರ ಸಚಿವ ಮುನಿಯಪ್ಪ ಹೇಳಿಕೆ

ಅನ್ಯಭಾಗ್ಯ ಯೋಜನೆ ಅಡಿ ಬಿಪಿಎಲ್‌ ಕಾರ್ಡ್‌ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್‌ ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿತ್ತು.

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯದಡಿ ಫಲಾನುಭವಿಗಳಿಗೆ ನೀಡುತ್ತಿದ್ದ ಹಣದ ಬದಲಿಗೆ ಅಕ್ಕಿಯನ್ನೇ ಕೊಡಲು ಸರ್ಕಾರ ತೀರ್ಮಾನ ಮಾಡಿದೆ.

ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಿರುವ ಹಿನ್ನೆಲೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯನ್ನು ಒಎಂಎಸ್‌ಎಸ್‌ ಯೋಜನೆ ಅಡಿಯಲ್ಲಿ ಖರೀದಿಸಿ ಈ ತಿಂಗಳಿನಿಂದಲೇ ಅಕ್ಕಿ ವಿತರಿಸಲು ತೀರ್ಮಾನಿಸಿದ ಎಂದು ಹೇಳಿದ್ದಾರೆ.

ಅನ್ನಭಾಗ್ಯ ಯೋಜನೆ ಅಡಿ ಬಿಪಿಎಲ್‌ ಕಾರ್ಡ್‌ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್‌ ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿತ್ತು. ನಂತರದ ದಿನಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಅಕ್ಕಿ ಲಭ್ಯವಾಗದ ಕಾರಣ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಕೊಟ್ಟು, ಉಳಿದ 5 ಕೆಜಿ ಅಕ್ಕಿ ಬದಲಿಗೆ 170 ರೂ. ನೀಡಲಾಗುತ್ತಿತ್ತು.

‘ಅನ್ನಭಾಗ್ಯ’ ಯೋಜನೆಯಡಿ ಕೆಲ ಅಂತ್ಯೋದಯ ಮತ್ತು ಬಿಪಿಎಲ್‌ ಕಾರ್ಡ್‌ದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣ ಬ್ಯಾಂಕ್‌ ಖಾತೆಗೆ ಕಳೆದ ಮೂರು ತಿಂಗಳಿನಿಂದ ಜಮೆಯಾಗಿಲ್ಲ. ಇದು ಫಲಾನುಭವಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೆಲ ಫಲಾನುಭವಿಗಳಿಗೆ ಡಿಸೆಂಬರ್‌ ತಿಂಗಳ ಹಣ ಜನವರಿ ತಿಂಗಳಲ್ಲಿ ಖಾತೆಗಳಿಗೆ ಸಂದಾಯವಾಗಿದೆ. ಆದರೆ, ಹಲವರಿಗೆ ಮೂರು ತಿಂಗಳಿನಿಂದ ಡಿಬಿಟಿ ಮೂಲಕ ಹಣ ಬಂದಿಲ್ಲ. ಅನ್ನಭಾಗ್ಯದ ಹಣಕ್ಕಾಗಿ ಕಾದು ಕಾದು ಬೇಸರಗೊಂಡಿರುವ ಹಲವು ಫಲಾನುಭವಿ ಮಹಿಳೆಯರು ಆಹಾರ ಇಲಾಖೆಯ ನಿರ್ಲಕ್ಷ್ಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿಎಲ್‌ಪಿ ಸಭೆಗೂ ಮುನ್ನ ರಾಜ್ಯಪಾಲರ ಭೇಟಿಯಾದ DK Shivakumar; ಮುಖ್ಯಮಂತ್ರಿಯಾಗಿ ಜೂನ್ 3ರಂದು ಪ್ರಮಾಣವಚನ?

ಜೂನ್‌ನಲ್ಲಿ ಸಂಪುಟ ಪುನಾರಚನೆ: ಡಜನ್‌ಗೂ ಹೆಚ್ಚು ಸಚಿವರಿಗೆ ಕೊಕ್; ಕೇಂದ್ರ ಸಚಿವರೊಬ್ಬರಿಗೆ ಕರ್ನಾಟಕ BJP ಅಧ್ಯಕ್ಷ ಹುದ್ದೆ!

Body-Line Bowling: GT ಹೆಣೆದ ಚಕ್ರವ್ಯೂಹ, ಹೋರಾಡಿದ Vaibhav Sooryavanshi, ಗುಜರಾತ್ ಬೌಲರ್ ಗಳ ವಿರುದ್ಧ ಇರ್ಫಾನ್ ಪಠಾಣ್ ತೀವ್ರ ಅಸಮಾಧಾನ!

ಅಜ್ಜಯ್ಯನ ಅನುಯಾಯಿ ಡಿಕೆ ಶಿವಕುಮಾರ್ ಲಿಂಗಾಯತ ಸಮುದಾಯಕ್ಕೆ DCM ಹುದ್ದೆ ನೀಡಲಿ: ಮಹಾಸಭಾ ಒತ್ತಾಯ

ಸಿಎಲ್‌ಪಿ ಸಭೆಗೂ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿದ ಶಿವಕುಮಾರ್

SCROLL FOR NEXT