ಸಿಎಂ ಸಿದ್ದರಾಮಯ್ಯ 
ರಾಜ್ಯ

MUDA case: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಲೋಕಾಯುಕ್ತ ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆಗೆ ಸಿದ್ಧತೆ!

ಈ ಸಂಬಂಧ ಲೋಕಾಯುಕ್ತ ಪೊಲೀಸರು ದೂರುದಾರ ಸ್ನೇಹಮಯಿ ಕೃಷ್ಣಗೆ ನೋಟಿಸ್ ನೀಡಿದ್ದು, ಅದರಲ್ಲಿ ಸಾಕ್ಷ್ಯಾಧಾರ ಗಳ ಕೊರತೆ ಇದೆ ಎಂದು ಹೇಳಲಾಗಿದೆ.

ಮೈಸೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಬಿರುಗಾಳಿ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

ಈ ಸಂಬಂಧ ಲೋಕಾಯುಕ್ತ ಪೊಲೀಸರು ದೂರುದಾರ ಸ್ನೇಹಮಯಿ ಕೃಷ್ಣಗೆ ನೋಟಿಸ್ ನೀಡಿದ್ದು, ಅದರಲ್ಲಿ ಸಾಕ್ಷ್ಯಾಧಾರ ಗಳ ಕೊರತೆ ಇದೆ ಎಂದು ಹೇಳಿದ್ದು, ಎಲ್ಲ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲ ಎಂದು ತಿಳಿಸಿದೆ.

ಲೋಕಾಯುಕ್ತ ಎಸ್ಪಿ ಉದೇಶ್‌ ಅವರು, ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್‌ ನೀಡಿದ್ದು, ಇದರಲ್ಲಿ ನೀವು ನೀಡಿದ ದೂರಿನ ಸಂಬಂಧ A1 ಆರೋಪಿಯಿಂದ A 4 ಆರೋಪಿವರೆಗೆ ವಿಚಾರಣೆ ನಡೆಸಲಾಗಿದೆ. ಇದು ಸಿವಿಲ್ ಸ್ವರೂಪ್ಪದ್ದೂ, ತನಿಕೆ ನಡೆಸಲು ತಕ್ಕುದಲ್ಲ, ಕಾನೂನಿನ ತಪ್ಪು ತಿಳುವಳಿಕೆಯಿಂದ ಕೂಡಿದೆ. ಅಲ್ಲದೆ ದೂರಿನಲ್ಲಿ ವಜಾ ಮಾಡಿದ ಪ್ರಕರಣಗಳು ಸಹ ಇದೆ. ಸಾಕಷ್ಟು ಸಾಕ್ಷ್ಯಾಧಾರ ಗಳ ಕೊರೆತೆ ಇದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗುತ್ತಿದೆ. ಆದ್ದರಿಂದ ಇದಕ್ಕೆ ವಿರೋಧವಿದ್ದರೆ ನೋಟಿಸ್ ತಲುಪಿದ ಒಂದು ವಾರದೊಳಗೆ ನ್ಯಾಯಾಧೀಶರಿಗೆ ತಿಳಿಸಿ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.

ಆರ್‌ಟಿಐ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ, ಬೆಂಗಳೂರಿನ ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 25 ರಂದು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸುವಂತೆ ನಿರ್ದೇಶಿಸಿತ್ತು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ ಅಡಿ ಜಾಗ ಇತ್ತು. ಅದರ ಬದಲಿಗೆ ಮುಡಾ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ಕೊಟ್ಟಿದ್ದಾರೆ ಇದು ಚರ್ಚೆಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬಾಮೈದ ಜಾಗ ಕೊಟ್ಟಿದ್ದ ಬಗ್ಗೆ ಸ್ಪಷ್ಟನೆಯನ್ನೂ ನೀಡಿದ್ದಾರೆ. ಆದರೂ ಸಿಎಂ ಪತ್ನಿಗೆ ವಿಜಯನಗರದಲ್ಲೇ ಏಕೆ ಸೈಟ್ ಕೊಟ್ಟರು ಎಂಬ ಪ್ರಶ್ನೆ ಮೂಡಿದೆ. ಇದೇ ಪ್ರಶ್ನೆ ಈಗ ಮುಡಾದ ನಡೆ ಮೇಲೆ ಅನುಮಾನ ಬರುವಂತೆ ಮಾಡಿತ್ತು.

ಲೋಕಾಯುಕ್ತ ನೋಟಿಸ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT