ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೊಪ್ಪಳ: ತುಂಗಭದ್ರಾ ನದಿಗೆ ಜಿಗಿದ ಹೈದರಾಬಾದ್ ಮೂಲದ ವೈದ್ಯೆ ನೀರುಪಾಲು; ಕೊನೆಯ ಕ್ಷಣದ ವಿಡಿಯೋ ವೈರಲ್!

ಸ್ನೇಹಿತರ ಜೊತೆ ಈಜಲು ಹೋಗಿದ್ದ ವೈದ್ಯೆಯೊಬ್ಬಳು 20 ಅಡಿ ಎತ್ತರದಿಂದ ತುಂಗಭದ್ರಾ ನದಿಗೆ ಜಿಗಿದಿದ್ದು ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾಗಿದ್ದಾರೆ.

ವೈದ್ಯೆ ನೀರಿಗೆ ಜಿಗಿದ ಕ್ಷಣ
Vishwanath S
Updated On : 19 Feb 2025, 4:21 pm

ಕೊಪ್ಪಳ: ಸ್ನೇಹಿತರ ಜೊತೆ ಈಜಲು ಹೋಗಿದ್ದ ವೈದ್ಯೆಯೊಬ್ಬಳು 20 ಅಡಿ ಎತ್ತರದಿಂದ ತುಂಗಭದ್ರಾ ನದಿಗೆ ಜಿಗಿದಿದ್ದು ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದ ಬಳಿ ನದಿಗೆ ಹೈದರಾಬಾದ್ ಮೂಲದ 26 ವರ್ಷದ ಅನನ್ಯರಾವ್​ ಜಿಗಿದಿದ್ದಳು. ಆದರೆ ನೀರಿನ ಹರಿವು ಹೆಚ್ಚಾಗಿದ್ದರಿಂದ ಈಜಲು ಸಾಧ್ಯವಾಗದೇ ಮುಳುಗಿದ್ದಾಳೆ. ಹೈದರಬಾದ್​ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅನನ್ಯರಾವ್​, ನಿನ್ನೆ ಮೂವರು ಸ್ನೇಹಿತರ ಜತೆ ಪ್ರವಾಸಕ್ಕೆ ಬಂದಿದ್ದು, ಇಂದು ಬೆಳಗ್ಗೆ ನದಿಗೆ ಈಜಲು ತೆರಳಿದ್ದರು.

ರೀಲ್ಸ್ ಗಾಗಿ ವಿಡಿಯೋ ಮಾಡುತ್ತಿದ್ದರು ಎನ್ನಲಾಗಿದೆ. ದೂರದಲ್ಲಿ ನಿಂತಿದ್ದ ವ್ಯಕ್ತಿಯೋರ್ವ ಒಂದು, ಎರಡು, ಮೂರು ಜಂಪ್ ಎಂದು ಹೇಳಿದ ತಕ್ಷಣ ಅನನ್ಯರಾವ್ ನದಿಗೆ ಜಿಗಿದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ವೈದ್ಯೆಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments